ಹೊರ ರಾಜ್ಯದವರ ಮೇಲೆ ನಿಗಾ ಇಡಿ
Team Udayavani, May 11, 2020, 4:58 PM IST
ಚಳ್ಳಕೆರೆ: ಹೊರ ರಾಜ್ಯದವರನ್ನು ಕ್ವಾರಂಟೈನ್ ಮಾಡಲಾಗಿರುವ ಬಿಸಿಎಂ ಹಾಸ್ಟೆಲ್.
ಚಳ್ಳಕೆರೆ: ತಾಲೂಕು ಆಡಳಿತ, ಪೊಲೀಸ್ ಹಾಗೂ ಆರೋಗ್ಯ ಇಲಾಖೆಯ ನಿರಂತರ ಪರಿಶ್ರಮದ ನಡುವೆಯೂ ಕೋವಿಡ್ ವೈರಾಣುವಿನ ಸಂಪೂರ್ಣ ನಿಯಂತ್ರಣ ಸಾಧ್ಯವಾಗಲಿಲ್ಲ. ಹಾಗಾಗಿ ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಜವಾಬ್ದಾರಿಯಿಂದ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕೆಂದು ಶಾಸಕ ಟಿ. ರಘುಮೂರ್ತಿಸೂಚಿಸಿದರು.
ಭಾನುವಾರ ತಾಲೂಕು ಕಚೇರಿ ಆವರಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು ಇತ್ತೀಚೆಗಷ್ಟೇ ಜಿಲ್ಲೆಯಲ್ಲಿ ಆರು ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಹೊರ ರಾಜ್ಯದಿಂದ ಆಗಮಿಸುವ ವ್ಯಕ್ತಿಗಳ ಮೇಲೆ ನಿಗಾ ಇಡಬೇಕು. ಯಾರೇ ಆಗಮಿಸಿದರೂ ಕಡ್ಡಾಯವಾಗಿ ಅವರನ್ನು ಕ್ವಾರಂಟೈನ್‌ನಲ್ಲಿಡಬೇಕು. ಯಾವುದೇ ಸಂದರ್ಭದಲ್ಲೂ ಅಧಿಕಾರಿಗಳು ನಿಯಮಗಳ ಸಡಿಲಿಕೆಗೆ ಮುಂದಾಗಬಾರದು ಎಂದರು.
ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ ಮಾತನಾಡಿ, ಜಿಲ್ಲಾ ಧಿಕಾರಿಗಳ ನಿರ್ದೇಶನದಂತೆ ನಗರದ ಹೊರಭಾಗದಲ್ಲಿ ಹೊಸದಾಗಿ 10 ಕ್ವಾರಂಟೈನ್ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಹೇಳಿದರು. ತಾಲೂಕು ಆರೋಗ್ಯಾಧಿಕಾರಿ ಡಾ| ಎನ್. ಪ್ರೇಮಸುಧಾ ಮಾತನಾಡಿ, ತಾಲೂಕಿನ ಗಡಿ ಭಾಗದಲ್ಲಿ ವೈದ್ಯಕೀಯ ಸಿಬ್ಬಂದಿ ಅಪರಿಚಿತ ವ್ಯಕ್ತಿಗಳ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ ಎಂದರು. ತಾಪಂ ಇಒ ಡಾ| ಶ್ರೀಧರ್ ಬಾರಕೇರ್, ಪೌರಾಯುಕ್ತ ಪಾಲಯ್ಯ, ವಿವಿಧ ಆರೋಗ್ಯ ಕೇಂದ್ರಗಳ ವೈದ್ಯರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.