ಪಾಸಿಟಿವ್-ನೆಗೆಟಿವ್ ಟು ಪಾಸಿಟಿವ್: ಗುಣಮುಖನಾದ ವ್ಯಕ್ತಿಗೆ ಮತ್ತೆ ತಗುಲಿದ ಕೋವಿಡ್ ಸೋಂಕು
Team Udayavani, May 11, 2020, 11:00 PM IST
ಬೆಳಗಾವಿ: ದೆಹಲಿಯ ನಿಜಾಮುದ್ದಿನ್ ತಬ್ಲೀಘಿ ಜಮಾತ್ ಮರ್ಕಜ್‌ನ ವ್ಯಕ್ತಿಯ ದ್ವಿತೀಯ ಸಂಪರ್ಕದಿಂದ ಕೋವಿಡ್ ಸೋಂಕು ತಗುಲಿದ್ದ ಗೋವಾದ 50 ವರ್ಷದ (ಪಿ-298) ಗುಣಮುಖನಾಗಿ ಚೇತರಿಸಿಕೊಳ್ಳುವಷ್ಟರಲ್ಲಿ ಈಗ ಮತ್ತೆ ಮರು ಸೋಂಕು ದೃಢಪಟ್ಟಿದ್ದು, ಆತಂಕಕ್ಕೆ ಕಾರಣವಾಗಿದೆ.
ರಾಯಬಾಗ ತಾಲೂಕಿನ ಕುಡಚಿಯಲ್ಲಿ ಮೊದಲನೇ ಸಲ ಸೋಂಕು ತಗಲುವ ಮುನ್ನ ಒಂದು ತಿಂಗಳುಗಳ ಕಾಲ ನೆಲೆಸಿದ್ದ ಗೋವಾ ಮೂಲದ ವ್ಯಕ್ತಿಗೆ ದ್ವಿತೀಯ ಸಂಪರ್ಕದಿಂದ ಪಾಸಿಟಿವ್ ಬಂದಿತ್ತು.
ಈಗ ಈ ವ್ಯಕ್ತಿಯಲ್ಲಿ ಮರು ಸೋಂಕು ದೃಢಪಟ್ಟಿದೆ. ಸೋಮವಾರ ಬಿಡುಗಡೆಯಾದ ಆರೋಗ್ಯ ಇಲಾಖೆಯ ಜಿಲ್ಲಾವಾರು ಸಮಗ್ರ ವರದಿಯಲ್ಲಿ ಇದನ್ನು ಉಲ್ಲೇಖಿಸಲಾಗಿದೆ.
ನಿಜಾಮುದ್ದಿನ್ ತಬ್ಲೀಘಿ ಪಿ-149 ಸಂಪರ್ಕದಿಂದ ಪಿ-245ಗೆ ತಗುಲಿದ್ದ ಸೋಂಕು ದ್ವಿತೀಯ ಸಂಪರ್ಕವಾಗಿ ಈ ವ್ಯಕ್ತಿ ಪಿ-298ಗೆ ಪಾಸಿಟಿವ್ ಬಂದಿತ್ತು. ಏಪ್ರೀಲ್ 6ರಂದು ಸೋಂಕು ದೃಢಪಟ್ಟಿದ್ದ ಈ ವ್ಯಕ್ತಿಗೆ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
14 ದಿನಗಳ ಬಳಿಕ ಮತ್ತೆ ಏ. 28ರಂದು ಹಾಗೂ 29ರಂದು ಎರಡು ಗಂಟಲು ದ್ರವಗಳ ಮಾದರಿ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದ್ದರಿಂದ ನಾನ್ ಕೋವಿಡ್ ರೋಗಿ ಎಂದು ವಾರ್ಡ್ ನಿಂದ ಸ್ಥಳಾಂತರಿಸಿ ಕ್ವಾರಂಟೈನ್ ಮಾಡಲಾಗಿತ್ತು.
ಕೆಲವು ದಿನಗಳ ನಂತರ ಈ ವ್ಯಕ್ತಿಗೆ ಮತ್ತೆ ಕೆಲವು ಕೋವಿಡ್ ಲಕ್ಷಣಗಳು ಕಂಡು ಬಂದಿದ್ದರಿಂದ ಹಾಗೂ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದರಿಂದ ಗಂಟಲು ದ್ರವ ಮಾದರಿಯನ್ನು ಮತ್ತೆ ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಗಿತ್ತು.
ಮೇ 5ರಂದು ಮೂರು ಪ್ರಯೋಗಾಲಯಳಿಗೆ ಪ್ರತ್ಯೇಕವಾಗಿ ಗಂಟಲು ದ್ರವದ ಮಾದರಿ ಕಳುಹಿಸಲಾಗಿತ್ತು. ಮೂರರ ಪೈಕಿ ಎರಡು ನೆಗೆಟಿವ್ ಒಂದು ಪಾಸಿಟಿವ್ ಬಂದಿದೆ. ಆದರೆ ಮೇ 12ರಂದು ಮತ್ತೊಮ್ಮೆ ಗಂಟಲು ದ್ರವ ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಗುವುದು ಎಂದು ಆಸ್ಪತ್ರೆಯ ನೋಡಲ್ ಅಧಿಕಾರಿ ಡಾ. ದಂಡಗಿ ಉದಯವಾಣಿಗೆ ತಿಳಿಸಿದ್ದಾರೆ.
ಗುಣಮುಖನಾಗಿ ನೆಗೆಟಿವ್ ವರದಿ ಬಂದು ವಾರ್ಡ್ ನಿಂದ ಬಿಡುಗಡೆಯಾಗಿ ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿಗೆ ಈಗ ಮತ್ತೊಮ್ಮೆ ಪಾಸಿಟಿವ್ ಬಂದಿರುವುದು ಇದೀಗ ಅತಂಕಕ್ಕೆ ಕಾರಣವಾಗಿದೆ.
ಸೋಂಕಿತ ವ್ಯಕ್ತಿ ಕ್ವಾರಂಟೈನ್‌ನಲ್ಲಿ ಇದ್ದರೂ ಆಸ್ಪತ್ರೆಯ ಕೆಲವರ ಸಂಪರ್ಕದಲ್ಲಿ ಬಂದಿದ್ದನು. ಸುರಕ್ಷತಾ ಕ್ರಮ ಕೈಗೊಳ್ಳದೇ ಈತನ ಸಂಪರ್ಕಕಕ್ಕೆ ಯಾರಾದರೂ ಬಂದಿದ್ದಾರೆಯೇ ಎಂಬುದನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.
ಈತ ಮೂಲತಃ ಗೋವಾದವನಾಗಿದ್ದು, ಸೋಂಕಿನಿಂದ ಗುಣಮುಖನಾದ ಕೂಡಲೇ ಈತನನ್ನು ಊರಿಗೆ ಕಳುಹಿಸಿ ಕೊಟ್ಟಿರಲಿಲ್ಲ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 116 ಜನ ಸೋಂಕಿತರ ಪೈಕಿ 36 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಹಿರೇಬಾಗೇವಾಡಿಯ ವೃದ್ಧೆ ಮೃತಪಟ್ಟಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.