ವಲಯ ವಿದಾಯ? ಕಂಟೈನ್‌ಮೆಂಟ್‌ ಝೋನ್‌ಗಳಲ್ಲಿ ಮಾತ್ರ ಬಿಗಿ

ರಾಜ್ಯದ ಪ್ರಸ್ತಾವನೆಗೆ ಪ್ರಧಾನಿ ಅಸ್ತು

Team Udayavani, May 12, 2020, 6:00 AM IST

ವಲಯ ವಿದಾಯ? ಕಂಟೈನ್‌ಮೆಂಟ್‌ ಝೋನ್‌ಗಳಲ್ಲಿ ಮಾತ್ರ ಬಿಗಿ

ಬೆಂಗಳೂರು/ ಹೊಸದಿಲ್ಲಿ: ರಾಜ್ಯದಲ್ಲಿ ಲಾಕ್‌ಡೌನ್‌ ಇನ್ನಷ್ಟು ಸಡಿಲಿಕೆ ಹೆಚ್ಚು ಕಡಿಮೆ ನಿಶ್ಚಿತವಾಗಿದೆ. ಪ್ರಧಾನಿ ಮೋದಿ ಅವರ ಜತೆಗೆ ಸೋಮವಾರ ರಾತ್ರಿ ನಡೆದ ವೀಡಿಯೋ ಸಂವಾದದಲ್ಲಿ ರಾಜ್ಯ ಸರಕಾರವು ಜಿಲ್ಲಾವಾರು ಮಟ್ಟದ ವಲಯ ವರ್ಗೀಕರಣ ಬೇಡ ಎಂಬ ಪ್ರಸ್ತಾವನೆ ಮಂಡಿಸಿತ್ತು. ಹೆಚ್ಚು ಪ್ರಕರಣಗಳು ಪತ್ತೆಯಾಗುವ ಪ್ರದೇಶಗಳನ್ನು ಮಾತ್ರ ಕಂಟೈನ್‌ಮೆಂಟ್‌ ವಲಯವೆಂದು ಗುರುತಿಸಿ, ಆ ಸೀಮಿತ ಪ್ರದೇಶದಲ್ಲಿ ಮಾತ್ರ ಲಾಕ್‌ಡೌನ್‌ ಜಾರಿ ಮಾಡುವ ಬಗ್ಗೆ ಸಿಎಂ ಯಡಿಯೂರಪ್ಪ ಅವರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಇದಕ್ಕೆ ಪ್ರಧಾನಿ ಸಮ್ಮತಿ ಸೂಚಿಸಿದ್ದು, ಸೀಮಿತ ಪ್ರದೇಶದಲ್ಲಿ ಲಾಕ್‌ಡೌನ್‌ ಜಾರಿ ಕಟ್ಟುನಿಟ್ಟಾಗಿ ಆಗಬೇಕು ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.

ರಾಜ್ಯದಲ್ಲಿ ಪರಿಸ್ಥಿತಿ ನೋಡಿಕೊಂಡು ಸರಕಾರಿ ಮತ್ತು ಖಾಸಗಿ ಸಾರಿಗೆ ಸಹಿತ ಪೂರ್ಣ ಪ್ರಮಾಣದ ವಾಣಿಜ್ಯ ಚಟುವಟಿಕೆ ಆರಂಭಿಸಲು ಸಮ್ಮತಿಸಿದ್ದಾರೆ ಎನ್ನಲಾಗಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಹೊಸ ಜೀವನಶೈಲಿ ಅಳವಡಿಸಿ ಕೊಳ್ಳುವಂತೆ ಜನರಲ್ಲಿ ಜಾಗೃತಿ ಮೂಡಿಸಿ ಮನವೊಲಿಸುವಂತೆ ಪ್ರಧಾನಿ ಮೋದಿ ಸಿಎಂಗೆ ಸಲಹೆ ನೀಡಿದ್ದಾರೆ.

ಕೋವಿಡ್-19 ಕುರಿತು ಜನರಲ್ಲಿ ಇರುವ ಪೂರ್ವಗ್ರಹ ನಿವಾರಿಸಿ ಇದು ಇತರ ಕಾಯಿಲೆಗಳಂತೆಯೇ ಒಂದು ವೈರಲ್‌ ಸೋಂಕು; ದೀರ್ಘ‌ಕಾಲದ ಇತರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಇದರಿಂದ ಅಪಾಯ ಹೆಚ್ಚು ಎಂಬುದನ್ನು ಮನದಟ್ಟು ಮಾಡಿಕೊಡಬೇಕು ಎಂದು ಸಿಎಂ ಬಿಎಸ್‌ವೈಗೆ ಮೋದಿ ತಿಳಿಸಿದರು. ರಾಜ್ಯದಲ್ಲಿ ಕೋವಿಡ್-19ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿವರಿಸಿದರು.

ರಾಜ್ಯದಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದ್ದು, ಸೋಂಕು ಪತ್ತೆ, ಸೋಂಕು ಪೀಡಿತರ ಮೇಲೆ ನಿಗಾ, ಪರೀಕ್ಷೆ ಮತ್ತು ಚಿಕಿತ್ಸೆಗೆ ಒತ್ತು ನೀಡಲಾಗಿದೆ. ರಾಜ್ಯದಲ್ಲಿ ಪ್ರಸ್ತುತ 35 ಪ್ರಯೋಗಾಲಯಗಳಲ್ಲಿ ದಿನಕ್ಕೆ 6 ಸಾವಿರ ಪರೀಕ್ಷೆಗಳನ್ನು ನಡೆಸುವ ಸಾಮರ್ಥ್ಯವಿದೆ. ರಾಜ್ಯದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗಿದ್ದು, ಈ ತಿಂಗಳ ಅಂತ್ಯದಲ್ಲಿ 60 ಪ್ರಯೋಗಾಲಯಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ ಎಂದರು.

ರಾಜೀವ್‌ ಗಾಂಧಿ ಆರೋಗ್ಯ ವಿ.ವಿ. ವತಿಯಿಂದ 93,723 ಆರೋಗ್ಯ ಕಾರ್ಯಕರ್ತರಿಗೆ ತರಬೇತಿ ನೀಡಲಾಗಿದೆ. 58 ಲಕ್ಷಕ್ಕೂ ಹೆಚ್ಚು ಜನರು ಆರೋಗ್ಯ ಸೇತು ಆ್ಯಪ್‌ ಡೌನ್‌ ಲೋಡ್‌ ಮಾಡಿಕೊಂಡಿದ್ದಾರೆ ಎಂದು ಸಿಎಂ ತಿಳಿಸಿದರು.

ರಾಜ್ಯದ ಪ್ರಸ್ತಾವನೆಗಳು
-ಜಿಲ್ಲಾವಾರು ಮಟ್ಟದಲ್ಲಿ ಬಣ್ಣವಾರು ವಲಯ ಬೇಡ
-ಕಂಟೈನ್‌ಮೆಂಟ್‌ ವಲಯಗಳಲ್ಲಿ ಕಟ್ಟುನಿಟ್ಟಿನ ನಿರ್ಬಂಧ
-ಇತರೆಡೆ ವಾಣಿಜ್ಯ ಚಟುವಟಿಕೆ, ಸಾರ್ವಜನಿಕ ಸಾರಿಗೆಗೆ ಅನುಮತಿ
-ಮೇ ಅಂತ್ಯದ ವರೆಗೆ ರಾಷ್ಟ್ರೀಯ- ಅಂತಾರಾಷ್ಟ್ರೀಯ ಪ್ರಯಾಣ ಬೇಡ
-ಅಂತಾರಾಷ್ಟ್ರೀಯ, ಅಂತಾರಾಜ್ಯ ಪ್ರಯಾಣಿಕರಿಗೆ ಕಡ್ಡಾಯ ಕ್ವಾರಂಟೈನ್‌
-ಖಾಸಗಿ ಆಸ್ಪತ್ರೆ, ಚಿಕಿತ್ಸಾಲಯಗಳು ಕೋವಿಡ್-19ಚಿಕಿತ್ಸೆಗೆ ಆದೇಶ
-ಕೋವಿಡ್-19 ಪರೀಕ್ಷೆಗಳಿಗಾಗಿ ಸಮಗ್ರ ಮಾರ್ಗಸೂಚಿ
-ಕೋವಿಡ್-19 ಸೋಂಕು ಚಿಕಿತ್ಸೆಗೆ ಟೆಲಿ ಮೆಡಿಸಿನ್‌

ಮಾನವ ಸಹಜ ಗುಣ
ಸಾಂಕ್ರಾಮಿಕ ಸೋಂಕು ದೇಶವನ್ನೇ ವ್ಯಾಪಿಸಿರುವ ಇಂತಹ ಕಷ್ಟದ ಪರಿಸ್ಥಿತಿಯಲ್ಲಿ ತನ್ನ ಊರು, ಮನೆಗೆ ಹೋಗಬೇಕು ಎಂದು ಅನಿಸುವುದು ಮನುಷ್ಯ ಸಹಜ ಗುಣ. ಆದರೆ ಸಾರ್ವಜನಿಕರು, ವಲಸಿಗರು ಈಗ ಎಲ್ಲೆಲ್ಲಿ ಇದ್ದಾರೋ ಅಲ್ಲೇ ಇರುವಂತೆ ನೋಡಿಕೊಳ್ಳಲು ಸಿಎಂಗಳಿಗೆ ಪ್ರಧಾನಿ ಸಲಹೆ ನೀಡಿದರು.

ಸಭೆಯ ವೈಶಿಷ್ಟ್ಯಗಳು
ಪ್ರಧಾನಿ ನಡೆಸಿದ ಐದನೇ ಸಭೆ ಬರೋಬ್ಬರಿ ಆರು ತಾಸುಗಳ ಕಾಲ ಜರಗಿತು. ನಡುವೆ ಸಂಜೆ 6 ಗಂಟೆಗೆ 30 ನಿಮಿಷಗಳ ವಿರಾಮ ತೆಗೆದುಕೊಳ್ಳಲಾಗಿತ್ತು. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ತಮ್ಮ ಅಭಿಪ್ರಾಯ ಹಂಚಿಕೊಳ್ಳಲು, ಸಲಹೆ ನೀಡಲು ಅವಕಾಶ ಸಿಕ್ಕಿದ್ದು ಸೋಮವಾರದ ವೀಡಿಯೋ ಸಭೆಯ ವಿಶೇಷ.

ಕೆಲವು ವಿನಾಯಿತಿ ಮಾತ್ರ
ಲಾಕ್‌ಡೌನ್‌ ಸಡಿಲಿಕೆಗೆ ಒಪ್ಪದ ಮೋದಿ
ಹೊಸದಿಲ್ಲಿ: ಲಾಕ್‌ಡೌನ್‌ ಮೇ 17ರ ಅನಂತರವೂ ಮುಂದುವರಿಯುವುದು ಖಚಿತವಾಗಿದ್ದು, ಹೆಚ್ಚಿನ ವಿನಾಯಿತಿ ಸಿಗುವ ಸಾಧ್ಯತೆ ಇದೆ. ಲಾಕ್‌ಡೌನ್‌ ಸಂಪೂರ್ಣ ನಿವಾರಿಸುವ ವಿವಿಧ ಸಿಎಂಗಳ ಸಲಹೆಗೆ ಪ್ರಧಾನಿ ಮೋದಿ ಒಪ್ಪಿಗೆ ನೀಡಿಲ್ಲ.

ಒಂದೇ ಬಾರಿಗೆ ಲಾಕ್‌ಡೌನ್‌ ನಿವಾರಣೆ ಅಸಾಧ್ಯ. ಆರ್ಥಿಕ ಚಟುವಟಿಕೆ ಸ್ಥಗಿತವೂ ಸಾಧ್ಯವಿಲ್ಲ. ಹೀಗಾಗಿ ಮೇ 17ರ ಅನಂತರ ಆರ್ಥಿಕ ಚಟುವಟಿಕೆಗಳನ್ನು ಆರಂಭಿಸುವ ಬಗ್ಗೆ ಸಲಹೆ ನೀಡುವಂತೆ ಮೋದಿ ರಾಜ್ಯಗಳಿಗೆ ಮನವಿ ಮಾಡಿದ್ದು, ಮೇ 15ರ ಒಳಗೆ ಕಳುಹಿಸುವಂತೆ ಸೂಚಿಸಿದ್ದಾರೆ.

ಸಿಎಂಗಳ ಜತೆ ನಡೆದ ವೀಡಿಯೋ ಸಂವಾದದ ಬಳಿಕ ಮಾತನಾಡಿದ ಪ್ರಧಾನಿ, ಕೋವಿಡ್-19ನಿಯಂತ್ರಣದಲ್ಲಿ ರಾಜ್ಯಗಳ ಪರಿಶ್ರಮವನ್ನು ಶ್ಲಾಘಿಸಿದ್ದಾರೆ. ಕೋವಿಡ್-19 ಬಂದ ಬಳಿಕ ದೇಶದ ಜನರ ಜೀವನ ವಿಧಾನ ಬದಲಾಗಿದೆ. ಈಗ ನಾವು ಹೊಸ ಮಾದರಿಯ ತಂತ್ರಜ್ಞಾನವನ್ನು ಮೈಗೂಡಿಸಿಕೊಳ್ಳಬೇಕಾಗಿದೆ ಎಂದಿದ್ದಾರೆ.

ಲಾಕ್‌ಡೌನ್‌ ತೆರವು ಅಥವಾ ಹೆಚ್ಚಿನ ನಿರ್ಬಂಧ ಮುಂದುವರಿಕೆ ವಿಚಾರದಲ್ಲಿ ರಾಜ್ಯಗಳಿಗೆ ಹೆಚ್ಚಿನ ಅಧಿಕಾರ ಬೇಕು ಎಂಬ ಬಗ್ಗೆ ಹಲವಾರು ಸಿಎಂಗಳು ಬೇಡಿಕೆ ಇರಿಸಿದ್ದಾರೆ. ಕೇಂದ್ರ ಸರಕಾರ ಈ ಬೇಡಿಕೆಗೆ ಅಸ್ತು ಅನ್ನುವ ಸಾಧ್ಯತೆ ಇದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಸಮತೋಲನ ತಂತ್ರ
ಮುಂದಿನ ದಿನಗಳಲ್ಲಿ ಕೋವಿಡ್-19 ವಿರುದ್ಧ ಹೋರಾಡಲು “ಸಮತೋಲನ ತಂತ್ರ’ ಅಗತ್ಯವಿದೆ ಎಂದು ಮೋದಿ ಹೇಳಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲ ರಾಜ್ಯಗಳ ಸಲಹೆ ಮೇರೆಗೆ ಒಂದು ಸಾಮಾನ್ಯ ತಂತ್ರವನ್ನು ದೇಶದೆಲ್ಲೆಡೆ ಅನುಸರಿಸುವ ಅಗತ್ಯವಿದೆ ಎಂದಿದ್ದಾರೆ.

ಗ್ರಾಮ ಸುರಕ್ಷಿತವಾಗಿಸಿ
ಗ್ರಾಮಗಳಲ್ಲಿ ಸೋಂಕು ಹರಡದಂತೆ ತಡೆಗಟ್ಟುವುದೇ ಅತೀ ದೊಡ್ಡ ಸವಾಲು ಎಂದು ಹೇಳಿದ ಪ್ರಧಾನಿ, ಸರಕಾರವು ಲಾಕ್‌ಡೌನ್‌ ನಿರ್ಬಂಧಗಳನ್ನು ಸಡಿಲಿಸಿದ ಬಳಿಕ ಕೋವಿಡ್-19 ಗ್ರಾಮಗಳಿಗೆ ಮುತ್ತಿಗೆ ಹಾಕದಂತೆ ತಡೆಯಲು ಎಲ್ಲ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲ ರಾಜ್ಯಗಳ ಸಿಎಂಗಳಿಗೆ ತಿಳಿಸಿದರು.

ಟಾಪ್ ನ್ಯೂಸ್

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.