ಮಧ್ಯರಾತ್ರಿ ನಡುರಸ್ತೆಯಲ್ಲಿ ಅನುಮಾನಸ್ಪದ ಬ್ಯಾಗ್ ಪತ್ತೆ, ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ
Team Udayavani, May 12, 2020, 9:15 AM IST
ಬೆಳಗಾವಿ: ಇಲ್ಲಿಯ ಉದ್ಯಮಬಾಗ್ ರಸ್ತೆಯಲ್ಲಿ ನಡು ರಾತ್ರಿಯಲ್ಲಿ ಸಿಕ್ಕ ಅನುಮಾನಸ್ಪದ ಬ್ಯಾಗ್ ಆತಂಕ ಸೃಷ್ಟಿಸಿದ್ದು, ಬಾಂಬ್ ನಿಷ್ಕ್ರಿಯ ದಳದಿಂದ ಬ್ಯಾಗ್ ಪರಿಶೀಲಿಸಲಾಯಿತು.
ಉದ್ಯಮ ಬಾಗ್ ನ ಉತ್ಸವ ಹೊಟೇಲ್ ಬಳಿಯ ಪುರೋಹಿತ್ ಸ್ವೀಟ್ ಮಾರ್ಟ್ ಎದುರು ಯಾರೋ ಬ್ಯಾಗ್ ಬಿಟ್ಟು ಹೋಗಿದ್ದರು. ನೀಲಿ ಬಣ್ಣದ ಈ ಬ್ಯಾಗ್ ಆತಂಕ ಸೃಷ್ಟಿ ಆಗಿತ್ತು. ಮಧ್ಯಾಹ್ನದಿಂದ ಅಲ್ಲಿಯೇ ಈ ಬ್ಯಾಗ್ ಬಿದ್ದಿತ್ತು.
ಸೋಮವಾರ ರಾತ್ರಿ 12 ಗಂಟೆ ಸುಮಾರಿಗೆ ಪೊಲೀಸರಿಗೆ ವ್ಯಕ್ತಿಯೊಬ್ಬರು ಮಾಹಿತಿ ನೀಡಿದ್ದಾರೆ. ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಬಂದು ಬ್ಯಾಗ್ ಪರಿಶೀಲಿಸಿದಾಗ, ಅದರಲ್ಲಿ ಬಟ್ಟೆ-ಬರೆ, ಔಷಧ, ಇತರೆ ವಸ್ತುಗಳು ಇರುವುದು ಪತ್ತೆಯಾಗಿದೆ. ಅದರಲ್ಲಿ ಯಾವುದೇ ಸ್ಫೋಟಕ ಕಂಡು ಬರಲಿಲ್ಲ. ಹೀಗಾಗಿ ಜನರು ನಿಟ್ಟುಸಿರು ಬಿಡುವಂತಾಗಿದೆ.
ಉದ್ಯಮಬಾಗ್ ಸಿಪಿಐ ದಯಾನಂದ ನೇತೃತ್ವದಲ್ಲಿ ಮಧ್ಯರಾತ್ರಿ ಬ್ಯಾಗ್ ತೆರವುಗೊಳಿಸುವ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಬ್ಯಾಗ್ ಯಾರದ್ದು ಎಂಬುದನ್ನು ಶೋಧ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.