ಹುಲಿ ದಾಳಿ ಪ್ರದೇಶಕ್ಕೆ ಅರಣ್ಯ ಸಚಿವರ ಭೇಟಿ
Team Udayavani, May 12, 2020, 10:40 AM IST
ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ಹುಲಿ ದಾಳಿ ನಡೆಸುತ್ತಿರುವ ಕುಂದಕೆರೆ ವಲಯದ ಕಾಡಂಚಿನ ಕಡಬೂರು ಗ್ರಾಮಕ್ಕೆ ಅರಣ್ಯ ಸಚಿವ ಆನಂದ್ ಸಿಂಗ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಇತ್ತೀಚೆಗೆ 20ಕ್ಕೂ ಹೆಚ್ಚು ಹಸುಗಳನ್ನು ತಿಂದಿರುವ ಹುಲಿಯನ್ನು ಸೆರೆ ಹಿಡಿಯುವಂತೆ ರೈತರು ಒತ್ತಾಯಿಸಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಖುದ್ದು ಅರಣ್ಯ ಸಚಿವರೇ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿದರು.
ಕೂಡಲೇ ಹುಲಿಗಳ ಸೆರೆ ಹಿಡಿದು ರೈತರ ಜಾನುವಾರು ರಕ್ಷಣೆ ಮಾಡಬೇಕು. ರೈತ ಸಂಘದ ಸಂಪತ್ತು ಹಾಗೂ ಕಡಬೂರು ಮಂಜುನಾಥ್ ಮಾತನಾಡಿ, ಕಾಡಂಚಿನಲ್ಲಿ ಸೋಲಾರ್ ಬೇಲಿಗಳು ನಿಷ್ಕ್ರಿಯವಾಗಿವೆ. ಮಳೆಯಿಂದ ಕಂದಕ ಮುಚ್ಚಿಕೊಂಡಿವೆ. ಆದ್ದರಿಂದಲೇ ವನ್ಯಜೀವಿಗಳ ದಾಳಿ ಹೆಚ್ಚುತ್ತಿವೆ. ಕಳೆದ 10 ವರ್ಷಗಳಿಂದಲೂ ರೈಲ್ವೇ ಕಂಬಿ ಅಳವಡಿಸುವಂತೆ ಮನವಿ ಮಾಡಿದ್ದರೂ ನಿರ್ಲಕ್ಷ ಮಾಡಲಾಗಿದೆ.
ಕಂದಕಗಳನ್ನು ದಾಟುವ ಜಿಂಕೆಗಳನ್ನು ಹುಲಿ, ಚಿರತೆ ಹಿಂಬಾಲಿಸಿ ಗ್ರಾಮಗಳತ್ತ ಆಗಮಿಸುತ್ತಿವೆ ಎಂದು ಹೇಳಿದರು. ಹುಲಿ ದಾಳಿಗೊಳಗಾದ ಜಾನುವಾರು ಮಾಲೀಕರಿಗೆ ಅರಣ್ಯ ಇಲಾಖೆ ನೀಡುತ್ತಿರುವ ಪರಿಹಾರ ಸಾಕಾಗುತ್ತಿಲ್ಲ. ಜೀವನೋಪಾಯಕ್ಕೆ ಹೈನುಗಾರಿಕೆಯನ್ನೇ ಅವಲಂಬಿಸಿದ ಕುಟುಂಬಗಳು ಬೀದಿ ಪಾಲಾಗುತ್ತಿವೆ. ವನ್ಯಜೀವಿಗಳು ಅರಣ್ಯದಿಂದ ಹೊರಬರದಂತೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು.
ಕೂಡಲೇ ಹುಲಿ ಸೆರೆಗೆ ಕಾರ್ಯಾಚರಣೆ ಪ್ರಾರಂಭಿಸಲಾಗುವುದು ಎಂದು ಸಚಿವ ಆನಂದ್ ಸಿಂಗ್ ಭರವಸೆ ನೀಡಿದರು. ಈ ವೇಳೆ ಪಿಸಿಸಿಎಫ್ ಅಜಯ್ ಮಿಶ್ರ, ಸಿಸಿಎಫ್ಗಳಾದ ಟಿ.ಹೀರಾಲಾಲ್, ಸಿಎಫ್ ಬಾಲಚಂದ್ರ, ಎಎಸ್‌ಪಿ ಅನಿತಾ ಹದ್ದಣ್ಣನವರ್, ತಹಶೀಲ್ದಾರ್ ನಂಜುಂಡಯ್ಯ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.