11 ಕೋಟಿ ವೆಚ್ಚದಲ್ಲಿ ಸಣ್ಣ ಕೆರೆ ಅಭಿವೃದ್ಧಿ: ಶಾಸಕ ಎಂ. ಚಂದ್ರಪ್ಪ
Team Udayavani, May 12, 2020, 10:41 AM IST
ಹೊಳಲ್ಕೆರೆ: ಪಟ್ಟಣದ ಹೊಸದುರ್ಗ ರಸ್ತೆಯ ಸಣ್ಣ ಕೆರೆ ಅಭಿವೃದ್ಧಿಗೆ 11ಕೋಟಿ ರೂ. ಅನುದಾನ ಬಿಡಗಡೆಯಾಗಿದ್ದು, ಕೆರೆ ಮೇಲೆ ಷಟ್ಪಥ ನಿರ್ಮಾಣ ಮಾಡಿ ಚಿಕ್ಕ ಉದ್ಯಾನವನವನ್ನು ನಿರ್ಮಿಸಲಾಗುವುದು ಎಂದು ಶಾಸಕ ಎಂ. ಚಂದ್ರಪ್ಪ ಹೇಳಿದರು. ಹೊಸದುರ್ಗ ರಸ್ತೆಯಲ್ಲಿರುವ ಸಣ್ಣಕೆರೆ ರಸ್ತೆ ಅಗಲೀಕರಣ ಕಾಮಗಾರಿಯನ್ನು ಪರಿಶೀಲಿಸಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿಗೆ ಸೇರಿಕೊಂಡಿರುವ ಪಟ್ಟಣದ ಗಣಪತಿ ಸರ್ಕಲ್, ಬಸ್ ನಿಲ್ದಾಣ, ಹೊಸದುರ್ಗ ರಸ್ತೆಯ ಇಕ್ಕೆಲವನ್ನು ಅಗಲೀಕರಣ ಮಾಡುವ ನಿಟ್ಟಿನಲ್ಲಿ ರಸ್ತೆ ಒತ್ತುವರಿ ಮಾಡಿದ್ದ
ಕಟ್ಟಡಗಳನ್ನು ತೆರವುಗೊಳಿಸಲಾಗಿದೆ.
ಪಟ್ಟಣದ ಕೊಳಚೆ ನೀರು ಸರಾಗವಾಗಿ ಹರಿಯುವಂತೆ ಬೃಹತ್ ಚರಂಡಿ ನಿರ್ಮಾಣ ಕಾಮಗಾರಿ ನಡೆಯುತ್ತಿದೆ ಎಂದರು. ಸಣ್ಣ ಕೆರೆಯಿಂದ ಹೊಸದುರ್ಗ ರಸ್ತೆಯಲ್ಲಿರುವ ಸಪ್ತಪದಿ ಕಲ್ಯಾಣಮಂಟಪದ ತನಕ ಷಟ³ಥ ನಿರ್ಮಾಣ ಮಾಡಿ ಎರಡು ಬದಿಯಲ್ಲಿ ವಿದ್ಯುತ್ ದೀಪ ಅಳವಡಿಸಲಾಗುವುದು. ಐದಾರು ಅಡಿ ಜಾಗ ಬಿಟ್ಟು ಅಲ್ಲಿ ಸಸಿಗಳು, ಲಾನ್ ಹಾಕಲಾಗುತ್ತದೆ. ಇದರಿಂದ ರಸ್ತೆ ಮತ್ತು ಕೆರೆ ಸೌಂದರ್ಯ ಹೆಚ್ಚಾಗಲಿದೆ. ಭದ್ರಾ ಮೇಲ್ದಂಡೆ ಯೋಜನೆಯಡಿ ಸಣ್ಣ ಕೆರೆಗೆ ನೀರು ತುಂಬಿಸಲಾಗುತ್ತದೆ. ಅಲ್ಲಿ ಟ್ಯಾಂಕ್ ನಿರ್ಮಾಣ ಮಾಡಿ ಅಲ್ಲಿಂದ ತಾಳ್ಯ, ಎಚ್.ಡಿ. ಪುರ ಮತ್ತಿತರ ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತದೆ. ಅದಕ್ಕೆ 101 ಕೋಟಿ ರೂ. ಬಿಡುಗಡೆಯಾಗಿದ್ದು ಟೆಂಡರ್ ಹಂತದಲ್ಲಿದೆ. ಕೆರೆಯೊಳಗೆ ಬೃಹತ್ ಶಿವಲಿಂಗ ಸ್ಥಾಪಿಸಿ ನೀರಿನ ಕಾರಂಜಿ ನಿರ್ಮಾಣ ಮಾಡುವ ಉದ್ದೇಶವಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.