ಎಪಿಎಂಸಿ ಮಾರುಕಟ್ಟೆಗೆ ಭೇಟಿ
Team Udayavani, May 12, 2020, 11:01 AM IST
ಕಡೂರು: ಪಟ್ಟಣದ ಎಪಿಎಂಸಿ ಮಾರುಕಟ್ಟೆಗೆ ಶಾಸಕ ಬೆಳ್ಳಿ ಪ್ರಕಾಶ್ ಭೇಟಿ ನೀಡಿ ತರಕಾರಿ, ಟೊಮೊಟೊ ಮತ್ತು ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಿದರು. ಭಾನುವಾರ ಬೆಳಗ್ಗೆ ತಹಶೀಲ್ದಾರ್, ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ತಾ.ಪಂ ಇಒ ಜತೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.
ಪಟ್ಟಣದ ಎಪಿಎಂಸಿಗೆ ಹೊರ ರಾಜ್ಯ, ಜಿಲ್ಲೆಗಳಿಂದ ಲಾರಿಗಳು ಬರುತ್ತಿದ್ದು, ಚಾಲಕರು ಹಣದ ಆಸೆಗಾಗಿ ಪ್ರಯಾಣಿಕರನ್ನು ಕರೆತಂದು ಕಡೂರು ಪಟ್ಟಣದಲ್ಲಿ ಬಿಟ್ಟು ಹೋಗುತ್ತಿದ್ದಾರೆ
ಎಂಬ ಮಾಹಿತಿ ಮೇರೆಗೆ ಪರಿಶೀಲನೆ ನಡೆಸಿ ಪೊಲೀಸ್ ಇಲಾಖೆಗೆ ಇಂತಹ ಪ್ರಕರಣಗಳು ಕಂಡು ಬಂದರೆ ಕೂಡಲೇ ಕ್ರಮ ಕೈಗೊಳ್ಳಲು ಸೂಚಿಸಿರುವುದಾಗಿ ಶಾಸಕರು ತಿಳಿಸಿದರು.
ಟೊಮೊಟೊ ಖರೀದಿ ಕೇಂದಕ್ಕೆ ಭೇಟಿ ನೀಡಿ ಡರ್‌ದಾರರನ್ನು ಮಾತನಾಡಿಸಿ ದರದ ಬಗ್ಗೆ ಮಾಹಿತಿ ಪಡೆದರು. ಟೆಂಡರ್ ನಡೆಯುವಾಗ ಎಲ್ಲರು ಅಂತರ ಕಾಪಾಡಿಕೊಳ್ಳುವಂತೆ ಆದೇಶಿಸಿದರು. ರೈತರಿಗೆ ಯಾವುದೇ ಸಮಸ್ಯೆ ತಲೆದೋರದಂತೆ ವ್ಯವಹಾರ ನಡೆಸಲು ಸೂಚಿಸಿದರು. ರೈತರು ತಮ್ಮ ವ್ಯವಹಾರ ಮುಗಿದ ನಂತರ ತಮ್ಮ ತಮ್ಮ
ಊರುಗಳಿಗೆ ತೆರಳಬೇಕು ಎಂಬ ಸಲಹೆ ನೀಡಿದರು.
ಕೊರೊನಾ ವೈರಸ್ ದಿನೆ ದಿನೆ ಹೆಚ್ಚುತ್ತಿದ್ದು ಪಕ್ಕದ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಾಗಿರುವುದರಿಂದ ತಾಲೂಕಿನ ಜನತೆ ಹೆಚ್ಚಾಗಿ ಈ ಮೂರು ಜಿಲ್ಲೆಗಳ ಸಂಪರ್ಕ ಹೊಂದಿರುವುದರಿಂದ ಜನರಲ್ಲಿ ಆತಂಕ ಮೂಡುತ್ತಿದೆ. ಈ ಭಯವನ್ನು ಹೋಗಲಾಡಿಸಲು ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕು ಹಾಗೂ ಅಂತರ ಕಾಪಾಡಿಕೊಳ್ಳಬೇಕು. ಪುರಸಭೆ, ಪೊಲೀಸ್ ಇಲಾಖೆಯು ಮಧ್ಯಾಹ್ನ 1 ಗಂಟೆಯಿಂದ ವಿಧಿ ಸುವ ಲಾಕ್‌ಡೌನ್‌ಗೆ ಎಲ್ಲರೂ ಸಹಕಾರ ನೀಡಿ ಎಂದು ಮನವಿ ಮಾಡಿದರು.
ತಹಶೀಲ್ದಾರ್ ಜೆ.ಉಮೇಶ್, ವೃತ್ತ ನಿರೀಕ್ಷಕ ಮಂಜುನಾಥ್, ಪಿಎಸ್‌ಐ ವಿಶ್ವನಾಥ್, ತಾ.ಪಂ ಇಒ ಡಾ| ದೇವರಾಜನಾಯ್ಕ, ತಾಲೂಕು ವೈದ್ಯಾಧಿಕಾರಿ ಡಾ| ರವಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.