ಕಾಳಸಂತೆಯಲ್ಲಿ ಪಡಿತರ ಮಾರಿದರೆ ಕಠಿಣ ಕ್ರಮ
Team Udayavani, May 12, 2020, 11:48 AM IST
ಬೆಂಗಳೂರು: ರಾಜ್ಯ ಸರ್ಕಾರ ಅನ್ನಭಾಗ್ಯ ಹಾಗೂ ಕೇಂದ್ರ ಯೋಜನೆಯಡಿ ಪೂರೈಕೆ ಮಾಡುವ ಪಡಿತರ ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ ಕಠಿಣ ಕ್ರಮ ಕೈಗೊಳ್ಳಲಾವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ ಎಚ್ಚರಿಕೆ ನೀಡಿದ್ದಾರೆ. ಸರ್ಕಾರ ಕೋಟ್ಯಂತರ ರೂ. ವೆಚ್ಚ ಮಾಡಿ ಬಡವರಿಗೆ ಆಹಾರ ಧಾನ್ಯ ವಿತರಿಸುತ್ತಿದೆ.
ಒಂದು ಕೆಜಿ ಅಕ್ಕಿ 25 ರೂ. ದರದಲ್ಲಿ ಖರೀದಿಸಿ ಉಚಿತವಾಗಿ ಪೂರೈಕೆ ಮಾಡುತ್ತಿದ್ದೇವೆ. ಈ ಅಕ್ಕಿಯನ್ನು 10 ರಿಂದ 15 ರೂ.ಗೆ ಮಾರಾಟ ಮಾಡುತ್ತಿರುವ ದೂರುಗಳು ಬಂದಿವೆ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಅಧಿಕಾರಿಗಳ ಜತೆ ಸಭೆ ನಡೆಸಿ ಮಾತನಾಡಿ, ಪಡಿತರ ಮಾರಾಟ ಮಾಡುವವರ ವಿರುದ ಕ್ರಮಕ್ಕೆ ಅಗತ್ಯವಾದರೆ ಬಿಗಿ ಕಾನೂನು ತರುವ ಬಗ್ಗೆ ಮುಖ್ಯಮಂತ್ರಿ ಯವರ ಬಳಿ ಮಾತನಾಡುತ್ತೇನೆ.
ಸರ್ಕಾರ ಉಚಿತವಾಗಿ ಕೊಡುವ ಪಡಿತರ ಮಾರಾಟ ಮಾಡುವವರ ಪಡಿತರ ಕಾರ್ಡ್ ರದ್ದು ಮಾಡಲೂ ಕಾನೂನು ತರುವ ಚಿಂತನೆಯಿದೆ ಎಂದರು. ಮೇಲ್ನೋಟಕ್ಕೆ ಪಡಿತರ ದುರ್ಬಳಕೆ ಮಾಡಿಕೊಂಡಿರುವ 499 ಅಂಗಡಿಗಳಿಗೆ ನೋಟಿಸ್ ನೀಡಿದ್ದೇವೆ. 33 ಲೈಸೆನ್ಸ್ ಗಳನ್ನು ರದ್ದು ಮಾಡಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.