ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
Team Udayavani, May 12, 2020, 2:08 PM IST
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಮಾಹಿತಿಯನ್ನು ಪ್ರಧಾನಮಂತ್ರಿಯವ ಕಛೇರಿ ಮೂಲಗಳು ಖಚಿತಪಡಿಸಿವೆ.
ದೇಶಾದ್ಯಂತ ಕೋವಿಡ್ ವೈರಸ್ ನಿರ್ಭಂಧ ಸಂಬಂಧಿತ ಲಾಕ್ ಡೌನ್ ಜಾರಿಗೊಂಡ ಬಳಿಕ ದೇಶವಾಸಿಗಳನ್ನುದ್ದೇಶಿಸಿ ಪ್ರಧಾನಿಯವರು ಮಾಡುತ್ತಿರುವ ಮೂರನೇ ಭಾಷಣ ಇದಾಗಿದೆ.
ಪ್ರಧಾನಿ ಮೋದಿ ಅವರು ನಿನ್ನೆಯಷ್ಟೇ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮ್ಯಾರಥಾನ್ ವಿಡಿಯೋ ಕಾನ್ಫೆರೆನ್ಸ್ ಸಭೆಯನ್ನು ನಡೆಸಿದ್ದರು. ಹಾಗೂ ಈ ಸಭೆಯಲ್ಲಿ ದೇಶದಲ್ಲಿ ಕೋವಿಡ್ ನಿಯಂತ್ರಣ, ಲಾಕ್ ಡೌನ್ ಸಡಿಲಿಕೆ, ರೈಲು ಸಂಚಾರ ಪುನರಾರಂಭ, ಆರ್ಥಿಕತೆಗೆ ಬಲ ತುಂಬುವುದೂ ಸೇರಿದಂತೆ ಹಲವಾರು ವಿಚಾರಗಳನ್ನು ಚರ್ಚಿಸಲಾಗಿತ್ತು.
ದೇಶಾದ್ಯಂತ ಜಾರಿಯಲ್ಲಿರುವ ಮೂರನೇ ಹಂತದ ಲಾಕ್ ಡೌನ್ ಅವಧಿ ಮೇ17ಕ್ಕೆ ಮುಕ್ತಾಯಗೊಳ್ಳಲಿದೆ. ಈ ಅವಧಿಯಲ್ಲಿ ಹಲವಾರು ಆರ್ಥಿಕ ಚಟುವಟಿಕೆಗಳಿಗೆ ಅವಕಾಶವನ್ನು ನೀಡಲಾಗಿದೆ ಹಾಗೂ ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಸರಕಾರಿ ವ್ಯವಸ್ಥೆಯಲ್ಲೇ ಅವಕಾಶವನ್ನು ಮಾಡಿಕೊಡಲಾಗಿದೆ.
ಮುಖ್ಯಮಂತ್ರಿಗಳೊಂದಿಗೆ ನಿನ್ನೆ ಪ್ರಧಾನಿಯವರು ನಡೆಸಿದ್ದ ಸಭೆಯಲ್ಲಿ ಲಾಕ್ ಡೌನ್ ಮುಂದುವರಿಕೆಗೆ ಸಂಬಂಧಿಸಿದಂತೆ ವಿವಿಧ ಅಭಿಪ್ರಾಯಗಳು ವ್ಯಕ್ತವಾಗಿತ್ತು. ಮತ್ತು ಕೋವಿಡ್ ನಿಯಂತ್ರಣ ವಿಚಾರದಲ್ಲಿ ರಾಜ್ಯಗಳಿಗೆ ಇನ್ನಷ್ಟು ನಿರ್ಧಾರಾತ್ಮಕ ಸ್ವಾತಂತ್ರ್ಯವನ್ನು ನೀಡಬೇಕೆಂಬ ಅಭಿಪ್ರಾಯವೂ ಇಲ್ಲಿ ವ್ಯಕ್ತವಾಗಿತ್ತು.
ಈ ಎಲ್ಲಾ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಅವರ ಇಂದಿನ ಭಾಷಣ ಕುತೂಹಲ ಮೂಡಿಸಿದೆ.
Shri @narendramodi will be addressing the nation at 8 PM this evening.
— PMO India (@PMOIndia) May 12, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.