ವಲಸೆ ಕಾರ್ಮಿಕರಿಗೆ ಕ್ವಾರಂಟೈನ್
Team Udayavani, May 13, 2020, 3:57 PM IST
ಶಹಾಪುರ: ದೇಶದೆಲ್ಲೆಡೆ ಕೋವಿಡ್ ತನ್ನ ಕಬಂಧ ಬಾಹು ಚಾಚಿಕೊಂಡಿದ್ದು, ಜನರು ಆತಂಕದಲ್ಲಿ ದಿನ ದೂಡುತ್ತಿದ್ದಾರೆ. ಹೊರ ರಾಜ್ಯ, ಜಿಲ್ಲೆಗಳಿಗೆ ಗುಳೆ ಹೋಗಿದ್ದ ಜನ ವಾಪಸ್ ತವರಿಗೆ ಮರಳುತ್ತಿದ್ದಾರೆ.
ತಾಲೂಕಿಗೆ ಸೋಮವಾರ ಸಾಕಷ್ಟು ಸಂಖ್ಯೆಯಲ್ಲಿ ಜನರು ಆಗಮಿಸಿದ್ದು, ಎಲ್ಲರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿದೆ. ಹಲವರಿಗೆ ಹೋಂ ಕ್ವಾರಂಟೈನ್‌ನಲ್ಲಿರಲು ತಿಳಿಸಲಾಗಿದ್ದು, 215 ಜನರು ವಲಸೆ ಕಾರ್ಮಿಕರನ್ನು ಐಸೋಲೇಷನ್ ಕೇಂದ್ರದಲ್ಲಿ 14 ದಿನಗಳ ಕ್ವಾರಂಟೈನ್‌ನಲ್ಲಿಡಲು ವ್ಯವಸ್ಥೆ ಮಾಡಲಾಗಿದೆ ಎಂದು ತಹಶೀಲ್ದಾರ್ ಜಗನ್ನಾಥರಡ್ಡಿ ತಿಳಿಸಿದರು.
ನಗರದ ಹೊರವಲಯದಲ್ಲಿರುವ ಮೊರಾರ್ಜಿ ಹಾಗೂ ಕಿತ್ತೂರು ವಸತಿ ಶಾಲೆಗಳಲ್ಲಿ ಐಸೋಲೇಷನ್ ಕೇಂದ್ರ ಸ್ಥಾಪಿಸಲಾಗಿದ್ದು, ವಲಸಿಗರನ್ನು 14 ದಿನಗಳ ಕಾಲ ಇಲ್ಲಿಯೇ ತಂಗಲುವ್ಯವಸ್ಥೆ ಮಾಡಲಾಗಿದೆ. ವಲಸಿಗರ ಎಲ್ಲರ ಆರೋಗ್ಯ ಸದೃಢವಾಗಿದ್ದು ಯಾವುದೇ ಆತಂಕ ಪಡಬೇಕಿಲ್ಲ. ಆದರೆ ಮುಂಜಾಗೃತವಾಗಿ ಕೋವಿಡ್-19 ನಿಯಮನುಸಾರ ಅವರನ್ನು ಕ್ವಾರಂಟೈನ್ ಮಾಡಬೇಕಿದೆ. ಅಲ್ಲದೆ ಕ್ವಾರಂಟೈನ್ ಕೇಂದ್ರದಲ್ಲಿ ಸಮರ್ಪಕ ವ್ಯವಸ್ಥೆ ಮಾಡಲಾಗಿದೆ ಎಂದರು. ಮಹಾರಾಷ್ಟ್ರದ ಸಾಂಗ್ಲಿ ಸೇರಿದಂತೆ ಇತರೆಡೆಯಿಂದ ವಲಸಿಗರು ಆಗಮಿಸಿದ್ದಾರೆ. ಇನ್ನು ಹೆಚ್ಚು ಜನರು ಬರುವ ನಿರೀಕ್ಷೆಯಿದ್ದು, ನಗರದ ಬೆನಕನಳ್ಳಿ ಗ್ರಾಮ ಬಳಿಯ ವಸತಿ ಶಾಲೆಗಳನ್ನು ಕ್ವಾರಂಟೈನ್ ಕೇಂದ್ರಗಳನ್ನಾಗಿ ಮಾರ್ಪಡಿಸಲಾಗಿದೆ. ಬರುವ ವಲಸಿಗರಿಗೆ ಸೂಕ್ತ ಆರೋಗ್ಯ ತಪಾಸಣೆ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ.
ಮಹಾರಾಷ್ಟ್ರದ ಸಾಂಗ್ಲಿ ಮತ್ತು ಇತರೆಡೆಯಿಂದ ಆಗಮಿಸಿದ್ದ ವಲಸೆ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಲಾಗಿದ್ದು, ಎಲ್ಲರೂ ಆರೋಗ್ಯವಾಗಿ ಸದೃಢರಾಗಿದ್ದಾರೆ. ಇವರೆಲ್ಲರನ್ನು ಮುಂಜಾಗ್ರತವಾಗಿ 14 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗಿದೆ. ನಿತ್ಯ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಡಾ.ರಮೇಶ ಗುತ್ತೇದಾರ. –ತಾಲೂಕು ವೈದ್ಯಾಧಿಕಾರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.