ಯಾದಗಿರಿಯಲ್ಲಿ ಸೋಂಕು ಪ್ರಕರಣ: ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಪ್ರಭು ಚವ್ಹಾಣ ಮನವಿ
Team Udayavani, May 12, 2020, 4:20 PM IST
ಯಾದಗಿರಿ: ಜಿಲ್ಲಾಡಳಿತ, ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಉತ್ತಮ ರೀತಿಯಿಂದ ಕರ್ತವ್ಯ ನಿರ್ವಹಿಸುತ್ತಿದ್ದು, ಪ್ರಸ್ತುತ ಲಾಕ್‍ಡೌನ್ ಸಡಿಲಿಕೆಯಿಂದಾಗಿ ಬೇರೆಬೇರೆ ರಾಜ್ಯಗಳಿಂದ ಜನರು ಜಿಲ್ಲೆಗೆ ಮರಳಿ ಬರುತ್ತಿದ್ದಾರೆ. ಇದರಿಂದ ಯಾದಗಿರಿ ಜಿಲ್ಲೆಯಲ್ಲಿ ಎರಡು ಕೋವಿಡ್-19 ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಜನತೆ ಜಾಗರೂಕರಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲೇಬೇಕು ಎಂದು ಪಶು ಸಂಗೋಪನೆ, ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಸುರಪುರ ತಾಲ್ಲೂಕಿನ ಮೂರು ಜನರು ಗುಜರಾತ್ ರಾಜ್ಯದ ಅಹಮದಾಬಾದ್ ನಗರಕ್ಕೆ ಕಳೆದ ಮಾರ್ಚ್ 21ರಂದು ತೆರಳಿದ್ದರು. ಲಾಕ್‍ಡೌನ್ ಅವಧಿಯಲ್ಲಿ ಅವರು ತಮ್ಮ ಸಂಬಂಧಿಗಳ ಮನೆಯಲ್ಲಿ ಉಳಿದಿದ್ದು, ಮೇ 9ರಂದು ಲಾರಿ ಮೂಲಕ ಬಾಗಲಕೋಟೆ ಜಿಲ್ಲೆಯ ಹುನಗುಂದ ರಸ್ತೆಯಲ್ಲಿ ಇಳಿದು ಅಲ್ಲಿಂದ ಕಾರಿನ ಮೂಲಕ ಸುರಪುರ ಜ್ವರ ತಪಾಸಣಾ ಕೇಂದ್ರಕ್ಕೆ ಬಂದಿರುತ್ತಾರೆ. ಸದರಿಯವರ ಆರೋಗ್ಯ ತಪಾಸಣೆ ಮಾಡಿ, ಅವರ ಗಂಟಲಿನ ದ್ರವವನ್ನು ಕೋವಿಡ್-19 ಪರೀಕ್ಷಾ ಕೇಂದ್ರ ಕಲಬುರಗಿಗೆ ಕಳುಹಿಸಲಾಗಿತ್ತು. ಈ ಮಧ್ಯ ಅವರೆಲ್ಲರನ್ನೂ ಕ್ವಾರಂಟೈನ್‍ನಲ್ಲಿ ಇಡಲಾಗಿತ್ತು. ಇವರಲ್ಲಿ ಇಬ್ಬರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಇವರ ಸಂಪರ್ಕಕ್ಕೆ ಬಂದವರನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕರ ಸಹಕಾರ ಅಗತ್ಯ: ಕೋವಿಡ್-19 ಸಾಂಕ್ರಾಮಿಕ ರೋಗ ತಡೆಗಟ್ಟುವಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಹೊರರಾಜ್ಯಗಳಿಂದ ಆಗಮಿಸುತ್ತಿರುವ ವಲಸೆಗಾರರು ಕಡ್ಡಾಯವಾಗಿ 14 ದಿನಗಳ ಕ್ವಾರಂಟೈನ್‍ಗೆ ಒಳಪಡಬೇಕಾಗುತ್ತದೆ. ಯಾರಾದರೂ ಬೇರೆ ರಾಜ್ಯಗಳಿಂದ ವಲಸೆ ಬಂದಿರುವುದು ಕಂಡುಬಂದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಯಾರೂ ಸ್ವಗ್ರಾಮಕ್ಕೆ ಹೋಗಬಾರದು. ಒಂದು ವೇಳೆ ಅಂತಹವರು ಯಾರಾದರೂ ಕಂಡುಬಂದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತರುವಂತೆ ಸಚಿವರು ಕೋರಿದ್ದಾರೆ.
ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತರು, ಪೊಲೀಸ್ ಇಲಾಖೆ ಸೇರಿದಂತೆ ಎಲ್ಲರೂ ಉತ್ತಮ ರೀತಿಯಿಂದ ಸೇವೆ ಸಲ್ಲಿಸುತ್ತಿದ್ದಾರೆ.
ಪ್ರಧಾನಮಂತ್ರಿಗಳು ಮತ್ತು ಮುಖ್ಯಮಂತ್ರಿಗಳು ನೀಡುವ ಪ್ರತಿಯೊಂದು ಆದೇಶವನ್ನು ಪಾಲಿಸಬೇಕು. ಎಲ್ಲರೂ ತಮ್ಮತಮ್ಮ ಮನೆಯಲ್ಲಿಯೇ ಇರಬೇಕು. ಅನವಶ್ಯಕವಾಗಿ ರಸ್ತೆಯಲ್ಲಿ ತಿರುಗಾಡಬಾರದು. ಪ್ರತಿಯೊಂದು ಚೆಕ್ ಪೋಸ್ಟ್ ಕಡ್ಡಾಯವಾಗಿ ತಪಾಸಣೆಗೆ ಒಳಗಾಗಬೇಕು ಎಂದಿದ್ದಾರೆ.
ಜಿಲ್ಲೆಯ ಎಲ್ಲಾ ಶಾಸಕರು, ಜನಪ್ರತಿನಿಧಿಗಳೂ ಸಹ ಉತ್ತಮ ರೀತಿಯಿಂದ ಸಹಕಾರ ನೀಡುತ್ತಿದ್ದಾರೆ. ಜನರ ಸಹಕಾರವೂ ಮುಖ್ಯವಾಗಿದ್ದು, ಕೋವಿಡ್-19 ಮುಕ್ತ ಜಿಲ್ಲೆಗೆ ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.