ರಚಿತಾ ಸಿನಿಯಾನಕ್ಕೆ ಏಳು ವರ್ಷ
Team Udayavani, May 13, 2020, 6:38 AM IST
ಡಿಂಪಲ್ ಕ್ವೀನ್ ರಚಿತಾ ರಾಮ್ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟು 7 ವರ್ಷಗಳು ಕಳೆದಿದೆ. ಈ ಖುಷಿಯನ್ನು ತಾವು ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ಬುಲ್ ಬುಲ್ ಚಿತ್ರದ ಪೋಸ್ಟರ್ ಶೇರ್ ಮಾಡುವ ಮೂಲಕ ರಚಿತಾ ಹಂಚಿಕೊಂಡಿದ್ದಾರೆ. ಸ್ಯಾಂಡಲ್‌ವುಡ್‌ಗೆ ಕಾಲಿಟ್ಟು 7 ವರ್ಷ ತುಂಬಿದೆ. ನನ್ನನ್ನು ಸಿನಿಮಾ ರಂಗಕ್ಕೆ ಪರಿಚಯಿಸಿದ ತೂಗುದೀಪ ಪ್ರೊಡಕ್ಷನ್ಸ್ ಗೆ ಎಂದೂ ನಾನು ಚಿರಋಣಿ.
ಸಿನಿ ಬದುಕಿನಲ್ಲಿ ನನಗೆ ಪ್ರೊತ್ಸಾಹಿಸಿ ಬೆಳೆಸಿದ ನನ್ನ ಹೆತ್ತವರು ಹಾಗೂ ಅಭಿಮಾನಿಗಳಿಗೆ ಧನ್ಯವಾದ ಎಂದು ರಚಿತಾ ಖುಷಿಯಿಂದ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಬಗ್ಗೆ ಇನ್ ಸ್ಟಾಗ್ರಾಮ್ ನಲ್ಲಿ ಸುದೀರ್ಘವಾಗಿ ಬರೆದುಕೊಂಡಿರುವ ರಚಿತಾ, ನನ್ನ ಈ ಕಲಾ ಬದುಕಿಗೆ 7 ವರ್ಷಗಳು ತುಂಬಿದೆ ಅಂದ್ರೇ ನಂಬಕ್ಕೇ ಆಗ್ತಿಲ್ಲ. ನನ್ನನ್ನ ಸಿನಿಮಾ ರಂಗಕ್ಕೆ ಪರಿಚಯ ಮಾಡಿಸಿದ ತೂಗುದೀಪ ಪ್ರೊಡಕ್ಷನ್ಸ್ ಗೆ ಸದಾ ಚಿರಋಣಿಯಾಗಿರ್ತೀನಿ.
ಬುಲ್ ಬುಲ್‌ನಿಂದ ಬೆಳ್ಳಿತೆರೆಗೆ ಇಟ್ಟ ಹೆಜ್ಜೆ ಇಂದಿಗೂ ಮಾಸಿಲ್ಲ ಇದಕ್ಕೆ ಕಾರಣ ನನ್ನ ತಂದೆ ತಾಯಿಯ ನಂಬಿಕೆ, ದೇವರ ಅನುಗ್ರಹ ಹಾಗೂ ನನ್ನ ಪ್ರೀತಿಯ ಅಭಿಮಾನಿಗಳ ಆಶೀರ್ವಾದ. ಈ ಪಯಣದಲ್ಲಿ ಕಲಿತ ಪಾಠಗಳು, ಅರಿತ ಮನಸುಗಳು, ಪ್ರತಿಯೊಂದು ಸಿನಿಮಾದ ನೆನಪುಗಳು ನೆನೆಸಿಕೊಂಡ್ರೆ ಕಣ್ತುಂಬಿ ಬರುತ್ತೆ. ನನ್ನ ಸಿನಿ ಬದುಕಿನಲ್ಲಿ ನನಗೆ ಮಾರ್ಗದರ್ಶಿಗಳಾಗಿ ನಿಂತ ಪ್ರತಿಯೊಬ್ಬರಿಗೂ ತುಂಬು ಹೃದಯದ ಕೃತಜ್ಞತೆಗಳನ್ನ ಸಲ್ಲಿಸ್ತೀನಿ.
ನಿಮ್ಮೆಲ್ಲರ ಪ್ರೀತಿ ಬೆಂಬಲ ಸದಾ ನನ್ನ ಮೇಲೆ ಹೀಗೆ ಇರಲಿ. ನಿಮ್ಮ ರಚಿತರಾಮ್ ಎಂದು ಬರೆದು ಬುಲ್‌ಬುಲ್ ಚಿತ್ರದ ಪೋಸ್ಟರ್ ಶೇರ್ ಮಾಡಿದ್ದಾರೆ. ಬುಲ್ ಬುಲ್ ಮೂಲಕ ಎಂಟ್ರಿಕೊಟ್ಟ ರಚಿತಾ ಆ ನಂತರ ಕನ್ನಡ ಚಿತ್ರರಂಗದಲ್ಲಿ ಸ್ಟಾರ್ ನಟಿಯಾಗಿ ಮೆರೆದವರು. ಕನ್ನಡದ ಬಹುತೇಕ ಸ್ಟಾರ್‌ಗಳ ಚಿತ್ರಗಳಲ್ಲಿ ರಚಿತಾ ನಟಿಸಿದ್ದಾರೆ. ಸದ್ಯ ತೆಲುಗು ಚಿತ್ರ ವೊಂದರಲ್ಲಿ ರಚಿತಾ ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
ಹೊಸ ವರ್ಷಾಚರಣೆಗೆ ಡ್ರಗ್ಸ್ ಪಾರ್ಟಿ: ಪೊಲೀಸ್ ನಿಗಾ
Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.