ಬುಡಕಟ್ಟು ಜನರ ನೆರವಿಗೆ 155 ಕೋಟಿ ರೂ. ಕೋರಿ ಪ್ರಸ್ತಾವ
Team Udayavani, May 13, 2020, 7:16 AM IST
ಬೆಂಗಳೂರು: ಕೊರೊನಾ ಸೋಂಕಿನಿಂದಾಗಿ ಪ.ಪಂಗಡ ಹಾಗೂ ಬುಡಕಟ್ಟು ಸಮುದಾಯದವರು ಸಂಕಷ್ಟಕ್ಕೆ ಸಿಲುಕಿದ್ದು, ಅವರ ಜೀವನೋಪಾಯ ಹಾಗೂ ಆರ್ಥಿಕ ಸ್ವಾವಲಂಬನೆಗಾಗಿ 155 ಕೋಟಿ ರೂ. ಮೊತ್ತದ ನಾನಾ ಯೋಜನೆಗಳ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ತ್ವರಿತವಾಗಿ ಮಂಜೂ ರಾತಿ ನೀಡಬೇಕು ಎಂದು ಸಮಾಜ ಕಲ್ಯಾಣ ಸಚಿವ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಕೇಂದ್ರ ಸಚಿವರಲ್ಲಿ ಮನವಿ ಮಾಡಿದರು.
ಮಂಗಳವಾರ ಕೇಂದ್ರ ಬುಡಕಟ್ಟು ಕಲ್ಯಾಣ ಸಚಿವ ಜುವಲ್ ಓರಾಂ ಅವರೊಂದಿಗೆ ವಿಡಿಯೋ ಸಂವಾದದ ವೇಳೆ ಮಾತನಾಡಿ, ಕಿರು ಅರಣ್ಯ ಉತ್ಪನ್ನಗಳನ್ನು ಸಂಗ್ರಹಿಸುವ ಬುಡಕಟ್ಟು ಜನರನ್ನು ಸಂಘಟಿಸಿ ಅವರಿಗೆ ತರಬೇತಿ ನೀಡಿ ಸ್ವಾವಲಂಬಿಗಳನ್ನಾಗಿ ಮಾಡಬೇಕು. ಅವರಿಂದಲೇ ಕಿರು ಅರಣ್ಯ ಉತ್ಪನ್ನಗಳನ್ನು ಹೆಚ್ಚಿನ ಬೆಂಬಲ ಬೆಲೆಯೊಂದಿಗೆ ಖರೀದಿಸಬೇಕು.
ಬೆಂಬಲ ಬೆಲೆ ಹೆಚ್ಚಳಕ್ಕೆ 7 ಕೋಟಿ ರೂ. ಹಾಗೂ ತಲಾ 2 ಕೋಟಿ ರೂ. ವೆಚ್ಚದಲ್ಲಿ 7 ಕಿರು ಅರಣ್ಯ ಉತ್ಪನ್ನ ಸಂಸ್ಕರಣಾ ಘಟಕಗಳನ್ನು ಸಿಆರ್‌ಟಿಆರ್‌ಐ ಮೂಲಕ ಸ್ಥಾಪಿಸಿ ತಾಂತ್ರಿಕ ಸಹಕಾರದೊಂದಿಗೆ ಜಾರಿಗೊಳಿಸಬೇಕು ಎಂದು ಮನವಿ ಮಾಡಿದರು. 355 ಇ- ಕಾರ್ಟ್ ಗಳನ್ನು ಒದಗಿಸಬೇಕು. 41 ಕೋಟಿ ರೂ. ವೆಚ್ಚದಲ್ಲಿ ಕುರಿ ಮತ್ತು ಮೇಕೆ ಘಟಕಗಳ ಸ್ಥಾಪನೆ ಸೇರಿ ಒಟ್ಟು 155 ಕೋಟಿ ರೂ. ವೆಚ್ಚದ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಲಾಗಿದೆ ಎಂದು ಕೇಂದ್ರ ಸಚಿವರಿಗೆ ಕಾರಜೋಳ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.