ಕೋವಿಡ್-19 ಕರ್ತವ್ಯ ನಿರ್ವಹಿಸುತ್ತಿದ್ದ ಆಶಾ ಕಾರ್ಯಕರ್ತೆ ಸಾವು
Team Udayavani, May 13, 2020, 7:19 AM IST
ಸಾಂದರ್ಭಿಕ ಚಿತ್ರ
ಬಳ್ಳಾರಿ: ಕೋವಿಡ್-19 ತಡೆ ಹಾಗೂ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದ ಕುರುಗೋಡು ತಾಲೂಕು ಬಾದನಹಟ್ಟಿ ಗ್ರಾಮದ ಆಶಾ ಕಾರ್ಯಕರ್ತೆ ಕೆ. ಸಾಕಮ್ಮ (51) ಸೋಮವಾರ ಮೃತಪಟ್ಟಿ ದ್ದಾರೆ. ಕೆಲಸದ ಒತ್ತಡದಿಂದಲೇ ಮೃತಪಟ್ಟಿದ್ದಾರೆಂದು ಕುಟುಂಬ ದವರು ಆರೋಪಿಸುತ್ತಿದ್ದು, ವೈದ್ಯರು ಮಾತ್ರ ಸಾಕಮ್ಮ ಅನಾರೋಗ್ಯದಿಂದ ಸಾವಿಗೀಡಾಗಿದ್ದಾರೆ ಎಂದು ಹೇಳುತ್ತಿದ್ದಾರೆ.
ಸಾಕಮ್ಮ ಅವರು ಲಾಕ್‌ಡೌನ್ ಘೋಷಣೆ ಆದಾಗಿನಿಂದ ನಿರಂತರವಾಗಿ ಜಾಗೃತಿ ಕೆಲಸದಲ್ಲಿ ನಿರತರಾಗಿದ್ದಾರೆ. ಕೆಲಸದ ಒತ್ತಡದಲ್ಲಿ ಅನಾರೋಗ್ಯಕ್ಕೆ ಗುರಿಯಾಗಿರುವ ಅವರು, 2 ದಿನಗಳ ಹಿಂದಷ್ಟೇ ಗ್ರಾಮದಲ್ಲಿ ಕುಸಿದುಬಿದ್ದಿದ್ದಾರೆ. ಆಗ ಅಲ್ಲಿಯೇ ಇದ್ದ ಜನ ಇವರನ್ನು ಸಮಾಧಾನಪಡಿಸಿ, ನೀರು ಕುಡಿಸಿ ಮನೆಗೆ ಕಳುಹಿಸಿದ್ದಾರೆ. ಮರುದಿನ ಪುನಃ ಕೆಲಸಕ್ಕೆ ಹಾಜರಾಗಿದ್ದು, ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ.
ಕೂಡಲೇ ಆ್ಯಂಬುಲೆನ್ಸ್ ನಲ್ಲಿ ವಿಮ್ಸ್ ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗಲೇ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ವಿಮ್ಸ್ ನಿರ್ದೇಶಕ ಡಾ|ಬಿ. ದೇವಾನಂದ್ ಪ್ರತಿಕ್ರಿಯಿಸಿ, ಸಿಂಕೋಪಲ್ ಅಟ್ಯಾಕ್‌ನಿಂದ (ತಲೆ ಸುತ್ತು) ಕುಸಿದು ಬಿದ್ದಿದ್ದಾರೆ. ಕೂಡಲೇ ವಿಮ್ಸ್‌ಗೆ ಕರೆತರಲಾಗಿದ್ದು, ಇಲ್ಲಿಗೆ ಬರುವುದರೊಳಗೆ ಮೃತಪಟ್ಟಿದ್ದರು. ಕೋವಿಡ್-19 ಜಾಗೃತಿ ಕಾರ್ಯದಲ್ಲಿ ತೊಡಗಿದ್ದ ಹಿನ್ನೆಲೆಯಲ್ಲಿ ಅವರ ಗಂಟಲು ದ್ರವದ ಸ್ಯಾಂಪಲ್ ಗಳನ್ನು ಪಡೆದು ಕೊರೊನಾ ಟೆಸ್ಟಿಂಗ್‌ಗೆ ಕಳುಹಿಸಲಾಗಿತ್ತು.
ಆಗ ವಿಮ್ಸ್‌ನಲ್ಲಿನ ಟೆಸ್ಟಿಂಗ್ ಲ್ಯಾಬ್ ಸ್ಥಗಿತಗೊಂಡಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಕಳುಹಿಸಲಾಗಿದ್ದು, ನೆಗೆಟಿವ್ ಎಂದು ವರದಿ ಬಂದಿದೆ. ಕುಟುಂ ಬಸ್ಥರಿಗೆ ಮೃತದೇಹ ಒಪ್ಪಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಪರಿಹಾರ-ಉದ್ಯೋಗಕ್ಕಾಗಿ ಬೇಡಿಕೆ: ಈ ಮಧ್ಯೆ ಸಾಕಮ್ಮ ಕೆಲಸದ ಒತ್ತಡದಿಂದಲೇ ಮೃತಪಟ್ಟಿದ್ದಾರೆಂದು ಆರೋಪಿಸಿರುವ ಅವರ ಮಗ ಕೆ.ಮಂಜುನಾಥ್, ಸೂಕ್ತ ಪರಿಹಾರ, ಸರ್ಕಾರಿ ಉದ್ಯೋಗ ನೀಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಅಲ್ಲಿವರೆಗೂ ಆಸ್ಪತ್ರೆಯಿಂದ ಮೃತದೇಹ ಕೊಂಡೊಯ್ಯುವುದಿಲ್ಲ ಎಂದೂ ಎಚ್ಚರಿಸಿದ್ದಾರೆ. ಒಂದು ವೇಳೆ ಬೇಡಿಕೆ ಈಡೇರಿಸುವುದು ವಿಳಂಬವಾದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಡೀಸಿ ಕಚೇರಿ ಎದುರು ಧರಣಿ ನಡೆಸುವುದಾಗಿಯೂ ಮನವಿಯಲ್ಲಿ ತಿಳಿಸಿದ್ದಾರೆ. ಜತೆಗೆ 50 ಲಕ್ಷ ರೂ. ಆರೋಗ್ಯ ವಿಮೆಯ ಸೌಲಭ್ಯ ಕಲ್ಪಿಸಬೇಕೆಂದು ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ಎಸ್.ವರಲಕ್ಷ್ಮಿ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
MUST WATCH
ಹೊಸ ಸೇರ್ಪಡೆ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್‌ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.