ಅನಿವಾಸಿ ಕನ್ನಡಿಗರ ಸೋಂಕು ಪರೀಕ್ಷೆ ವರದಿ ಇಂದು
Team Udayavani, May 13, 2020, 7:58 AM IST
ಬೆಂಗಳೂರು: ಸೋಮವಾರ ಮುಂಜಾನೆ ಲಂಡನ್ನಿಂದ ಬೆಂಗಳೂರಿಗೆ ಬಂದಿಳಿದವರ ಸೋಂಕು ಪರೀಕ್ಷಾ ವರದಿ ಬುಧವಾರ ಬರಲಿವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಲಾಕ್ಡೌನ್ ಹಿನ್ನೆಲೆ ಲಂಡನ್ನಲ್ಲಿ ಸಿಲುಕಿಕೊಂಡಿದ್ದ ಕನ್ನಡಿಗರ ಪೈಕಿ 326 ಮಂದಿಯನ್ನು ಸೋಮವಾರ ಮುಂಜಾನೆ 4 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆತರಲಾಗಿತ್ತು.
ನಿಲ್ದಾಣಕ್ಕೆ ಬಂದ ಕೂಡಲೇ ಎಲ್ಲರ ಆರೋಗ್ಯ ತಪಾಸಣೆ ಮಾಡಿ ಹೋಟೆಲ್ ಕ್ವಾರಂಟೈನ್ಗೆ ಕಳುಹಿಸಲಾಗಿತ್ತು. ಈ ಪೈಕಿ ಅನಾರೋಗ್ಯ ಕಾಣಿಸಿ ಕೊಂಡಿದ್ದ ಗರ್ಭಿಣಿಯನ್ನು ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಅವರು ಚೇತರಿಸಿಕೊಂಡಿದ್ದು, ಆಸ್ಪತ್ರೆ ಯಿಂದ ಬಿಡುಗಡೆಯಾಗಿ ಹೋಟೆಲ್ಗೆ ಸ್ಥಳಾಂತರಗೊಂಡಿದ್ದಾರೆ.
ಒಬ್ಬ ಕ್ಯಾನ್ಸರ್ ರೋಗಿಯನ್ನು ರಾಮಯ್ಯ ಆಸ್ಪತ್ರೆಗೆ ದಾಖಲಿಸ ಲಾಗಿದೆ. ಸೋಮವಾರ ಸಂಜೆಯಿಂದ ಹಾಗೂ ಮಂಗಳವಾರ ಮಧ್ಯಾಹ್ನದವರೆಗೂ ಎಲ್ಲರ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳುಹಿ ಸಲಾಗಿದ್ದು, ವರದಿ ಬುಧವಾರ ಬರಲಿದೆ ಎಂದು ಆರೋಗ್ಯ ಇಲಾಖೆ ವೈದ್ಯ ಡಾ.ಪ್ರಭುದೇವ ಗೌಡ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.