ಅಕ್ರಮ ಗೋ ಸಾಗಾಟ: ತುರ್ತು ಕ್ರಮಕ್ಕೆ ಆಗ್ರಹ
Team Udayavani, May 13, 2020, 11:28 AM IST
ಸಾಂದರ್ಭಿಕ ಚಿತ್ರ
ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಅವ್ಯಾಹತವಾಗಿ ಅಕ್ರಮ ಗೋಸಾಗಾಟ ಹಾಗೂ ಗೋಹತ್ಯೆ ನಡೆಸುತ್ತಿರುವುದು ಆತಂಕಕ್ಕೆ ಕಾರಣವಾಗುತ್ತಿದ್ದು, ಸರಕಾರ, ಜಿಲ್ಲಾಡಳಿತಗಳು, ಜನಪ್ರತಿನಿಧಿಗಳು ಗೋಕಳ್ಳರು, ಗೋ ಹಂತಕರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಆಗ್ರಹಿಸಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿರುವ ಗೋಶಾಲೆಗಳಿಂದ ಗೋವುಗಳನ್ನು ಹೊತ್ತೂಯ್ಯುತ್ತಿರುವುದನ್ನು ತೀವ್ರವಾಗಿ ಖಂಡಿಸುತ್ತಿದ್ದೇವೆ. ಈ ಬಗ್ಗೆ ಹಿಂದೂ ಸಂಘಟನೆಗಳು ಹಾಗೂ ಅನೇಕ ರೈತರು ತಮ್ಮಲ್ಲಿ ನೋವು ದುಃಖ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಡಳಿತ ತುರ್ತು ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಪೇಜಾವರ ಶ್ರೀಗಳ ಆಗ್ರಹಕ್ಕೆ ಸಂಪೂರ್ಣ ಬೆಂಬಲ ಪೇಜಾವರ ಶ್ರೀಗಳ ಆಗ್ರಹಕ್ಕೆ ಮೂಡುಬಿದಿರೆ ಜೈನ ಕಾಶಿ ಶ್ರೀ ದಿಗಂಬರ ಜೈನ ಮಠದ ಜಗದ್ಗುರು ಡಾ| ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿ ಅವರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಕೋವಿಡ್ ದಿಂದ ದೇಶ ಲಾಕ್ ಡೌನ್‌ಗೆ ಒಳಗಾಗಿರುವುದನ್ನು ಗಮನಿಸಿ ಕೆಲವರು ಮಾಡುತ್ತಿರುವ ಗೋ ಅಪಹರಣ ಹಾಗೂ ಹತ್ಯೆ, ನದಿಗೆ ಸ್ಫೋಟಕ ಬಳಸಿ ಮೀನಿನ ಸಾಮೂಹಿಕ ಹತ್ಯೆಯನ್ನು ಕೊಡಲೇ ಪತ್ತೆ ಹಚ್ಚಿ ಶಿಕ್ಷೆ ನೀಡಲಿ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ
Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು
Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್?
Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್ ಹೊರತೆಗೆದ ವೈದ್ಯರು!
Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್ ಕಾಳಿಂಗ’:ಅಧಿಕೃತವಾಗಿ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.