ಹೊರಗಡೆಯಿಂದ ಬರುವವರಿಗೆ ಕ್ವಾರಂಟೈನ್ ಕಡ್ದಾಯ
Team Udayavani, May 13, 2020, 1:21 PM IST
ಸಾಂದರ್ಭಿಕ ಚಿತ್ರ
ಚಿಕ್ಕಮಗಳೂರು: ಸೇವಾಸಿಂಧು ಆನ್ ಲೈನ್ ಮೂಲಕ ಅರ್ಜಿಸಲ್ಲಿಸಿ ಹೊರದೇಶ ಹಾಗೂ ಹೊರ ರಾಜ್ಯಗಳಿಂದ ಜಿಲ್ಲೆಗೆ ಬರುವ ವ್ಯಕ್ತಿಗಳನ್ನು ತಪಾಸಣೆ ನಡೆಸಿ ಕಡ್ಡಾಯವಾಗಿ ಕ್ವಾರಂಟೈನ್‌ನಲ್ಲಿ ಇರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್ ತಿಳಿಸಿದರು.
ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ಗೆ ಸಂಬಂಧಿಸಿದಂತೆ ಹೊರದೇಶ ಹಾಗೂ ಹೊರರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಬಂದವರನ್ನು ನಿಗಾವಹಿಸುವ ಕುರಿತು ವಿವಿಧ ಇಲಾಖೆ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಸೇವಾಸಿಂಧು ಮೂಲಕ ಅರ್ಜಿಸಲ್ಲಿಸಿ ಜಿಲ್ಲೆಯೊಳಗೆ ಹೊರ ದೇಶ ಹಾಗೂ ಹೊರ ರಾಜ್ಯಗಳಿಂದ ಬರುವ ವ್ಯಕ್ತಿಗಳ ಆರೋಗ್ಯ ತಪಾಸಣೆ ನಡೆಸಿ ಕಡ್ಡಾಯವಾಗಿ ಕ್ವಾರಂಟೈನ್ ನಲ್ಲಿರಿಸಲಾಗುವುದು. ಜಿಲ್ಲೆಯ ತೇಗೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಬೇಲೂರು ರಸ್ತೆಯಲ್ಲಿ 2 ಹೋಟೆಲ್ ನಿಗದಿಪಡಿಸಲಾಗಿದೆ ಎಂದರು.
ತಮಿಳುನಾಡು, ರಾಜಸ್ಥಾನ, ಮಹಾರಾಷ್ಟ್ರದಂತಹ ಹೆಚ್ಚು ಸೋಂಕಿನ ಪ್ರಕರಣಗಳಿರುವ ಪ್ರದೇಶದಿಂದ ಬಂದವರನ್ನು ತಪಾಸಣೆ ನಡೆಸಿ ಸೋಂಕಿನ ಲಕ್ಷಣಗಳಿದ್ದಲ್ಲಿ ಕೋವಿಡ್ ಸೆಂಟರ್‌ನಲ್ಲಿರಿಸಲಾಗುವುದು. ಜಿಲ್ಲೆಯ ಎಲ್ಲಾ ಗಡಿ ಭಾಗಗಳಲ್ಲಿ ಸೂಕ್ತಭದ್ರತೆ ಕಲ್ಪಿಸಿದ್ದು, ಹೊರಭಾಗಗಳಿಂದ ಬಂದ ವ್ಯಕ್ತಿಗಳನ್ನು ತಪಾಸಣೆ ಮಾಡಿ 14 ದಿನಗಳ ಕಾಲ ಕ್ವಾರಂಟೈನ್‌ನಲ್ಲಿಡಬೇಕು ಎಂದು ಸೂಚಿಸಿದರು.
ಹೊರದೇಶಗಳಿಂದ ವಿದ್ಯಾರ್ಥಿಗಳು, ವೈದ್ಯರು ಸೇರಿದಂತೆ ವಿವಿಧ ವರ್ಗಗಳ ಜನರು ಬರುವಾಗ ಅವರಿಗೆ ಹೋಟೆಲ್ ವ್ಯವಸ್ಥೆ ಅಗತ್ಯವೆನಿಸಿದಲ್ಲಿ ಅದಕ್ಕೆ ಅವಕಾಶ ಕಲ್ಪಿಸಲಾಗುವುದು. ಆದರೆ, ಅದರ ಸಂಪೂರ್ಣ ವೆಚ್ಚವನ್ನು ಅವರೆ ಭರಿಸಬೇಕು ಸಾಧ್ಯವಾದಷ್ಟು ಮಂದಿಗೆ ಹಾಸ್ಟೆಲ್ ಕ್ವಾರಂಟೈನ್ ನಲ್ಲಿರಿಸಲು ಕ್ರಮವಹಿಸಲಾಗುವುದು ಎಂದರು. ಸಭೆಯಲ್ಲಿ ಜಿಪಂ ಸಿಇಒ ಎಸ್.ಪೂವಿತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಪಾಂಡೆ, ಅಪರ ಜಿಲ್ಲಾಧಿಕಾರಿ ಡಾ| ಕುಮಾರ್, ಉಪವಿಭಾಗಾಧಿಕಾರಿ ಡಾ| ಎಚ್.ಎಲ್.ನಾಗರಾಜ್, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.