ಕೋವಿಡ್ ವೈರಸ್ ನಿರ್ವಹಣೆಯಲ್ಲಿ ಉಭಯ ಸರ್ಕಾರಗಳು ವಿಫಲ: ಮಾನ್ಪಡೆ
Team Udayavani, May 13, 2020, 3:34 PM IST
ಸಾಂದರ್ಭಿಕ ಚಿತ್ರ
ಆಳಂದ: ಕೋವಿಡ್-19 ಹರಡದಂತೆ ಮುಂಜಾಗೃತಾ ಕ್ರಮವಾಗಿ ಆರಂಭ ಮತ್ತು ನಂತರ ಹೇಗೆ ನಿರ್ವಹಿಸಿ ಜನಹಿತ ಕಾಪಾಡುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ ಎಂದು ಕರ್ನಾಟಕ ಪ್ರಾಂತ ರೈತ ಸಂರ್ಘದ ರಾಜ್ಯ ಉಪಾಧ್ಯಕ್ಷ ಮಾರುತಿ ಮಾನ್ಪಡೆ ಆರೋಪಿಸಿದರು.
ತಾಲೂಕಿನ ಹಿರೋಳಿಯ ಗಡಿಯಲ್ಲಿ ವಲಸೆ ಕಾರ್ಮಿಕರ ತಪಾಸಣೆ ಕೇಂದ್ರದ ತಂಗು ಪ್ರದೇಶಕ್ಕೆ ಭೇಟಿ ನೀಡಿ ಕಾರ್ಮಿಕರ ಯೋಗಕ್ಷೇಮ ವಿಚಾರಿಸಿದ ಬಳಿಕ ಅವರು ಮಾತನಾಡಿದರು. ಲಾಕ್‌ಡೌನ್ ಸಡಿಲಿಕೆಯಿಂದ ಅಂತಾರಾಜ್ಯ ಸಂಚಾರಕ್ಕೆ ವಲಸೆ ಕಾರ್ಮಿಕರಿಗೆ ಅವಕಾಶ ನೀಡಲಾಗಿದೆ. ಹಾಗಾಗಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಮಿಕರು ಮಹಾರಾಷ್ಟ್ರದಿಂದ ಬರುತ್ತಿದ್ದಾರೆ. ಆಡಳಿತ ಸಾಮಾಜಿಕ ಅಂತರ ಕಾಪಾಡುವುದರ ಜತೆಗೆ ಎಲ್ಲ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು. ಒಂದು ವೇಳೆ ನಿರ್ಲಕ್ಷಿಸಿದರೆ ಆಡಳಿತವೇ ಹೊಣೆಯಾಗುತ್ತದೆ ಎಂದು ಅವರು ಎಚ್ಚರಿಸಿದರು.
ಉದ್ಯೋಗ ಆರಿಸಿ ಮಹಾರಾಷ್ಟ್ರಕ್ಕೆ ಹೋಗಿದ್ದ ಕಾರ್ಮಿಕರು ಮರಳಿ ಬಂದ ಬಳಿಕ ತಕ್ಷಣವೇ ಉದ್ಯೋಗ ಸೇರಿ ಸೌಲಭ್ಯ ಒದಗಿಸಬೇಕು. ರೈತರ ಖಾತೆಗಳಿಗೆ 10 ಸಾವಿರ ಹಾಗೂ ಕಾರ್ಮಿಕರ ಖಾತೆಗಳಿಗೆ 7 ಸಾವಿರ ರೂ. ಆರ್ಥಿಕ ನೆರವು ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಸಂಕಷ್ಟದಲ್ಲಿರುವ ರೈತರ ಸಂಪೂರ್ಣ ಸಾಲಮನ್ನಾ ಒಮ್ಮೆ ಆಗಲೇಬೇಕು. ಇದರಿಂದ ರೈತರು ಸ್ವಾವಲಂಬಿಗಳಾಗಿ ಅನ್ನ ಬೆಳೆದು ದೇಶಕ್ಕೆ ಕೊಡುತ್ತಾರೆ. ಬೆಳೆದ ಬೆಲೆಗೆ ಬೆಂಬಲ ಬೆಲೆ ನೀಡಬೇಕು. ಕೇಂದ್ರ ಸರ್ಕಾರಕ್ಕೆ ಕೃಷಿಕರ ಮೇಲೆ ನಿಜವಾದ ಕಾಳಜಿ ಇದ್ದಿದ್ದೆಯಾದರೆ ಡಾ| ಸ್ವಾಮಿನಾಥನ್ ವರದಿ ಅನುಷ್ಠಾನಕ್ಕೆ ತರಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.