ಕೈಗಾರಿಕಾ ವಲಯಕ್ಕೆ ಮೂರು ಲಕ್ಷ ಕೋಟಿ ಆರ್ಥಿಕ ನೆರವು ಸ್ವಾಗತಾರ್ಹ: ಬಿ.ಎಸ್. ಯಡಿಯೂರಪ್ಪ
Team Udayavani, May 13, 2020, 9:16 PM IST
ಬೆಂಗಳೂರು: ನಿನ್ನೆ ಪ್ರಧಾನಿಯವರು ಆರ್ಥಿಕ ಪುನಶ್ಚೇತನಕ್ಕಾಗಿ 20 ಲಕ್ಷ ಕೋಟಿಗಳ ಪ್ಯಾಕೇಜ್ ಘೋಷಿಸಿದ್ದರು.
ಇದಕ್ಕೆ ಅನುಗುಣವಾಗಿ ಇಂದು ಸಚಿವೆ ನಿರ್ಮಲಾ ಸೀತಾರಾಮನ್ ರವರು ಮೂರು ಲಕ್ಷ ಕೋಟಿ ಹಣಕಾಸು ನೆರವನ್ನು ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಿಗಳಿಗೆ ಸಹಾಯ ಹಸ್ತ ಚಾಚಿದ್ದು ಶ್ಲಾಘನೀಯ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮೂರು ಲಕ್ಷ ಕೋಟಿ ಹಣಕಾಸು ಸಹಾಯ ಕೇವಲ ಆರ್ಥಿಕ ಸಹಾಯವಾಗಿರದೆ ದೇಶದ ಉದ್ಯಮಿಗಳಿಗೆ ಮತ್ತು ಕಾರ್ಮಿಕ ವರ್ಗಕ್ಕೆ ಆರ್ಥಿಕವಾಗಿ ಪುನಶ್ಚೇತನಗೊಳ್ಳುವಲ್ಲಿ ವರದಾನವಾಗಲಿದೆ ಎಂಬುದು ಬಿ.ಎಸ್.ವೈ. ಅಭಿಪ್ರಾಯವಾಗಿದೆ.
ಈ ಆರ್ಥಿಕ ಪುನಶ್ಚೇತನ, ಸಮಯೋಚಿತ ಮತ್ತು ವೈಜ್ಞಾನಿಕವಾಗಿದ್ದು, ಬಹಳ ಆರ್ಥಿಕ ನೈಪುಣ್ಯತೆಯಿಂದ ಕೂಡಿದ್ದು, ಎಂ.ಎಸ್.ಎಂ.ಇ.ಗಳಿಗೆ ಯಾವುದೇ ಗ್ಯಾರಂಟಿ ಇಲ್ಲದೆ ಸಾಲ ಯೋಜನೆ ಘೋಷಣೆ ತಕ್ಷಣ ಕೈಗಾರಿಕೆಗಳನ್ನು ಪುನರಾರಂಭಿಸಲು ಉತ್ತೇಜನಕಾರಿಯಾಗಿ ಪರಿಣಮಿಸುತ್ತದೆ.
ಈ ಹಣಕಾಸು ನೆರವು ದೇಶದ 45 ಲಕ್ಷ ಎಂ.ಎಸ್.ಎಂ.ಇ. (MSME) ಗಳಿಗೆ ಲಾಭವಾಗಲಿದೆ. ಇದರ ಜೊತೆಗೆ ರಾಜ್ಯದ ವಿದ್ಯುತ್ ಕಂಪನಿಗಳಿಗೆ 90 ಸಾವಿರ ಕೋಟಿ ಧನ ಸಹಾಯ, 50 ಸಾವಿರ ಕೋಟಿ ಆದಾಯ ತೆರಿಗೆ ಬಾಕಿ ವಾಪಾಸ್ ಮತ್ತು ತೆರಿಗೆ ವಿನಾಯಿತಿ, 6750 ಕೋಟಿ ರೂ ನೌಕರದಾರರ ಭವಿಷ್ಯ ನಿಧಿಗೆ ನೌಕರದಾರರ ಮತ್ತು ಉದ್ಯಮಿಗಳ ವಂತಿಗೆ ಪಾವತಿ ಮತ್ತು ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಗೆ 30 ಸಾವಿರ ಕೋಟಿ ಹಣಕಾಸು ಸಹಾಯ ಇವುಗಳು ಕೋವಿಡ್-19ರಿಂದ ತತ್ತರಿಸಿದ ಔದ್ಯೋಗಿಕ ವಲಯಕ್ಕೆ ಸಂಜೀವಿನಿಯಾಗಿ ಪರಿಣಮಿಸಲಿದೆ.
ಇವತ್ತಿನ ವಿಶೇಷತೆ ಏನೆಂದರೆ, 200 ಕೋಟಿವರೆಗಿನ ಟೆಂಡರ್ ಪ್ರಕ್ರಿಯೆಯಲ್ಲಿ ಭಾರತೀಯ ಕಂಪನಿಗಳಿಗೆ ಮತ್ತು ಗುತ್ತಿಗೆದಾರರಿಗೆ ಮಾತ್ರ ಭಾಗವಹಿಸಲು ಅನುವು ಮಾಡಿಕೊಟ್ಟಿದ್ದು ಸ್ವದೇಶಿ ಕಂಪನಿಗಳು ಬೆಳೆಯುವಲ್ಲಿ ದೊಡ್ಡ ಪ್ರೇರಕ ಯೋಜನೆಯಾಗಲಿದೆ.
ಕೋವಿಡ್-19ರಿಂದ ತತ್ತರಿಸಿದ ಜಗತ್ತಿನ ಯಾವುದೇ ದೇಶ ಔದ್ಯೋಗಿಕ ವಲಯಕ್ಕೆ ಇಂತಹ ಆರ್ಥಿಕ ಪುನಶ್ಚೇತನ ಕಾರ್ಯಕ್ರಮವನ್ನು ಘೋಷಿಸಿಲ್ಲ ಎಂದರೆ ಅತಿಶಯೋಕ್ತಿಯಲ್ಲ. ಲಾಕ್ ಡೌನ್ ವ್ಯವಸ್ಥೆಯಿಂದ ಹೊರಬಂದು ಜನತೆ ತಮ್ಮ ತಮ್ಮ ದಿನನಿತ್ಯದ ದುಡಿಮೆಯನ್ನು ಪ್ರಾರಂಭಿಸಲು ಪ್ರೇರೇಪಿಸಿದ ಮೊದಲ ದಿಟ್ಟ ಹೆಜ್ಜೆ ಇದಾಗಿದೆ ಎಂದು ಮುಖ್ಯಮಂತ್ರಿಯವರು ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.