ಇನ್ನೊಂದು ವೈಯಕ್ತಿಕ ಒಲಿಂಪಿಕ್ಸ್ ಚಿನ್ನಕ್ಕೆ ಭಾರತ ಹೆಚ್ಚು ಕಾಯಬೇಕಾಗಿಲ್ಲ: ಬಿಂದ್ರಾ
Team Udayavani, May 14, 2020, 6:26 AM IST
ಹೊಸದಿಲ್ಲಿ: ಭಾರತದ ಒಲಿಂಪಿಕ್ಸ್ ಇತಿಹಾಸದಲ್ಲಿ ವೈಯಕ್ತಿಕ ಚಿನ್ನದ ಪದಕ ಗೆದ್ದಿರುವ ಏಕೈಕ ಕ್ರೀಡಾಪಟು ಎಂಬ ಹೆಗ್ಗಳಿಕೆ ಲೆಜೆಂಡ್ರಿ ಶೂಟರ್ ಅಭಿನವ್ ಬಿಂದ್ರಾ ಅವರಿಗೆ ಸಲ್ಲುತ್ತದೆ. ಆದರೆ ಭಾರತ ಈ ಪ್ರತಿಷ್ಠಿತ ಕ್ರೀಡಾಕೂಟದಲ್ಲಿ ಇನ್ನೊಂದು ವೈಯಕ್ತಿಕ ಬಂಗಾರ ಗೆಲ್ಲುವ ದಿನಗಳು ದೂರವಿಲ್ಲ ಎಂಬುದಾಗಿ ಅವರು ಅಭಿಪ್ರಾಯಪಡುತ್ತಾರೆ.
“ನಾನು ಈ ವರ್ಷದ ಜುಲೈ-ಆಗಸ್ಟ್ ತಿಂಗಳನ್ನು ಬಹಳ ಕಾತರದಿಂದ ಕಾಯುತ್ತಿದ್ದೆ. ಕಾರಣ, ಟೋಕಿಯೊ ಒಲಿಂಪಿಕ್ಸ್. ನಾನು ಈ ಮಹೋನ್ನತ ಕ್ರೀಡಾಕೂಟದಲ್ಲಿ ವೈಯಕ್ತಿಕ ಸ್ವರ್ಣ ಪದಕ ಗೆದ್ದ ಭಾರತದ ಏಕೈಕ ಕ್ರೀಡಾಪಟುವಾಗಿ ಉಳಿಯಬಾರದು, ಇನ್ನೊಂದು ಬಂಗಾರದ ಸಾಧನೆಗೆ ವೇದಿಕೆ ನಿರ್ಮಾಣಗೊಂಡಿದೆ ಎಂಬುದು ನನ್ನ ಲೆಕ್ಕಾಚಾರವಾಗಿತ್ತು. ಇದಕ್ಕೀಗ ಮುಂದಿನ ವರ್ಷದ ಜುಲೈ ತನಕ ಕಾಯಬೇಕಾಗಿದೆ’ ಎಂದು 2008ರ ಬೀಜಿಂಗ್ ಒಲಿಂಪಿಕ್ಸ್ ಶೂಟಿಂಗ್‌ನಲ್ಲಿ ಚಿನ್ನದ ಪದಕ ಗೆದ್ದ ಅಭಿನವ್ ಬಿಂದ್ರಾ ಹೇಳಿದರು.
“ಭಾರತದಲ್ಲಿ ಈಗ ವಿವಿಧ ಕ್ರೀಡೆಗಳಲ್ಲಿ ಬಹಳಷ್ಟು ಮಂದಿ ಪ್ರತಿಭಾನ್ವಿತರಿದ್ದಾರೆ. ಇವರಿಗೆ ಸೂಕ್ತ ತರಬೇತಿ, ಮಾರ್ಗದರ್ಶನ ಲಭಿಸಿದರೆ ಒಲಿಂಪಿಕ್ಸ್‌ನಲ್ಲಿ ವೈಯಕ್ತಿಕ ಪದಕ ಗೆಲ್ಲುವುದು ಅಸಾಧ್ಯವಲ್ಲ. ಕೂಟವೀಗ ಒಂದು ವರ್ಷ ಮುಂದೂಡಲ್ಪಟ್ಟ ಕಾರಣ ಇವರಿಗೆ ಇನ್ನಷ್ಟು ಕಾಲಾವಕಾಶ ಸಿಕ್ಕಿದೆ. ಇದರಿಂದ ಟೋಕಿಯೊದಲ್ಲಿ ಉತ್ತಮ ಪ್ರದರ್ಶನ ನೀಡಲು ಸಾಧ್ಯ’ ಎಂದು ಸೋನಿ ಟೆನ್ ಚಾನೆಲ್ ಏರ್ಪಡಿಸಿದ “ದಿ ಮೆಡಲ್ ಆಫ್ ಗ್ಲೋರಿ’ ಕಾರ್ಯಕ್ರಮದಲ್ಲಿ ಆಶಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.