ಕೋವಿಡ್ 19 ನಿಯಂತ್ರಣ ಮಾಹಿತಿ ನೀಡಿದ ಮೇಯರ್
Team Udayavani, May 14, 2020, 4:04 AM IST
ಬೆಂಗಳೂರು: ನಗರದಲ್ಲಿ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರಿಗೆ ಮಾಹಿತಿ ನೀಡಿದ್ದಾರೆ. ಬಿಜೆಪಿ ಆಡಳಿತವಿರುವಮಹಾನಗರಪಾಲಿಕೆಗಳ ಮೇಯರ್ ಹಾಗೂ ಉಪ ಮೇಯರ್ ಅವರೊಂದಿಗೆ ಜೆ.ಪಿ.ನಡ್ಡಾ ಹಾಗೂ ಬಿ.ಎಲ್.ಸಂತೋಷ್ ಬುಧವಾರ ವಿಡಿಯೋ ಸಂವಾದ ನಡೆಸಿದರು.
ಈ ವೇಳೆ ಪ್ರತಿಕ್ರಿಯಿಸಿದ ಮೇಯರ್, ಬೆಂಗಳೂರಿನಲ್ಲಿ ಕೋವಿಡ್ 19 ನಿಯಂತ್ರಣಕ್ಕೆ 10 ಐಎಎಸ್ ಅಧಿಕಾರಿಗಳು 13 ಮಂದಿ ಕೆಎಎಸ್ ಸೇರಿದಂತೆ 1,643 ಅಧಿಕಾರಿಗಳು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಸೋಂಕು ಚಿಕಿತ್ಸೆಗೆ 28 ಖಾಸಗಿ ಆಸ್ಪತ್ರೆಗಳನ್ನು ಗುರುತಿಸಲಾಗಿದ್ದು, ಈಗ ವಿಕ್ಟೋರಿಯಾ ಹಾಗೂ ಸಿ.ವಿ.ರಾಮನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ 750 ಹಾಸಿಗೆ, ಸಿ.ವಿ.ರಾಮನ್ ನಗರ ಆಸ್ಪತ್ರೆಯಲ್ಲಿ 150 ಹಾಸಿಗೆ ಸೌಲಭ್ಯ ಇದೆ ಎಂದು ಮಾಹಿತಿ ನೀಡಿದರು. ಹೋಟೆಲ್ ಮತ್ತು ಹಾಸ್ಟೆಲ್‌ಗಳಲ್ಲಿ ಕ್ವಾರಂಟೈನ್‌ನಲ್ಲಿ ಇರುವವರಿಗೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಕಂಟೈನ್ಮೆಂಟ್ ಪ್ರದೇಶಗಳಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಮಾಡ ಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಈ ವೇಳೆ ಉಪಮೇಯರ್ ರಾಮಮೋಹನ್ ರಾಜು ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್
Fraud Case: ಟೆಕಿಗೆ ವಂಚನೆ ಕೇಸ್; ಆರೋಪಿ ಪತ್ತೆಗೆ ತಂಡ ರಚನೆ
New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ
Fraud case: ಚಿನ್ನಾಭರಣ ವಂಚನೆ ಕೇಸ್; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.