ರಾಜ್ಯಕ್ಕೆ ತಮಿಳುನಾಡು ಕಾರ್ಮಿಕರ ವಲಸೆ


Team Udayavani, May 14, 2020, 4:28 AM IST

valase tamil

ಬೆಂಗಳೂರು: ನಗರ ಜಿಲ್ಲಾಡಳಿತ ಪ್ರದೇಶ ವ್ಯಾಪ್ತಿಯ ಗಾರ್ಮೆಂಟ್‌ ಸೇರಿದಂತೆ ಇನ್ನಿತರ ಕಾರ್ಖಾನೆಗಳಲ್ಲಿ ತಮಿಳುನಾಡು ಭಾಗದ ಕಾರ್ಮಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಆ ಹಿನ್ನೆಲೆಯಲ್ಲಿಯೇ ಅನೇಕಲ್‌ ತಾಲೂಕಿನ ಮರಸೂರು ಗ್ರಾಮ  ಪಂಚಾಯ್ತಿ ಅಧ್ಯಕ್ಷರು 18 ವಿವಿಧ ಗಾರ್ಮೆಂಟ್‌ ಮತ್ತು ಇತರೆ ಕಂಪನಿಗಳ ಮಾಲೀಕರ ಮತ್ತು ಮಾನಸಂಪನ್ಮೂಲ ಅಧಿಕಾರಿಗಳ ಸಭೆ ನಡೆ ಚರ್ಚೆ ನಡೆಸಿದರು.

ತಮಿಳುನಾಡಿನಲ್ಲಿ ಕೊರೊನಾ ಸೋಂಕಿನ ಪ್ರಮಾಣ ಅಧಿಕವಾಗಿದೆ. ಆದರೆ  ಯಾವುದೇ ಆರೋಗ್ಯ ತಪಾಸಣೆ ಇಲ್ಲದೇ ತಮಿಳುನಾಡು ಭಾಗದಿಂದ ಕಾರ್ಮಿಕರು ಮರಸೂರು ಗ್ರಾಪಂ ವ್ಯಾಪ್ತಿಯ ಹಲವು ಗಾರ್ಮೆಂಟ್‌ ಕಾರ್ಖಾನೆಗಳಲ್ಲಿ ಕೆಲಸ ಮಾಡುತ್ತಿರುವುದಕ್ಕೆ  ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದರು. ಆ ಹಿನ್ನೆಲೆಯಲ್ಲಿಯೇ ಗ್ರಾಪಂ ಅಧ್ಯಕ್ಷರು ಸ್ಥಳೀಯ ಗಾರ್ಮೆಂಟ್‌ ಸೇರಿದಂತೆ ಇನ್ನಿತರ ಕಾರ್ಖಾನೆಯ ಮಾಲೀಕರ ಸಭೆ ನಡೆಸಿ ಸಮಾಲೋಚನೆ ನಡೆಸಿದರು.

ಈಗಾಗಲೇ ಸರ್ಕಾರ ಕೆಲವು ಷರತ್ತು ವಿಧಿಸಿ ಗಾರ್ಮೆಂಟ್‌ ಮೊದಲಾದ ಕಾರ್ಖಾನೆಗಳ ಕಾರ್ಯಕ್ಕೆ ಅನುಮತಿ  ನೀಡಿದೆ. ಆದರೆ ಯಾವುದೇ ಕಾರಣಕ್ಕೂ ಆರೋಗ್ಯ ಪರೀಕ್ಷೆ ನಡೆಸದೇ ಹೊರ ರಾಜ್ಯದವರಿಗೆ ಕೆಲಸ ನೀಡುವುದು ಬೇಡ ಎಂದು ಸಭೆಯಲ್ಲಿ ಗ್ರಾಪಂ ಅಧ್ಯಕ್ಷ ಪ್ರಭಾಕರ ರೆಡ್ಡಿ ಮನವಿ ಮಾಡಿದರು.  ಒಂದು ವೇಳೆ ಅಗತ್ಯವಿದ್ದರೆ. ಆರೋಗ್ಯ ತಪಾಸಣೆ ನಡೆಸಿ ಕೆಲಸಕ್ಕೆ ಅವರನ್ನು ತೆಗೆದುಕೊಳ್ಳಿ.ಇಲ್ಲವೇ ಸ್ಥಳೀಯರನ್ನೇ ಕೆಲಸಕ್ಕೆ ತೆಗೆದುಕೊಳ್ಳಿ ಎಂದು ಅಧ್ಯಕ್ಷರು ಹೇಳಿದರು. ತಮಿಳುನಾಡಿನಿಂದ ಬರುತ್ತಿರುವ ಕಾರ್ಮಿಕರಲ್ಲಿ ಸೋಂಕು  ಕಂಡು ಬಂದರೆ ಅದಕ್ಕೆ ನೀವೇ ಹೊಣೆಗಾರರಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಹೋಮ್‌ ಕ್ವಾರಂಟೈನ್‌ಗೆ ಸಮ್ಮತಿ: ಹೊರ ರಾಜ್ಯಗಳಿಂದ ಬರುತ್ತಿರುವ ಕಾರ್ಮಿಕರಿಗೆ 14 ದಿನಗಳ ಹೋಮ್‌ ಕ್ವಾರಂಟೈನ್‌ ಮಾಡಲು ಮರಸೂರು ಗ್ರಾಪಂ ನಿರ್ಧರಿಸಿತ್ತು. ಇದಕ್ಕೆ ಗಾರ್ಮೆಂಟ್‌ ಮತ್ತು ಇತರೆ ಕಾರ್ಖಾನೆಗಳ ಮಾಲೀಕರೂ  ಒಪ್ಪಿಗೆ ಸೂಚಿಸಿದರು. ಆರೋಗ್ಯ ತಪಾಸಣೆಯ ಪತ್ರವಿಲ್ಲದೇ ಕಾರ್ಮಿಕರನ್ನು ಕೆಲಸಕ್ಕೆ ತೆಗೆದುಕೊಳ್ಳುವುದಿಲ್ಲ ಎಂದು ಗಾರ್ಮೆಂಟ್‌ ಮಾಲೀಕರು ಅಭಯ ನೀಡಿದರು. 14 ದಿನಗಳ ಹೋಮ್‌ ಕ್ವಾರಂಟೈನ್‌ ಮುಗಿಸಿದ ಕಾರ್ಮಿಕರನ್ನು  ಕೆಲಸಕ್ಕೆ ತೆಗೆದುಕೊಳ್ಳುವುದಾಗಿ ಹೇಳಿದರು. ಕೊರೊನಾ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕಾರ್ಯನಿರ್ವಹಿಸುವುದಾಗಿ ಕೆಲವು ಕಂಪನಿಯ ಮಾನವಸಂಪನ್ಮೂಲ ಅಧಿಕಾರಿ ಗಳು ಸಭೆಗೆ ತಿಳಿಸಿದರು.

ತಮಿಳುನಾಡಿನಿಂದ ಬರುತ್ತಿರುವ ಕಾರ್ಮಿಕರಿಗೆ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಆ ಹಿನ್ನೆಲೆಯಲ್ಲಿ ಸಂಬಂಧ ಪಟ್ಟ ಗಾರ್ಮೆಂಟ್‌ ಮತ್ತು ಇತರೆ ಕಾರ್ಖಾನೆಗಳ ಮಾಲೀಕರ ಸಭೆ ನಡೆಸಲಾಗಿದ್ದು, ಹೊರ ರಾಜ್ಯದ  ಕಾರ್ಮಿಕರನ್ನು 14 ದಿನಗಳ ಹೋಮ್‌ ಕ್ವಾರಂಟೈನ್‌ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
-ಶಶಿಕಿರಣ್‌, ಪಿಡಿಒ ಮರಸೂರು ಗ್ರಾಪಂ

ಟಾಪ್ ನ್ಯೂಸ್

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.