![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 14, 2020, 5:55 AM IST
ಮಾಗಡಿ: ನರಭಕ್ಷಕ ಚಿರತೆ ಕೊನೆಗೂ ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಮಂಗಳವಾರ ಬಿದ್ದಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ತಾಲೂಕಿನ ಕಸಬಾ ಹೋಬಳಿ ಬೆಳಗುಂಬ ಗ್ರಾಪಂ ವ್ಯಾಪ್ತಿಯ ಕದರಯ್ಯನಪಾಳ್ಯದ ಗ್ರಾಮದಲ್ಲಿ ಕಳೆದ 5 ದಿನಗಳ ಹಿಂದೆಯಷ್ಟೆ ಮನೆಯಲ್ಲಿ ಮಲಗಿದ್ದ ಮೂರು ವರ್ಷದ ಹೇಮಂತ್ ಎಂಬ ಮಗು ಹೊತ್ತೂಯ್ದು ಭಕ್ಷಿಸಿದ್ದ ನರಭಕ್ಷಕ ಚಿರತೆ, ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಬಿದ್ದಿದೆ.
ಅದನ್ನು ಸೆರೆಹಿಡಿದ ಅರಣ್ಯಾಧಿಕಾರಿಗಳು ದೂರದ ಕಾಡಿಗೆ ಬಿಟ್ಟಿದ್ದಾರೆ. ನರಭಕ್ಷಕ ಚಿರತೆ ದಾಳಿಗೆ ಬಲಿಯಾದ ದಿನವೇ ಮಗುವಿನ ಮನೆಗೆ ಬಂದಿದ್ದ, ಅರಣ್ಯ ನಂದ್‌ಸಿಂಗ್ ಮತ್ತು ಸಂಸದ ಡಿ.ಕೆ. ಸುರೇಶ್ ಹಾಗೂ ಶಾಸಕ ಎ. ಮಂಜುನಾಥ್, ಕುಟುಂಬಕ್ಕೆ ಸಾಂತ್ವನ ಹೇಳಿ ಸರ್ಕಾರದಿಂದ 7.5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದರು.
ಮೂರು ವರ್ಷದ ಹೇಮಂತ್ ಎಂಬ ಮಗುವನ್ನು ಬಲಿ ತೆಗೆದಕೊಂಡ ನರಭಕ್ಷಕ ಚಿರತೆಯನ್ನು ಕಾರ್ಯಾಚರಣೆ ನಡೆಸಿ ಹಿಡಿಯಬೇಕೆಂದು ವಲಯ ಅರಣ್ಯಾಧಿಕಾರಿ ಕೆ. ಪುಷ್ಪಲತಾ ಅವರಿಗೆ ಸೂಕ್ತ ನಿರ್ದೇ ಶಕ ನೀಡಿ ಆದೇಶಿಸಿದ್ದರು.
ಕಾರ್ಯ ಪ್ರವೃತ್ತರಾದ ಅರಣ್ಯಾಧಿಕಾರಿಗಳು ಚಿರತೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆದರೂ ಸ್ಥಳೀಯವಾಗಿ ಜನರು ನರಭಕ್ಷಕ ಚಿರತೆ ಇದಲ್ಲ ಎಂಬ ಅನುಮಾನ ವ್ಯಕ್ತಪಡಿಸಿದ್ದು, ಮತ್ತೂಂದು ಚಿರತೆಯಿದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಏನೇ ಆದರೂ ಜನರಲ್ಲಿದ್ದ ಭೀತಿ ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆ ಎನ್ನಲಾಗಿದೆ.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ
Ramanagara: ಬೆಂ.-ಮೈ. ಎಕ್ಸ್ ಪ್ರೆಸ್‌ವೇ ಬಿಡದಿ ಎಕ್ಸಿಟ್ ಬಂದ್
Ramanagara: ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?
Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.