ಕೋವಿಡ್ 19 ತಡೆಗೆ ಶಾಸಕರ ತುರ್ತುಸಭೆ


Team Udayavani, May 14, 2020, 6:33 AM IST

turtu sabhe

ಚಿಂತಾಮಣಿ: ನಗರದಲ್ಲಿ ಮೂವರಿಗೆ ಕೋವಿಡ್ 19 ಸೊಂಕು ಪತ್ತೆಯಾಗಿದ್ದು, ಈಗಾಗಲೇ 230ಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೊಳಪಡಿಸಿ 59 ಮಂದಿಯನ್ನು ಕ್ವಾರಂಟೈನ್‌ ಮಾಡ ಲಾಗಿದ್ದು, ಜನತೆ ಅನವಶ್ಯಕವಾಗಿ ಮನೆಗಳಿಂದ ಆಚೆ  ಬಾರದೇ ಪೊಲೀಸರಿಗೆ, ಅಧಿಕಾರಿಗಳಿಗೆ ಸಹಕಾರ ನೀಡಬೇಕೆಂದು ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಮನವಿ ಮಾಡಿದರು.

ಕೋವಿಡ್ 19 ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ 19 ತಡೆಗಾಗಿ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. 3 ದಿನಗಳ ಹಿಂದೆ ನಗರದ ವಾರ್ಡ್‌ ನಂ 9ರಲ್ಲಿ ಒಂದೇ ಮನೆಯ ಮೂವರಿಗೆ ಕೋವಿಡ್ 19 ಪತ್ತೆಯಾಗಿದೆ. ಹೀಗಾಗಿ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಮತ್ತಷ್ಟು ಬಿಗಿ  ಮ ಕೈಗೊಳ್ಳಲು ಆರೋಗ್ಯ ಇಲಾಖೆ, ನಗರಸಭೆ, ತಾಲೂಕು ಆಡಳಿತಕ್ಕೆ ಹಲವು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

1200 ಹಾಸಿಗೆ ಸಿದ್ಧಪಡಿಸಿ: ಇನ್ನೂ ನಗರದಲ್ಲಿ ಕಂಡು ಬಂದಿರುವ ಮೂವರ ಸೋಂಕಿತರ  ಸಂಪರ್ಕದಲ್ಲಿರುವರನ್ನು ಕ್ವಾರಂಟೈನ್‌ ಮಾಡಲು ಮುನ್ನೆಚ್ಚರಿಕೆಯಾಗಿ 1200ಕ್ಕೂ ಹೆಚ್ಚಿನ ಹಾಸಿಗೆ ಸಿದಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸೀಲ್‌ ಡೌನ್‌ ಪ್ರದೇಶದಲ್ಲಿ ಅನವಶ್ಯಕವಾಗಿ ಓಡಾಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದೆಂದರು.

ಇನ್ನೂ ಇದೇ ವೇಳೆ ಸಿಲ್‌ಡೌನ್‌ ಆಗಿರುವ ವಾರ್ಡ್‌ ನಂ 9 ರಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಪೊಲೀಸ್‌ ಇಲಾಖೆಯಿಂದ ಡ್ರೋನ್‌ ಕ್ಯಾಮರಾ ಬಳಕೆ ಮಾಡಲಾಗುತ್ತಿದೆ ಎಂದು  ಹೇಳಿದರು.

ತಹಶೀಲ್ದಾರ್‌ ಹನುಮಂತರಾಯಪ್ಪ, ತಾಲೂಕು ಆರೋಗ್ಯಾಧಿಕಾರಿ ರಾಮಚಂದ್ರಾರೆಡ್ಡಿ, ಇಒ ಮಂಜುನಾಥ್‌, ಡಿವೈಎಸ್ಪಿ ಶ್ರೀನಿವಾಸ್‌, ಪೌರಾಯುಕ್ತ ಹರೀಶ್‌, ಬಿಇಒ ಸುರೇಶ್‌, ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ನಾಗೇಂದ್ರಬಾಬು, ನಗರ ಠಾಣೆ ಆರಕ್ಷಕ ವೃತ್ತ ನಿರೀಕ್ಷಕ ಆನಂದ್‌ಕುಮಾರ್‌, ಗ್ರಾಮಾಂತರ ಠಾಣೆ ಆರಕ್ಷಕ ವೃತ್ತ ನಿರೀಕ್ಷಕ ಶ್ರೀನಿವಾಸಪ್ಪ, ಎಲ್ಲಾ ಇಲಾಖೆಗಳ ಅಧಿಕಾರಿಗಳು, ಖಾಸಗಿ ಆಸ್ಪತ್ರೆ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.