ರಿಯಲ್ ಎಸ್ಟೇಟ್ ಕ್ಷೇತ್ರ ನಿರಾಳ
Team Udayavani, May 14, 2020, 7:23 AM IST
ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿ ಕಾರದಡಿ (ರೇರಾ) ಯೋಜನೆಯಡಿ ಬರುವಂಥ ನಿರ್ಮಾಣ ಕಾಮಗಾರಿಗಳು ಹಾಗೂ ಇತರೆ ಪ್ರಾಜೆಕ್ಟ್ಗಳ ನೋಂದಣಿ ಹಾಗೂ ಕಾಮಗಾರಿ ಪೂರ್ಣಗೊಳಿಸುವ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಇದರಿಂದಾಗಿ ರಿಯಲ್ ಎಸ್ಟೇಟ್ ಕ್ಷೇತ್ರ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಲಾಕ್ ಡೌನ್ ನಿಂದಾಗಿ ನಿರ್ಮಾಣ ಕಾಮಗಾರಿ ಸಂಪೂರ್ಣ ಸ್ಥಗಿತಗೊಂಡಿದ್ದು, ಹಣದ ಹರಿವು ಕೂಡ ನಿಂತುಹೋಗಿದೆ.
ಹೀಗಾಗಿ ಸಂಕಷ್ಟದಲ್ಲಿರುವ ರಿಯಲ್ ಎಸ್ಟೇಟ್ ಉದ್ಯಮಕ್ಕೆ ನೆರವಾಗುವ ಸಲುವಾಗಿ ಸರ್ಕಾರವು, ಕೆಲವೊಂದು ನಿಯಮಗಳನ್ನು ಸಡಿಲಿಕೆ ಮಾಡಿದೆ. ಅದರಂತೆ, 2020ರ ಮಾ.25 ರಂದು ಅಥವಾ ನಂತರದಲ್ಲಿ ಪೂರ್ಣಗೊಳಿಸಬೇಕಾಗಿದ್ದ ಎಲ್ಲ ನೋಂದಾಯಿತ ರಿಯಲ್ ಎಸ್ಟೇಟ್ ಯೋಜನೆಗಳನ್ನು ಹಾಗೂ ನೋಂದಣಿ ಪ್ರಕ್ರಿಯೆಗಳನ್ನು 6 ತಿಂಗಳವರೆಗೆ ವಿಸ್ತರಿಸಲಾಗಿದೆ. ಜತೆಗೆ ಪರಿಷ್ಕೃತ ದಿನಾಂಕವನ್ನು ನಮೂದಿಸಿ, ಹೊಸದಾಗಿ ಪ್ರಾಜೆಕ್ಟ್ ನೋಂದಣಿ ಪ್ರಮಾಣಪತ್ರವನ್ನು ವಿತರಣೆ ಮಾಡುವಂತೆಯೂ ಸೂಚಿಸಲಾಗಿದೆ.
ಕೇವಲ ರಿಯಲ್ ಎಸ್ಟೇಟ್ ಗೆ ಮಾತ್ರವಲ್ಲದೆ, ಇತರೆ ಗುತ್ತಿಗೆದಾರರಿಗೂ ಅನುಕೂಲ ಕಲ್ಪಿಸಲಾಗಿದ್ದು, ರೈಲ್ವೆ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ, ಸಿಪಿಡಬ್ಲ್ಯುಡಿ ಯೋಜನೆಗಳನ್ನು ಕೂಡ 6 ತಿಂಗಳವರೆಗೆ ವಿಸ್ತರಿಸುವಂತೆ ಸೂಚಿಸಲಾಗಿದೆ. ಹಾಗಾಗಿ, ಗಡುವಿನೊಳಗಾಗಿ ಕಾಮಗಾರಿ ಪೂರ್ಣಗೊಳಿಸಿಲ್ಲ ಎಂಬ ಕಾರಣಕ್ಕೆ ದಂಡ ತೆರಬೇಕಾದ ಭೀತಿಯಿಂದ ಗುತ್ತಿಗೆದಾರರು ಪಾರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.