ರಾಜ್ಯದಲ್ಲಿ ಸಿಎಪಿಎಫ್ ನಿಯೋಜನೆಗೆ ಮನವಿ
Team Udayavani, May 14, 2020, 8:51 AM IST
ಮುಂಬೈನ ವಲಸೆ ಕಾರ್ಮಿಕರಿಗೆ ಕುಡಿಯಲು ನೀರು ನೀಡುತ್ತಿರುವ ಭದ್ರತಾ ಸಿಬ್ಬಂದಿ
ಮುಂಬಯಿ: ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಅತಿಯಾಗಿ ಕೆಲಸ ಮಾಡುತ್ತಿರುವ ತನ್ನ ಪೊಲೀಸ್ ಸಿಬಂದಿಗೆ ಸ್ವಲ್ಪ ವಿಶ್ರಾಂತಿ ನೀಡುವ ಉದ್ದೇಶದೊಂದಿಗೆ ರಾಜ್ಯ ಸರಕಾರವು ರಾಜ್ಯದಲ್ಲಿ ಸಿಎಪಿಎಫ್ ನ 20 ಕಂಪೆನಿಗಳನ್ನು ನಿಯೋಜಿಸುವಂತೆ ಕೇಂದ್ರವನ್ನು ಕೋರಿದೆ ಎಂದು ರಾಜ್ಯ ಗೃಹ ಸಚಿವ ಅನಿಲ್ ದೇಶಮುಖ್ ಹೇಳಿದ್ದಾರೆ.
ರಾಜ್ಯದಲ್ಲಿ ಕೋವಿಡ್-19 ಹರಡುವುದನ್ನು ತಡೆಯಲು ರಾಜ್ಯ ಪೊಲೀಸ್ ಸಿಬಂದಿ ದಿನದ 24 ತಾಸು ಕೆಲಸ ಮಾಡುತ್ತಿದ್ದಾರೆ. ರಾಜ್ಯ ಪೊಲೀಸ್ ಪಡೆಯ ಹೆಚ್ಚಿನ ಸಿಬಂದಿಯಲ್ಲಿ ಕೋವಿಡ್ ವೈರಸ್ ಪಾಸಿಟಿವ್ ಆಗಿ ಕಂಡುಬಂದಿದೆ. ಹೀಗಾಗಿ, ಅವರಿಗೆ ವಿಶ್ರಾಂತಿ ಮತ್ತು ಚೇತರಿಸಿಕೊಳ್ಳಲು ಸಮಯ ಬೇಕಾಗಲಿದೆ ಎಂದು ದೇಶಮುಖ್ ಹೇಳಿದ್ದಾರೆ.
ಈದ್ ಹಬ್ಬ ಸಮೀಪಿಸುತ್ತಿದ್ದು, ಸರಿಯಾದ ಕಾನೂನು ಮತ್ತು ಸುವ್ಯವಸ್ಥೆಯನ್ನು ಖಾತರಿಪಡಿಸಬೇಕಾಗಿದೆ. ಅದಕ್ಕಾಗಿ ಪೊಲೀಸರು ಸ್ವಲ್ಪ ವಿಶ್ರಾಂತಿ ಪಡೆಯಬೇಕು. ಆದ್ದರಿಂದ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ (ಸಿಎಪಿಎಫ್) 20 ಕಂಪೆನಿಗಳನ್ನು ನಿಯೋಜಿಸುವಂತೆ ನಾವು ಕೇಂದ್ರವನ್ನು ಕೋರಿದ್ದೇವೆ. ಇದು 2,000 ಸಿಬಂದಿಗಳನ್ನು ಒಳಗೊಂಡಿರಲಿದೆ ಎಂದು ಸಚಿವರು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಕೇಂದ್ರ ಸಿಆರ್‌ಪಿಎಫ್ 32 ಕಂಪೆನಿಗಳನ್ನು ನಿಯೋಜಿಸಲಾಗಿದ್ದು, ರಾಜ್ಯ ಪೊಲೀಸರೊಂದಿಗೆ ಸಹಭಾಗಿತ್ವದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.