ಪಾಸಿಟಿವ್‌ ಬಂದಲ್ಲಿ ಕಂಟೇನ್ಮೆಂಟ್‌-ಬಫರ್‌ ಝೋನ್‌ ಸ್ಥಾಪನೆ

Team Udayavani, May 14, 2020, 12:08 PM IST

14-May-06

ರಾಯಚೂರು: ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ತಾಲೂಕು ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದರು

ರಾಯಚೂರು: ಕಟ್ಟುನಿಟ್ಟಿನ ಕ್ರಮಗಳ ಮಧ್ಯೆಯೂ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್‌ ಪ್ರಕರಣ ವರದಿಯಾದರೆ, ಆ ಪ್ರದೇಶದಲ್ಲಿ ಕಂಟೇನ್ಮೆಂಟ್‌ ಹಾಗೂ ಬಫರ್‌ ಜೋನ್‌ಗಳನ್ನು ಸ್ಥಾಪಿಸಿ ಸೋಂಕು ಹರಡದಂತೆ ತಡೆಯುವಂತೆ ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಡೆದ ವಿಡಿಯೋ ಸಂವಾದದಲ್ಲಿ ಸೂಚನೆ ನೀಡಿದರು. ಕಂಟೇನ್ಮೆಂಟ್‌ ವಲಯ ರಚಿಸಿದಲ್ಲಿ ಆ ಪ್ರದೇಶಗಳಲ್ಲಿ ಜನ ಮನೆಯಿಂದ ಹೊರಬಾರದಂತೆ ತಡೆಯಬೇಕು. ಕೋವಿಡ್ ಸೋಂಕು ಹರಡಿದ ದೃಢೀಕರಣ ನಂತರ ಆಯಾ ವಾರ್ಡ್‌ಗಳಲ್ಲಿ ಸೀಲ್‌ಡೌನ್‌ ಮಾಡಬೇಕು. ಸೋಂಕು ಇರುವವರ ಮನೆಯಿಂದ ನೂರು ಮೀಟರ್‌ ದೂರದಲ್ಲಿ ಅವರೊಂದಿಗೆ ಯಾವುದೇ ರೀತಿಯ ಸಂಪರ್ಕ ಇಟ್ಟುಕೊಳ್ಳದಂತೆ ಮಾಡಬೇಕು ಎಂದು ವಿವರಿಸಿದರು.

ಸೀಲ್‌ಡೌನ್‌ ಮಾಡಿದ ನಂತರ ಪೊಲೀಸರು ಆ ಪ್ರದೇಶದಲ್ಲಿ ಬ್ಯಾರಿಕೇಡ್‌ ಅಳವಡಿಸಿ ಜನ ಮನೆಯಿಂದ ಹೊರ ಬರದಂತೆ ತಡೆಯುತ್ತಾರೆ. ನಿಯಂತ್ರಿತ ವಲಯದ ಒಳಗೆ ಮತ್ತು ಹೊರಗೆ ಯಾವುದೇ ಖಾಸಗಿ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ. ಇಡೀ ಪ್ರದೇಶವನ್ನು ಸಂಪೂರ್ಣವಾಗಿ ಸೀಲ್‌ಡೌನ್‌ ಮಾಡಬೇಕಾಗುತ್ತದೆ ಎಂದು ಹೇಳಿದರು.

ಕಂಟೇನ್ಮೆಂಟ್‌ ವಲಯಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸಂಪರ್ಕ ವ್ಯಕ್ತಿಗಳಿಗೆ ಆರೋಗ್ಯ ದೃಷ್ಟಿಯಿಂದ ಕ್ವಾರಂಟೈನ್‌ ಮಾಡಲಾಗುತ್ತದೆ. ಇದರ ಬಗ್ಗೆ ಯಾರು ಭಯಪಡುವ ಅಗತ್ಯವಿಲ್ಲ. ಸೀಲ್‌ಡೌನ್‌ ಪ್ರದೇಶಗಳಲ್ಲಿ ಜನರ ಮನೆ ಬಾಗಿಲಿಗೆ ಅಗತ್ಯ ವಸ್ತು ಪೂರೈಸಲು ಕ್ರಮ ಕೈಗೊಳ್ಳಬೇಕು. ಅನಾವಶ್ಯಕವಾಗಿ ಸಂಚರಿಸುವುದನ್ನು ಸಂಪೂರ್ಣ ನಿಷೇಧಿಸಲಾಗುತ್ತದೆ. ಪಾಸ್‌ ಇದ್ದವರಿಗೆ ಮಾತ್ರ ಮನೆಯಿಂದ ಹೊರ ಬರಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ಹೇಳಿದರು.

ಪಾಸಿಟಿವ್‌ ಕೇಸ್‌ ಪತ್ತೆಯಾದಲ್ಲಿ ತಕ್ಷಣವೇ ಅವರನ್ನು ಐಸೋಲೇಷನ್‌ ವಾರ್ಡ್‌ಗೆ ಶಿಫ್ಟ್‌ ಮಾಡಬೇಕು. ಅವರ ಜತೆ ಯಾರು ಯಾರು ಸಂಪರ್ಕ ಹೊಂದಿರುವವರ ಮಾಹಿತಿ ಕಲೆ ಹಾಕಬೇಕು. ಬಫರ್‌ ಝೋನ್‌ಗಳಲ್ಲಿ ನಗರ ಪ್ರದೇಶದಲ್ಲಿ 5 ಕಿಮೀ ಮತ್ತು ಗ್ರಾಮೀಣ ಪ್ರದೇಶದಲ್ಲಿ 7 ಕಿಮೀ ವ್ಯಾಪ್ತಿಯಲ್ಲಿ ಕೋವಿಡ್‌-19 ಸೋಂಕು ಹರಡದಂತೆ ತಡೆಯಲು ನಿರಂತರವಾಗಿ ಕಣ್ಗಾವಲು ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಹೇಳಿದರು.

ಎಡಿಸಿ ದುರುಗೇಶ, ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಶ್ರೀಹರಿಬಾಬು, ರಾಯಚೂರು ಸಹಾಯಕ ಆಯುಕ್ತ ಸಂತೋಷ ಕಾಮಗೌಡ, ರಾಯಚೂರು ತಹಶೀಲ್ದಾರ್‌ ಡಾ| ಹಂಪಣ್ಣ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ರಾಮಕೃಷ್ಣ, ಜಿಪಂ ಉಪ ಕಾರ್ಯದರ್ಶಿ ಮಹ್ಮದ್‌ ಯೂಸೂಫ್‌, ಡಾ| ಕೆ. ನಾಗರಾಜ, ಡಾ| ವೈ. ಸುರೇಂದ್ರ ಬಾಬು ಇದ್ದರು.

ಟಾಪ್ ನ್ಯೂಸ್

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

11-dolly

Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.