ಆಫ್ರಿಕ: 4.4 ಕೋಟಿ ಜನರಿಗೆ ಸೋಂಕು ಭೀತಿ

ಆಫ್ರಿಕ ಖಂಡವನ್ನು ಪರಿಪರಿಯಾಗಿ ಕಾಡಲಿದೆ ಕೋವಿಡ್

Team Udayavani, May 14, 2020, 12:18 PM IST

ಆಫ್ರಿಕ: 4.4 ಕೋಟಿ ಜನರಿಗೆ ಸೋಂಕು ಭೀತಿ

ನೈರೋಬಿ : ಆಫ್ರಿಕದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು,ಭವಿಷ್ಯದಲ್ಲಿ ಸುಮಾರು 2 ಲಕ್ಷ ಜನರನ್ನು ಬಲಿ ತೆಗೆದುಕೊಳ್ಳಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಅಷ್ಟೇ ಅಲ್ಲದೆ ಕೋವಿಡ್‌-19 ಮುಂದಿನ ಕೆಲ ವರ್ಷಗಳ ಕಾಲ ಆಫ್ರಿಕ ಖಂಡದ ದೇಶಗಳನ್ನು ಪರಿಪರಿಯಾಗಿ ಕಾಡಲಿದೆ ಎಂಬ ಆಘಾತಕಾರಿ ವಿಷಯವನ್ನು ಬಹಿರಂಗಪಡಿಸಿದೆ.

4.4 ಕೋಟಿ ಜನರಿಗೆ ಸೋಂಕು
ಸೋಂಕಿನ ವಿರುದ್ಧ ಕಟ್ಟುನಿಟ್ಟಿನ ಮತ್ತು ಪರಿಣಾಮಕಾರಿಯಾದ ಕ್ರಮಗಳನ್ನು ಕೈಗೊಳ್ಳದೆ ಹೋದರೆ ಮತ್ತು ಆರೋಗ್ಯ ಸೌಲಭ್ಯಗಳನ್ನು ಸುಧಾರಿಸದಿದ್ದರೆ ಮುಂದಿನ ಒಂದು ವರ್ಷದಲ್ಲೇ ಸುಮಾರು 4.4 ಕೋಟಿಯಷ್ಟು ಜನರು ಈ ಖಂಡವೊಂದರಲ್ಲೇ ಸೋಂಕಿಗೆ ತುತ್ತಾಗಲಿದ್ದಾರೆ ಎಂದು ವಿಶ್ವಸಂಸ್ಥೆ ಅಂದಾಜಿಸಿದೆ.

ಸೋಂಕಿನ ಅಬ್ಬರಕ್ಕೆ ಆಫ್ರಿಕ ಖಂಡ ಅಕ್ಷರಶಃ ತತ್ತರಿಸಿದೆ.10 ದೇಶಗಳಲ್ಲಿ ಕನಿಷ್ಠ ವೈದ್ಯಕೀಯ ಉಪಕರಣಗಳೂ ಇಲ್ಲ. ಕೆಲವು ದೇಶಗಳಲ್ಲಿ 1 ಲಕ್ಷ ಜನರಿಗೆ 9ರಂತೆ ವೆಂಟಿಲೇಟರ್‌ಗಳಿವೆ. ಇಂಥ ಕಳಪೆ ವ್ಯವಸ್ಥೆಯನ್ನಿಟ್ಟುಕೊಂಡು ಆಫ್ರಿಕದ ಬಡರಾಷ್ಟ್ರಗಳು ಕೋವಿಡ್ ವಿರುದ್ಧ ಹೋರಾಡುತ್ತಿವೆ. ಸೋಂಕಿತರ ಸಂಖ್ಯೆ ಹೆಚ್ಚಾದರೆ ಆರೋಗ್ಯ ಸೇವಾ ವ್ಯವಸ್ಥೆ ಮತ್ತಷ್ಟು ಹದೆಗೆಡಲಿದೆ.

ಏಕಾಏಕಿ ಹೆಚ್ಚುತ್ತಿದೆ ಸೋಂಕು
ನೈಜೀರಿಯ, ಟಾಂಜೇನಿಯ ಮತ್ತು ಘಾನಾ ಸೇರಿದಂತೆ ಪ್ರಮುಖ ದೇಶಗಳಲ್ಲಿ ಏಕಾಏಕಿ ಸೋಂಕು ಹೆಚ್ಚಾಗುತ್ತಿದೆ. ಟಾಂಜಾನಿಯದಲ್ಲಿ ಸುಮಾರು 480 ಸೋಂಕು ಪ್ರಕರಣಗಳನ್ನು ದಾಖಲಾಗಿದ್ದು, 18 ಮಂದಿ ಮೃತಪಟ್ಟಿದ್ದಾರೆ. ಹಾಗೇ ಮತ್ತೂಂದೆಡೆ ಘಾನಾದಲ್ಲಿ ಐದು ದಿನಗಳಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಸೋಂಕು ದಾಖಲಾಗಿದ್ದು,ಶೇ. 42.5ರಷ್ಟು ಹೆಚ್ಚಳವಾಗಿದೆ ಎಂದು ವರದಿಯೊಂದು ಹೇಳಿದೆ.

ಸೋಂಕಿತರ ಲೆಕ್ಕ ವಿಲ್ಲ
ಪರೀಕ್ಷಾ ಕಿಟ್‌ಗಳ ಅಭಾವವಿರುವುದರಿಂದ ಸೋಂಕು ಪರೀಕ್ಷಾ ವಿಧಾನವನ್ನು ಪಾಲಿಸುವಲ್ಲಿ ಕೆಲ ದೇಶಗಳು ವಿಫಲವಾಗಿವೆ.
ಆಫ್ರಿಕಾ ಸೆಂಟರ್‌ ಫಾರ್‌ ಡಿಸೀಸ್‌ ಕಂಟ್ರೋಲ್‌ ಆ್ಯಂಡ್‌ ಪ್ರಿವೆನ್‌ಷನ್‌ ಮುಖ್ಯಸ್ಥ ಡಾ| ಜಾನ್‌ ಎನ್ಕೆನ್ಗಾಸೊಂಗ್‌ ಆಫ್ರಿಕ ದೇಶಗಳು ಲಕ್ಷಕ್ಕೆ ಕೇವಲ 685 ಪರೀಕ್ಷೆಗಳನ್ನು ನಡೆಸುತ್ತಿವೆ ಎಂದು ದಿ ಗಾರ್ಡಿಯನ್‌ಗೆ ತಿಳಿಸಿದ್ದಾರೆ. ಪೂರ್ವ ಆಫ್ರಿಕದ ದೇಶಗಳಲ್ಲಿ ಸೋಂಕಿಗೆ ಬಲಿಯಾಗಿರುವವರ ಸರಿಯಾದ ಅಂಕಿಅಂಶ ಲಭ್ಯವಾಗಿಲ್ಲ.

ಸೊಮಾಲಿಯ ಸೇರಿ ಕೆಲವು ದೇಶಗಳ ಸೋಂಕಿತ ಪ್ರಕರಣಗಳ ಅಧಿಕೃತ ಅಂಕಿಅಂಶಗಳು ಇನ್ನೂ ದೊರೆತಿಲ್ಲ.

ತಜ್ಞರು ಏನು ಹೇಳುತ್ತಾರೆ?
ಹಾಟ್‌ಸ್ಪಾಟ್‌ಗಳೆಂದು ಗುರುತಿಸಿಕೊಂಡಿರುವ ಕೆಲವು ಪ್ರದೇಶಗಳಲ್ಲಿ ಸೋಂಕು ಪ್ರಸರಣ ಕೆಲ ವರ್ಷಗಳ ಕಾಲ ಅವ್ಯಾಹತವಾಗಿ ಮುಂದುವರೆಯಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಆಫ್ರಿಕ ಪ್ರದೇಶದ ನಿರ್ದೇಶಕ ಡಾ| ಮಾಟಿÏಡಿಸೊ ಮೊಯೆಟಿ ಹೇಳಿದ್ದಾರೆ. ಈಗಾಗಲೇ ಕೆಲವು ದೇಶಗಳಲ್ಲಿ ಸಮುದಾಯ ಮಟ್ಟದಲ್ಲಿ ಸೋಂಕು ಹರಡುತ್ತಿದ್ದು, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಇನ್ನು ನಾಲ್ಕರಿಂದ ಆರು ವಾರಗಳಲ್ಲಿ ಸೋಂಕಿತರ ಪ್ರಮಾಣ ಗರಿಷ್ಠವಾಗಲಿದೆ
ಎಂದು ಎಚ್ಚರಿಸಿದ್ದಾರೆ.

ಬಡರಾಷ್ಟ್ರಗಳಿಗೆ ಅಸಾಧ್ಯ
ಸೋಂಕು ಪ್ರಸರಣವನ್ನು ತಡೆಗಟ್ಟಲು ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಕೋವಿಡ್ ಜನ ಜೀವನದ ಒಂದು ಭಾಗವಾಗಿ ಇರಲಿದೆ. ನಿರಂತರವಾಗಿ ಪರೀಕ್ಷೆ ನಡೆಸುವುದು, ಸೋಂಕಿತರಿಗೆ ಗುಣಮಟ್ಟದ ಚಿಕಿತ್ಸೆಯನ್ನು ನೀಡುವುದೇ ಇದಕ್ಕಿರುವ ಪರಿಹಾರ. ಆದರೆ ಆಫ್ರಿಕದ ಬಡರಾಷ್ಟ್ರಗಳಿಗೆ ಇದು ಸಾಧ್ಯವಾದೀತೇ ಎನ್ನುವುದು ಪ್ರಶ್ನೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lasike

Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

New York: ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

Moscow: ಕೆಮಿಕಲ್‌ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ

Moscow: ಕೆಮಿಕಲ್‌ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.