ಮದ್ಯಮುಕ್ತ ಕರ್ನಾಟಕ; ನಾಳೆ ಚಿಂತನ-ಮಂಥನ: ನನ್ನ ಹೇಳಿಕೆಗೆ ಬದ್ಧ: ಅರವಿಂದ ಬೆಲ್ಲದ

ನನ್ನ ಹೇಳಿಕೆಗೆ ಬದ್ಧ: ಅರವಿಂದ ಬೆಲ್ಲದ

Team Udayavani, May 14, 2020, 1:05 PM IST

ಮದ್ಯಮುಕ್ತ ಕರ್ನಾಟಕ; ನಾಳೆ ಚಿಂತನ-ಮಂಥನ: ನನ್ನ ಹೇಳಿಕೆಗೆ ಬದ್ಧ: ಅರವಿಂದ ಬೆಲ್ಲದ

ಹುಬ್ಬಳ್ಳಿ: ಮದ್ಯ ಮಾರಾಟ ಹೊರತುಪಡಿಸಿ ರಾಜ್ಯ ಸರಕಾರದ ಆರ್ಥಿಕತೆ ಹೇಗೆ ಸುಧಾರಿಸಬಹುದು ಎಂಬುದರ ಬಗ್ಗೆ ಮೇ 15ರಂದು ತಮ್ಮ ನಿವಾಸದಲ್ಲಿ ಅರ್ಥಶಾಸ್ತ್ರಜ್ಞರು, ಸಮಾಜ ಚಿಂತಕರೊಂದಿಗೆ ಚಿಂತನ-ಮಂಥನ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಹಾಗೂ ಬಿಜೆಪಿ ಹು-ಧಾ ಮಹಾನಗರ ಜಿಲ್ಲಾಧ್ಯಕ್ಷ ಅರವಿಂದ ಬೆಲ್ಲದ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ದೇಶಾದ್ಯಂತ ಎಲ್ಲ ರಾಜ್ಯಗಳೂ ಮದ್ಯ ಮುಕ್ತವಾಗಬೇಕು. ಆ ನಿಟ್ಟಿನಲ್ಲಿ ಏಕರೂಪ ನಿರ್ಧಾರ ಕೈಗೊಳ್ಳುವುದು ಅವಶ್ಯ. ಅದರಂಗವಾಗಿ ಉತ್ತರ ಕರ್ನಾಟಕದ ಎಕನಾಮಿಸ್ಟ್‌ ಫೋರಂನವರೊಂದಿಗೆ ಸಭೆ ನಡೆಸಿ, ಮದ್ಯ ಮಾರಾಟ ಹೊರತುಪಡಿಸಿ ಇನ್ನುಳಿದ ರಂಗದಿಂದಲೂ ಸರಕಾರದ ಆರ್ಥಿಕತೆ ಹೇಗೆ ಸುಧಾರಣೆ ಮಾಡಬಹುದೆಂಬುದರ ಕುರಿತು ಚರ್ಚಿಸಿ ಸರಕಾರಕ್ಕೆ ಸಲಹೆ ನೀಡಲಾಗುವುದು. ಕರ್ನಾಟಕ ರಾಜ್ಯವಷ್ಟೇ ಮದ್ಯಮುಕ್ತವಾದರೆ ಸಾಲದು. ದೇಶಾದ್ಯಂತ ಎಲ್ಲ ರಾಜ್ಯಗಳು ಮದ್ಯ ಮುಕ್ತಗೊಳಿಸಲು ಏಕರೂಪ ನಿರ್ಧಾರ ಕೈಗೊಳ್ಳುವ ನಿಟ್ಟಿನಲ್ಲಿ ಚಿಂತನೆ ನಡೆಸಬೇಕಿದೆ ಎಂದರು.

ಕೋವಿಡ್‌-19ರ ಲಾಕ್‌ಡೌನ್‌ ಸಂದರ್ಭದಲ್ಲೂ ರಾಜ್ಯ ಸರಕಾರ ಮದ್ಯದಂಗಡಿಗಳನ್ನು ತೆರೆಯಲು ಅವಕಾಶ ನೀಡಿದ್ದು ಸರಿಯಲ್ಲ. ಮದ್ಯ ಮಾರಾಟದಿಂದಲೇ ಸರಕಾರಕ್ಕೆ ಆದಾಯ ಬರುತ್ತದೆ ಎಂಬುದು ಅಷ್ಟು ಸಮಂಜಸವಲ್ಲ. ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಮೊದಲಿನಿಂದಲೂ ನನ್ನ ವಿರೋಧವಿದೆ. ಈ ಕುರಿತು ನಾನು ನಮ್ಮ ಪಕ್ಷದ ರಾಜ್ಯಾಧ್ಯಕ್ಷರು ಮತ್ತು ಮಠಾಧೀಶರು, ಹಿರಿಯರು, ಸಮಾಜದ ಪ್ರಮುಖರೊಂದಿಗೆ ಚರ್ಚಿಸಿದ್ದೇನೆ. ಅವರು ಕೂಡ ಬೆಂಬಲ ಸೂಚಿಸಿದ್ದಾರೆ. ಈಗಲೂ ನಾನು ನನ್ನ ಹೇಳಿಕೆಗೆ ಬದ್ಧನಾಗಿ ದ್ದೇನೆ. ರಾಜ್ಯದಲ್ಲಿ ಮದ್ಯ ಮಾರಾಟನಿರ್ಧಾರ ಕೈಬಿಡುವ ದೃಷ್ಟಿಯಿಂದ ಚಿಂತನ-ಮಂಥನ ಸಭೆ ಕೈಗೊಂಡು ಆಂದೋಲನ ರೂಪದಲ್ಲಿ ಜಾಗೃತಿ ಮೂಡಿಸಲಾಗುವುದು ಎಂದರು.

ಕೇಂದ್ರದ ಪ್ಯಾಕೇಜ್‌ ಸ್ವಾಗತಾರ್ಹ: ಸಮೃದ್ಧ ಭಾರತದ ನಿರ್ಮಾಣದ ಸದುದ್ದೇಶದಿಂದ ಲಾಕ್‌ ಡೌನ್‌ ಸಂದರ್ಭದಲ್ಲಿ ಹಿನ್ನಡೆ ಕಂಡಿರುವ ದೇಶದ ಆರ್ಥಿಕತೆಗೆ ಪುನಶ್ಚೇತನ ನೀಡುವ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಎರಡನೇ ಹಂತದಲ್ಲಿ 20ಲಕ್ಷ ಕೋಟಿ ರೂ. ಪ್ಯಾಕೇಜ್‌ ಘೋಷಿಸಿರುವುದು ಸ್ವಾಗತಾರ್ಹ ಎಂದರು. ಸ್ವತಂತ್ರ, ಸ್ವಾಭಿಮಾನಿ, ಸಮೃದ್ಧ ಭಾರತದ ನಿರ್ಮಾಣದ ಕನಸು ಇಷ್ಟು ವರ್ಷಗಳವರೆಗೂ ಈಡೇರಲಿಲ್ಲ. ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆತ್ಮನಿರ್ಮಲ, ಸಶಕ್ತ ಭಾರತ ನಿರ್ಮಾಣದ ಕನಸು ಸಾಕಾರಗೊಳಿಸುತ್ತಿದ್ದು, ಜನರ ಹಿತ ಕಾಪಾಡಲು ಹಾಗೂ ದೇಶದ ಆರ್ಥಿಕತೆಗೆ ನವಚೇತನ ನೀಡುವ ಸದುದ್ದೇಶದಿಂದ ವಿಶೇಷ ಪ್ಯಾಕೇಜ್‌ ಘೋಷಿಸಿದ್ದಾರೆ. ಇದು ಎಂಎಸ್‌ಎಂಇ ಉದ್ಯಮಗಳ ನವಚೇತನ ಹಾಗೂ ಆರ್ಥಿಕತೆ ಕುಸಿದಿರುವ ಬ್ಯಾಂಕಿಂಗ್‌ ವಿಭಾಗದಲ್ಲಿ ಹೊಸ ಸಂಚಲನ ಸೃಷ್ಟಿಸಲು ತೀರ್ಮಾನ ಕೈಗೊಳ್ಳಲಾಗಿದೆ.  ಎಂಎಸ್‌ ಎಂಇ ಸೆಕ್ಟರ್‌ಗೆ ಹಾಗೂ ಎನ್‌ಪಿಎಸ್‌ಸಿ, ಹೌಸಿಂಗ್‌ ಫೈನಾನ್ಸ್‌, ರಿಯಲ್‌ ಎಸ್ಟೇಟ್‌ ಸೇರಿದಂತೆ ಬಾಕಿ ಉಳಿದಿರುವ ಹಲವು ಯೋಜನೆಗಳಿಗೆ ಉತ್ತೇಜನ ನೀಡುವುದಾಗಿದೆ. ಈಗ ಘೋಷಿಸಿರುವ ಪ್ಯಾಕೇಜ್‌ ಮೊದಲಿನ ಪ್ಯಾಕೇಜ್‌ ಗಿಂತ ಭಿನ್ನವಾಗಿದೆ ಎಂದರು. ಕೇಂದ್ರ ಸರಕಾರ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಎಪಿಎಂಸಿ ಕಾಯ್ದೆಯಲ್ಲಿ ಬದಲಾವಣೆ ತರಲು ಯೋಜಿಸಿದೆ. ವಿನಹ ಖಾಸಗೀಕರಣ ಮಾಡಲು ಅಲ್ಲ. ಜಿಲ್ಲೆಯಲ್ಲಿ ಕೋವಿಡ್‌ ಮ್ಯಾನೇಜ್‌ ಮೆಂಟ್‌ನ ಎಲ್ಲ ವಿಭಾಗಗಳ ಅಧಿಕಾರಿಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಕ್ವಾರಂಟೈನ್‌ದ ಹಾಸ್ಟೇಲ್‌ಗ‌ಳನ್ನು ಉತ್ತಮವಾಗಿ ಅಭಿವೃದ್ಧಿ ಪಡಿಸಿದ್ದಾರೆ. ಅಲ್ಲಿನ ರೋಗಿಗಳಿಗೆ ಭದ್ರತೆ, ಆರೋಗ್ಯ ಚಿಕಿತ್ಸೆ ಉತ್ತಮವಾಗಿ ನೀಡಲಾಗುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಕೋವಿಡ್‌-19 ಸೋಂಕಿತರ ಸಂಖ್ಯೆ ನಿಯಂತ್ರಣದಲ್ಲಿದೆ ಎಂದರು.

ಬಿಜೆಪಿ ಮುಖಂಡರಾದ ಬಸವರಾಜ ಕುಂದಗೋಳಮಠ, ಪ್ರಭು ನವಲಗುಂದಮಠ, ಸಂತೋಷ ಚವ್ಹಾಣ, ಬಸವರಾಜ ಗರಗ, ರಾಮಣ್ಣ ಬಡಿಗೇರ ಇನ್ನಿತರಿದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ

ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.