ಬಿ.ದುರ್ಗದಲ್ಲಿ ಕೋವಿಡ್-19 ಆಸ್ಪತ್ರೆ
Team Udayavani, May 14, 2020, 1:12 PM IST
ಚಿತ್ರದುರ್ಗ: ರಾಷ್ಟ್ರಾದ್ಯಂತ ಕೋವಿಡ್ ವೈರಸ್ ಭೀತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರೋಗಿಗಳಿಗೆ ಚಿಕಿತ್ಸೆ ನೀಡಲು ಹೊಳಲ್ಕೆರೆ ತಾಲೂಕು ಬಿ. ದುರ್ಗದಲ್ಲಿ 30 ಹಾಸಿಗೆಗಳ ಸುಸಜ್ಜಿತ ಕಟ್ಟಡ, ಪ್ರತ್ಯೇಕ ಶೌಚಾಲಯ, ಕುಡಿಯುವ ನೀರು, ಅಗತ್ಯ ಔಷಧೋಪಚಾರದ ಸೌಲಭ್ಯ ಹೊಂದಿರುವ ಸಮುದಾಯ ಆರೋಗ್ಯ ಕೇಂದ್ರವನ್ನು ಸಜ್ಜುಗೊಳಿಸಲಾಗಿದೆ ಎಂದು ಡಿಎಚ್‌ಒ ಡಾ| ಪಾಲಾಕ್ಷ ಹೇಳಿದರು.
ಬಿ.ದುರ್ಗ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮಹಿಳೆಯರ ಮತ್ತು ಪುರುಷರ ಪ್ರತ್ಯೇಕ ವಾರ್ಡ್‌ಗಳ ಸ್ಥಳ ಪರಿಶೀಲಿಸಿ ಅವರು ಮಾತನಾಡಿದರು. ಹೊಳಲ್ಕೆರೆ ತಾಲೂಕಿನಲ್ಲಿ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆ ಕಣಿವೆಯಲ್ಲಿ ಎರಡು ಕಡೆ 21 ಹಾಸಿಗೆ ಮತ್ತು ಎಸ್ಟಿ ಹಾಸ್ಟೆಲ್ ಚನ್ನಗಿರಿ ರಸ್ತೆಯಲ್ಲಿ ಹತ್ತು ಹಾಸಿಗೆಯುಳ್ಳ ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆದಿದ್ದು ತಾಲೂಕಿನ ಸಾರ್ವಜನಿಕ ಆಸ್ಪತ್ರೆ ಕಟ್ಟಡ ನಿರ್ಮಾಣ ಹಂತದಲ್ಲಿರುವ ಕಾರಣ ಸಮೀಪದ ಬಿ.ದುರ್ಗ ಸಮುದಾಯ ಆರೋಗ್ಯ ಕೇಂದ್ರದಲ್ಲಿ 30 ಹಾಸಿಗೆಯುಳ್ಳ ಕೋವಿಡ್-19 ಆಸ್ಪತ್ರೆಯನ್ನು ತೆರೆಯಲಾಗಿದೆ. ಶಿವಮೊಗ್ಗ ರಸ್ತೆಯಲ್ಲಿನ ಬಾಲಕರ ಮೆಟ್ರಿಕ್ ಪೂರ್ವ ಹಾಸ್ಟೆಲ್‌ನಲ್ಲಿ ಫೆಸಿಲಿಟಿ ಕ್ವಾರಂಟೈನ್‌ಗೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ| ಜಯಸಿಂಹ, ತಹಶೀಲ್ದಾರ್ ನಾಗರಾಜ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿ ಕಾರಿ ಬಿ. ಮೂಗಪ್ಪ,
ಜಾನಕಿ, ಜಿಲ್ಲಾ ಹಿರಿಯ ಆರೋಗ್ಯ ನಿರೀಕ್ಷಕ ಹನುಮಂತಪ್ಪ ಡಾ| ಶಶಿಕಿರಣ್, ದಿವ್ಯಾ, ಶ್ವೇತಾ, ಚೈತ್ರಾ ಹಾಗೂ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.