ಲಾಕ್‌ಡೌನ್ ಸಡಿಲಿಸಿದ ಬಳಿಕ ಮತ್ತೆ ಕೋವಿಡ್ ಕಾಟ
Team Udayavani, May 14, 2020, 6:25 PM IST
ಬರ್ಲಿನ್: ಹೆಚ್ಚಿನ ಸಂಖ್ಯೆಯ ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದರೂ ಸಾವನ್ನಪ್ಪಿದವರ ಸಂಖ್ಯೆ ಫ್ರಾನ್ಸ್, ಇಟಲಿ ಮತ್ತು ಅಮೆರಿಕಕ್ಕಿಂತ ಕಡಿಮೆಯಾಗುವಂತೆ ನೋಡಿಕೊಂಡಿದ್ದ ಜರ್ಮನ್‌ನಲ್ಲಿ ಈಗ ಸೋಂಕಿನ ಪ್ರಕರಣಗಳು ಏಕಾಏಕಿ ಹೆಚ್ಚಾಗುತ್ತಿರುವುದು ಆತಂಕಕ್ಕೆಡೆಮಾಡಿಕೊಟ್ಟಿದೆ.
ಒಂದು ಹಂತದಲ್ಲಿ ಇಡೀ ಜಗತ್ತೇ ತನ್ನ ಕಡೆಗೆ ನೋಡುವಂತೆ ಮಾಡಿದ್ದ ಜರ್ಮನಿಯ ಪರಿಸ್ಥಿತಿ ಈಗ ಆತಂಕದಲ್ಲಿದೆ. ಜನರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಲಾಕ್‌ಡೌನ್ ಸಡಿಲಿಸಿದ್ದ ದೇಶಕ್ಕೆ ಈಗ ಅದೇ ಮುಳುವಾದಂತಿದೆ. ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಲಗೊಳಿಸಿದ ಕೆಲವೇ ದಿನಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಆರ್ಥಿಕ ಹಿಂಜರಿತವು ವರ್ಷದ ಮಧ್ಯಭಾಗದವರೆಗೆ ಇರುತ್ತದೆ ಎಂದು ಜರ್ಮನಿಯ ಆರ್ಥಿಕ ಸಚಿವಾಲಯ ಹೇಳಿತ್ತು. ಹಾಗಾಗಿ ಲಾಕ್‌ಡೌನ್ ಸಡಿಲಿಸುವ ನಿರ್ಧಾರಕ್ಕೆ ಸರಕಾರ ಬಂದಿತ್ತು.
ಎಡವಿದ್ದೆಲ್ಲಿ?
ಆರ್ಥಿಕ ಸುಧಾರಣೆಗಾಗಿ ಜರ್ಮನ್ ಸರಕಾರವು ಈಗಾಗಲೇ 750 ಬಿಲಿಯನ್ ಯುರೊ ಮೌಲ್ಯದ ಆರ್ಥಿಕ ಪರಿಹಾರ ನಿಧಿಯನ್ನು ಘೋಷಿಸಿದೆ. ದೇಶದ ಆರ್ಥಿಕ ವ್ಯವಹಾರ ಚಟುವಟಿಕೆಗಳಿಗೆ ಸಾಲ ನೀಡುವುದರೊಂದಿಗೆ, ಷೇರು ವಹಿವಾಟು ಮತ್ತು ದಿನಗೂಲಿ ಕಾರ್ಮಿಕರ ಆದಾಯ ಮಟ್ಟವನ್ನು ಬೆಂಬಲಿಸುವಂತಹ ಯೋಜನೆಗಳನ್ನು ಜಾರಿಗೆ ತಂದಿದೆ.
ಆರೋಗ್ಯ ರಕ್ಷಣಾ ಉತ್ಪನ್ನಗಳ ತಯಾರಿಕೆ ಘಟಕಗಳನ್ನು ಮತ್ತು ಕಂಪನಿಗಳನ್ನು ಶೀಘ್ರವೇ ಪುನಃ ತೆರೆಯಲು ಸರಕಾರ ನಿರ್ಧರಿಸಿತ್ತು. ಸಾಮಾಜಿಕ ಅಂತರವನ್ನು ಪಾಲಿಸುವ ಅನಿವಾರ್ಯತೆ ಇರುವ ಕಾರಣ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಿಗೆ ಎಚ್ಚರಿಕೆಯಿಂದ ನಿಯಂತ್ರಿತ ರೀತಿಯಲ್ಲಿ ಕಾರ್ಯಾಚರಿಸಲು ಅನುಮತಿ ನೀಡಲಾಗಿತ್ತು. ಉಳಿದಂತೆ ಪಬ್-ಕ್ಲಬ್‌ಗಳನ್ನು, ಚಿತ್ರ ಮಂದಿರಗಳನ್ನು ಹಾಗೂ ಮಾಲ್‌ಗಳನ್ನು ಸದ್ಯಕ್ಕೆ ಮುಚ್ಚಿರಬೇಕು ಎಂದಿತ್ತು.
ಏನು ಮಾಡಿತ್ತು?
ನೈರ್ಮಲ್ಯವನ್ನು ಕಾಪಾಡಿಕೊಳ್ಳುವ ಯೋಜನೆ ಜತೆಗೆ 800 ಚದರ ಮೀಟರ್ ವಿಸ್ತೀರ್ಣದ ವರೆಗಿನ ಮಳಿಗೆಗಳನ್ನು ತೆರೆಯಲು ಅನುಮತಿಸಲಾಗಿತ್ತು. ಶಾಪಿಂಗ್ ಮಾಡುವಾಗ ಮತ್ತು ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವಾಗ ಪಾಲಿಸಲೇಬೇಕಾದ ಕೆಲವು ಅಗತ್ಯ ನಿಯಮಗಳನ್ನು ರೂಪಿಸಿದ್ದು, ಮಾಸ್ಕ್ ಗಳನ್ನು ಕಡ್ಡಾಯವಾಗಿ ಧರಿಸಲು ಸೂಚಿಸಲಾಗಿತ್ತು. ಆದರೆ ಆಗಸ್ಟ್ 31 ರವರೆಗೆ ಯಾವುದೇ ದೊಡ್ಡ ಮತ್ತು ಸಾರ್ವಜನಿಕ ಸಭೆಗಳನ್ನು ನಡೆಸುವಂತಿಲ್ಲ. ಲಾಕ್‌ಡೌನ್ ಅನ್ನು ತೆರವುಗೊಳಿಸಲಾಗುವುದಾದರೂ ಜನರು ಬಹಳ ಎಚ್ಚರಿಕೆ ವಹಿಸಬೇಕು ಎಂದು ಹೇಳಲಾಗಿತ್ತು. ಇಷ್ಟೆಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡ ಹೊರತಾಗಿಯೂ ಜರ್ಮನ್‌ನಲ್ಲಿ ಕಡಿಮೆಯಾಗಿದ್ದ ಕೊರೊನಾ ಸೋಂಕಿತರ ಪ್ರಮಾಣ ಮತ್ತೆ ಏರಿಕೆಯಾಗಿರುವುದು ಇತರ ರಾಷ್ಟ್ರಗಳಿಗೆ ಎಚ್ಚರಿಕೆಯ ಗಂಟೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.