ನಂತೂರು ಕಾಮಗಾರಿ ವೀಕ್ಷಣೆ
Team Udayavani, May 15, 2020, 5:49 AM IST
ಮಂಗಳೂರು: ನಗರದ ನಂತೂರು ವೃತ್ತ ಬಳಿ ಮಳೆನೀರು ಹರಿದು ಹೋಗಲು ಚರಂಡಿ ರಚನೆ ಕಾಮಗಾರಿಯನ್ನು ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ವೇದವ್ಯಾಸ ಕಾಮತ್, ಪಾಲಿಕೆ ಮೇಯರ್ ದಿವಾಕರ್ ಪಾಂಡೇಶ್ವರ ವೀಕ್ಷಿಸಿದರು.
ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ನಂತೂರು ಜಂಕ್ಷನ್ ಬಳಿ ಪ್ರತಿ ವರ್ಷ ಮಳೆಗಾಲದಲ್ಲಿ ಮಳೆನೀರು ಹರಿದುಹೋಗಲು ಸೂಕ್ತ ವ್ಯವಸ್ಥೆ ಇಲ್ಲದೆ ರಸ್ತೆಯಲ್ಲೇ ನೀರು ತುಂಬಿ ಜನಸಾಮಾನ್ಯರಿಗೆ ಬಹಳಷ್ಟು ಸಮಸ್ಯೆಯಾಗುತ್ತಿತ್ತು.
ಆ ನಿಟ್ಟಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಅವರ ಸಹಕಾರದಲ್ಲಿ ರಾ.ಹೆ. ಪ್ರಾಧಿಕಾರದ ಮೂಲಕ ಕಾರ್ಕಳ ಭಾಗಕ್ಕೆ ತೆರಳುವ ರಸ್ತೆಯ ಎಡಭಾಗದಿಂದ ಬಲಬದಿಗೆ ಮಳೆನೀರು ಹರಿದುಹೋಗಲು ಚರಂಡಿ ನಿರ್ಮಿಸುವ ಕಾಮಗಾರಿ ಪ್ರಾರಂಭವಾಗಿದೆ ಎಂದರು. ಸ್ಥಾಯೀ ಸಮಿತಿಯ ಅಧ್ಯಕ್ಷೆ ಪೂರ್ಣಿಮಾ, ಪಾಲಿಕೆ ಸದಸ್ಯ ಸುಧೀರ್ ಶೆಟ್ಟಿ ಕಣ್ಣೂರು, ಶಕಿಲಾ ಕಾವಾ, ಮನೋಹರ್ ಕದ್ರಿ, ಕಾವ್ಯಾ ನಟರಾಜ್, ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಜೆ. ಸುರೇಂದ್ರ, ರೂಪಾ ಡಿ. ಬಂಗೇರಾ, ಭಾಸ್ಕರ್ ಚಂದ್ರ ಶೆಟ್ಟಿ, ರಮೇಶ್ ಕಂಡೆಟ್ಟು, ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.