ಸುಬ್ರಹ್ಮಣ್ಯದಲ್ಲಿ ಉತ್ತಮ ಮಳೆ; ಮನೆಗೆ ಹಾನಿ

Team Udayavani, May 15, 2020, 6:36 AM IST

ಸುಬ್ರಹ್ಮಣ್ಯದಲ್ಲಿ ಉತ್ತಮ ಮಳೆ; ಮನೆಗೆ ಹಾನಿ

ಮಂಗಳೂರು/ಉಡುಪಿ/ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಗುರುವಾರ ಅಪರಾಹ್ನ ಒಂದೂವರೆ ಗಂಟೆ ಕಾಲ ಗುಡುಗು, ಸಿಡಿಲಿನಿಂದ ಕೂಡಿದ ಉತ್ತಮ ಮಳೆಯಾಗಿದೆ.

ಸುಬ್ರಹ್ಮಣ್ಯ ಬೈಪಾಸ್‌ನಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯಿಂದಾಗಿ ನೀರು ಹರಿಯಲು ಸಾಧ್ಯವಾಗದೆ ರಸ್ತೆಯಲ್ಲಿ ನಿಂತು ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಕೆಲವು ವಾಹನಗಳು ನೀರು ತುಂಬಿದ ರಸ್ತೆಯಲ್ಲಿ ಬಾಕಿಯಾದ ಘಟನೆಯೂ ನಡೆಯಿತು.

ಮರ ಬಿದ್ದು ಮನೆಗೆ ಹಾನಿ
ಸುಬ್ರಹ್ಮಣ್ಯದ ಬಿಲದ್ವಾರದ ವಾಲಗದ ಕೇರಿ ನಿವಾಸಿ ಆನಂದ ಅವರ ಮನೆಯ ಮೇಲೆ ಮರ ಬಿದ್ದು ಮನೆ ಸಂಪೂರ್ಣ ಹಾನಿಗೀಡಾಗಿದೆ. ಮನೆಮಂದಿ ಪ್ರಾಣಾಪಾಯದಿಂದ ಪಾರಾಗಿ ¨ªಾರೆ. ಪರಿಸರದ ಕೆಲವು ಮನೆಗಳಿಗೆ ಅಳವಡಿ ಸಿದ್ದ ಸಿಮೆಂಟ್‌ ಶೀಟ್‌ಗಳು ಗಾಳಿಗೆ ಹಾರಿ ಹೋಗಿದೆ. ವಸತಿಗೃಹ ಶೇಷನಾಗ ಆಶ್ರಯ ಮಳೆ ನೀರಿನಿಂದ ಆವೃತಗೊಂಡಿದೆ.

ಉಡುಪಿ ಜಿಲ್ಲೆಯ ವಿವಿಧ ಕಡೆಯಲ್ಲಿ ಗುರುವಾರ ಸಂಜೆ ಗುಡುಗು ಸಹಿತ ತುಂತುರು ಮಳೆಯಾಗಿದೆ. ಉಡುಪಿ, ಕೋಟ, ಕೋಟೇಶ್ವರ ಪೆರ್ಡೂರು ಕಾರ್ಕಳ, ಕುಂದಾಪುರ, ಹೊಸಂಗಡಿ, ಹಳ್ಳಿಹೊಳೆ, ಆಜ್ರಿ, ಅಂಪಾರು, ಶಂಕರನಾರಾಯಣ, ಹಾಲಾಡಿ, ಗೋಳಿಯಂಗಡಿ, ಬೆಳ್ವೆ, ಮಡಾಮಕ್ಕಿ, ಹೆಂಗವಳ್ಳಿ, ಅಮಾಸೆಬೈಲು, ತಲ್ಲೂರು, ನಾವುಂದ, ಮರವಂತೆ, ಬಸೂÅರು, ಸಿದ್ದಾಪುರ ತುಂತುರು ಮಳೆಯಾಗಿದೆ. ಕಾಪು, ತೆಕ್ಕಟ್ಟೆ ಸೇರಿದಂತೆ ಇತರ ಕಡೆಗಳಲ್ಲಿ ಸಂಜೆಯ ವೇಳೆಗೆ ಮೋಡ ಕವಿದ ವಾತಾವರಣವಿತ್ತು.

ಮುಂದಿನ 5 ದಿನ ಮಳೆ
ಹವಾಮಾನ ಇಲಾಖೆ ವರದಿಯ ಅನ್ವಯ ಕರಾವಳಿಯಲ್ಲಿ ಮೇ 15ರಿಂದ 19ರ ವರೆಗೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.

ಕರಾವಳಿಯಲ್ಲಿ ಮೂರು ದಿನ ಯಲ್ಲೋ ಅಲರ್ಟ್‌
ಮಂಗಳೂರು: ಬಂಗಾಲ ಕೊಲ್ಲಿಯಲ್ಲಿ ಸುಳಿಗಾಳಿ ಪರಿಣಾಮ ಮುಂದಿನ ಮೂರು ದಿನಗಳ ಕಾಲ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದ್ದು, ಭಾರತೀಯ ಹವಾಮಾನ ಇಲಾಖೆಯು “ಯಲ್ಲೋ ಅಲರ್ಟ್‌’ ಘೋಷಿಸಿದೆ.

ಹವಾಮಾನ ಇಲಾಖೆಯ ಮಾಹಿತಿಯಂತೆ ಮುಂದಿನ ಮೂರು ದಿನಗಳ ಕಾಲ ಕರಾವಳಿ ಭಾಗದಲ್ಲಿ 64.5 ಮಿ.ಮೀ.ನಿಂದ 115.5 ಮಿ.ಮೀ. ವರೆಗೆ ಮಳೆಯಾಗುವ ಸಾಧ್ಯತೆ ಇದ್ದು, ಗುಡುಗು ಸಿಡಿಲಿನೊಂದಿಗೆ ಗಾಳಿ ಕೂಡ ಹೆಚ್ಚಾಗಿ ಇರಲಿದೆ. ಗುರುವಾರ ಪಣಂಬೂರಿನಲ್ಲಿ 36.2 ಡಿ.ಸೆ. ಗರಿಷ್ಠ ಮತ್ತು 25.5 ಡಿ.ಸೆ. ಕನಿಷ್ಠ ಉಷ್ಣಾಂಶ ದಾಖಲಾಗಿತ್ತು. ಮಂಗಳೂರು ನಗರದಲ್ಲಿ ಬೆಳಗ್ಗೆಯಿಂದ ಸೆಕೆ ಮತ್ತು ಬಿಸಿಲಿನಿಂದ ಕೂಡಿದ ವಾತಾವರಣ ಇತ್ತು.

ಅವಧಿಗೂ ಮುನ್ನ ಮುಂಗಾರು ಸಾಧ್ಯತೆ
ನೈಋತ್ಯ ಬಂಗಾಲ ಕೊಲ್ಲಿಯಲ್ಲಿ ನಿಮ್ನ ಒತ್ತಡದ ಪರಿಣಾಮ ವಾಯುಭಾರ ಕುಸಿತ ಉಂಟಾಗಿದ್ದು, ಒಂದೆರಡು ದಿನಗಳಲ್ಲಿ ತೀವ್ರಗೊಳ್ಳುವ ಸಾಧ್ಯತೆ ಇದೆ. ಮುಂಬರುವ ಮುಂಗಾರು ಮಳೆಯ ಮೇಲೆ ಇದು ಪರಿಣಾಮ ಬೀರಲಿದೆ.

ಸಾಮಾನ್ಯವಾಗಿ ಮೇ ಅಂತ್ಯ ಜೂನ್‌ ಮೊದಲ ವಾರದಲ್ಲಿ ಕೇರಳ ಕರಾವಳಿಗೆ ಮುಂಗಾರು ಅಪ್ಪಳಿಸುತ್ತದೆ. ಬಳಿಕ ಮೂರ್‍ನಾಲ್ಕು ದಿನಗಳ ನಂತರ ರಾಜ್ಯ ಕರಾವಳಿ ಭಾಗಕ್ಕೆ ಮುಂಗಾರು ಆಗಮಿಸುತ್ತದೆ. ಆದರೆ ಈ ಬಾರಿ ವಾಯುಭಾರ ಕುಸಿತದ ಪರಿಣಾಮ ಅವಧಿಗಿಂತ ಒಂದು ವಾರ ಮುನ್ನವೇ ರಾಜ್ಯಕ್ಕೆ ಮುಂಗಾರು ಅಪ್ಪಳಿಸಬಹುದು ಎಂದು ಅಂದಾಜಿಸಲಾಗಿದೆ.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bunts Hostel, ಕರಂಗಲ್ಪಾಡಿ ಜಂಕ್ಷನ್‌: ಶಾಶ್ವತ ಡಿವೈಡರ್‌ ನಿರ್ಮಾಣ ಕಾಮಗಾರಿ

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

4(1)

Mudbidri: ರಸ್ತೆಯಲ್ಲೆಲ್ಲ ಹೊಂಡಗಳು ಸಾರ್‌ ಹೊಂಡಗಳು!

3

Mangaluru: ಬೇಕು ಇಂದೋರ್‌ ಮಾದರಿ;ದೇಶದ ನಂ.1 ಸ್ವಚ್ಛ ನಗರ ಇಲ್ಲಿಗೆ ಹೇಗೆ ಅನ್ವಯವಾಗುತ್ತದೆ?

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

9

Bunts Hostel, ಕರಂಗಲ್ಪಾಡಿ ಜಂಕ್ಷನ್‌: ಶಾಶ್ವತ ಡಿವೈಡರ್‌ ನಿರ್ಮಾಣ ಕಾಮಗಾರಿ

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.