ಗರ್ಭಿಣಿಯರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲು ಶಾಸಕ ನಡಹಳ್ಳಿ ಸೂಚನೆ


Team Udayavani, May 15, 2020, 5:33 AM IST

ಗರ್ಭಿಣಿಯರಿಗೆ ವಿಶೇಷ ವ್ಯವಸ್ಥೆಕಲ್ಪಿಸಲು ಶಾಸಕ ನಡಹಳ್ಳಿ ಸೂಚನೆ

ಮುದ್ದೇಬಿಹಾಳ: ಮಹಾರಾಷ್ಟ್ರ ಸೇರಿದಂತೆ ಸೋಂಕಿನ ಪ್ರಭಾವ ಹೆಚ್ಚಾಗಿರುವ ರಾಜ್ಯಗಳಿಂದ ಜಿಲ್ಲೆಗೆ ಮರಳಿರುವ ವಲಸೆ ಕಾರ್ಮಿಕರು ಸಾರ್ವಜನಿಕರ ಸಂಪರ್ಕಕ್ಕೆ ಬರದಂತೆ ನೋಡಿಕೊಳ್ಳಲು ಮುಂಜಾಗ್ರತಾ ಕ್ರಮಕ್ಕೆ ಸೂಕ್ತ ಸಾಂಸ್ಥಿಕ ಕ್ವಾರೆಂಟೈನ್‌ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಗುರುವಾರ ಹೊರ ರಾಜ್ಯದಿಂದ ಬರುವವರಿಗೆ ಪ್ರತ್ಯೇಕ ಸ್ಕ್ರೀನಿಂಗ್‌ ವ್ಯವಸ್ಥೆ ಕಲ್ಪಿಸಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿ ವ್ಯವಸ್ಥೆ ಅವಲೋಕಿಸಿದ ಅವರು, 14, 28 ದಿನಗಳ ಕ್ವಾರೆಂಟೈನ್‌ಗೊಳಗಾಗುವವರಿಗೆ ಎಲ್ಲ ಮೂಲಸೌಕರ್ಯ ಒದಗಿಸಲು ತಾಲೂಕಾಡಳಿತ ಕ್ರಮ ಕೈಕೊಳ್ಳುವಂತೆ ತಿಳಿಸಿದರು.

ಗರ್ಭಿಣಿಯರಿಗೆ ಲಾಡ್ಜಿಂಗ್‌ ವ್ಯವಸ್ಥೆ: ಮಹಾರಾಷ್ಟ್ರದ ಸಾವಂತವಾಡಿಯಿಂದ ಬಂದಿದ್ದ 40 ಕಾರ್ಮಿಕರಲ್ಲಿ 4-5 ಮಹಿಳೆಯರು ಗರ್ಭಿಣಿಯರಿದ್ದ ಮಾಹಿತಿ ಪಡೆದ ಶಾಸಕರು, ಅವರನ್ನು ಕ್ವಾರೆಂಟೈನ್‌ ಕೇಂದ್ರಕ್ಕೆ ಕಳುಹಿಸಬಾರದು. ಪಟ್ಟಣದ ಲಾಡ್ಜಿಂಗ್‌ನಲ್ಲಿ ಇರಿಸಲು ಕ್ರಮ ಕೈಕೊಳ್ಳಬೇಕು ಎಂದು ಶಾಸಕರು ತಹಸೀಲ್ದಾರ್‌ ಜಿ.ಎಸ್‌.ಮಳಗಿ, ತಾಲೂಕು ಆರೋಗ್ಯಾಧಿಕಾರಿ ಡಾ| ಸತೀಶ ತಿವಾರಿ, ಸಿಪಿಐ ಆನಂದ ವಾಗಮೋಡೆ ಅವರಿಗೆ ಸೂಚಿಸಿದರು. ಅವರು ತಕ್ಷಣ ಕಾರ್ಯಪ್ರವೃತ್ತರಾಗಿ ವಿದ್ಯಾನಗರದಲ್ಲಿರುವ ಲಾಡ್ಜಿಂಗ್‌ ವ್ಯವಸ್ಥೆ ಪರಿಶೀಲನೆಗೆ ತೆರಳಿದರು.

ಕಾಲೇಜಿಗೆ ಭೇಟಿ ನೀಡಿದ್ದ ಶಾಸಕರು ಖುದ್ದು ತಾವೇ ಮುಂದೆ ನಿಂತು ಪುರಸಭೆ ಪೌರ ಕಾರ್ಮಿಕರು, ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಯಿಸಿ ಇಡೀ ಕಾಲೇಜನ್ನು ಹೈಪೋಕ್ಲೋರೈಟ್‌ ದ್ರಾವಣ ಸಿಂಪಡಿಸಿ ಸ್ವಚ್ಛಗೊಳಿಸುವಂತೆ ನೋಡಿಕೊಂಡರು. ಪಟ್ಟಣದ ಹೊರವಲಯದಲ್ಲಿರುವ  ಸೋಮಶೇಖರ ಶಿವಾಚಾರ್ಯ ಪದವಿಪೂರ್ವ ಕಾಲೇಜಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಶಾಸಕರು ಮಹಾರಾಷ್ಟ್ರದಿಂದ ಬಂದಿರುವ ಕಾರ್ಮಿಕರನ್ನು ಅಲ್ಲಿ ಇರಿಸುವ ಕುರಿತು ಚರ್ಚಿಸಿದರು. ಈ ಕಾಲೇಜನ್ನು ಕ್ವಾರೆಂಟೈನ್‌ ಕೇಂದ್ರವನ್ನಾಗಿ ಮಾಡಲು ಕ್ರಮಕ್ಕೆ ಶಿಫಾರಸು ಮಾಡಿದರು.

ಟಾಪ್ ನ್ಯೂಸ್

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

SUBHODH

Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-kanna

Karnataka; ವಲಸಿಗರು ಈ ನಾಡಿಗೊಂದು ಸಮಸ್ಯೆ ಆಗದಿರಲಿ…

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

WhatsApp Image 2024-11-17 at 20.58.12

Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

SUBHODH

Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.