ರೈತರ ಬೀದಿ ಕಂಟೇನ್ಮೆಂಟ್ ಝೋನ್: ಎಸ್ಪಿ
Team Udayavani, May 15, 2020, 6:02 AM IST
ಸಾಂದರ್ಭಿಕ ಚಿತ್ರ
ದಾವಣಗೆರೆ: ಕೋವಿಡ್ ಪಾಸಿಟಿವ್ ಪ್ರಕರಣ ದೃಢಪಟ್ಟಿರುವುದರಿಂದ ರೈತರ ಬೀದಿಯನ್ನು ಕಂಟೈನ್‌ಮೆಂಟ್ ಝೋನ್ ಮಾಡಲಾಗುವುದು ಎಂದು ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ ತಿಳಿಸಿದರು.
ಬೆಳ್ಳುಳ್ಳಿ ವ್ಯಾಪಾರಿ ವಾಸ ಮಾಡುತ್ತಿರುವ ರೈತರ ಬೀದಿ 8ನೇ ಕಂಟೇನ್‌ಮೆಂಟ್ ಝೋನ್ ಆಗಲಿದೆ. ಸ್ಥಳ ಪರಿಶೀಲನೆ ನಡೆಸಿದ್ದು ಬ್ಯಾರಿಕೇಡಿಂಗ್ ಮಾಡಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ದಾವಣಗೆರೆಯಲ್ಲಿ ಕೆಲವರಲ್ಲಿ ಕೋವಿಡ್ ಸೋಂಕಿಗೆ ಈರುಳ್ಳಿ, ಬೆಳ್ಳುಳ್ಳಿ ವಹಿವಾಟು ಮೂಲವಾಗಿದೆ. ಹಾಗಾಗಿ ದಾವಣಗೆರೆಗೆ ಎಲ್ಲಿಂದ ಅತಿ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ, ಬೆಳ್ಳುಳ್ಳಿ ಬರುತ್ತಿದೆ. ಈರುಳ್ಳಿ, ಬೆಳ್ಳುಳ್ಳಿ ಸಾಗಾಣಿಕೆ ಲಾರಿಗಳ ಚಾಲಕರು, ಕ್ಲೀನರ್ ಇತರೆ ವಿಚಾರಗಳ ಬಗ್ಗೆ ವಕೌìಟ್ ಮಾಡಲಾಗುತ್ತಿದೆ ಎಂದರು.
ಕಂಟೈನ್‌ಮೆಂಟ್ ಝೋನ್‌ನಲ್ಲಿ ಕೆಲಸ ಮಾಡುವ ಪೊಲೀಸ್ ಸಿಬ್ಬಂದಿಗೆ ತ್ರಿ ಲೇಯರ್, ಎನ್ -95 ಮಾಸ್ಕ್, ಫೇಸ್‌ಶೀಲ್ಡ್ ನೀಡಲಾಗಿದೆ. ಝೋನ್‌ನ ಒಳಗೆ ಸಂಚರಿಸುವಾಗ ಕಡ್ಡಾಯವಾಗಿ ಪಿಪಿಇ ಕಿಟ್ ಧರಿಸಬೇಕಾಗುತ್ತದೆ. ಜಿಲ್ಲಾಡಳಿತದಿಂದ ಪಿಪಿಇ ಕಿಟ್ ನೀಡಲಾಗಿದೆ. ಕಂಟೈನ್ ಮೆಂಟ್ ಝೋನ್‌ನಲ್ಲಿ ಕೆಲಸ ಮಾಡುವ ಸಿಬ್ಬಂದಿ ಅತೀ ಮುಖ್ಯವಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಹಾಗೂ ಮನೆಗೆ ಹೋದ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಪೊಲೀಸ್ ಅಧಿಕಾರಿ, ಸಿಬ್ಬಂದಿಯಲ್ಲಿ ರೋಗ ನಿರೋಧಕ ಶಕ್ತಿ ವರ್ಧಿಸಲು ಆರ್ಸ್‌ಆಲ್ಬ್ ಗುಳಿಗೆ, ಚ್ಯವನ್ ಪ್ರಾಶ್ ನೀಡಲಾಗಿದೆ ಎಂದು ತಿಳಿಸಿದರು.
ಸೋಂಕಿತ ಸಂಚಾರಿ ಪೇದೆ ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದು, ತಾಂತ್ರಿಕ ಕಾರಣಕ್ಕೆ ವಾಸ ಇದ್ದಂತಹ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗುತ್ತಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ
ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI: ಶ್ರೀಲಂಕಾ ಬ್ಯಾಟಿಂಗ್ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Kundapura: ಗುಲ್ವಾಡಿ; ಗಾಯಾಳು ಸಾವು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.