![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 15, 2020, 6:03 AM IST
ಕೊಳ್ಳೇಗಾಲ: ತಾಲೂಕಿನ ಸಿದ್ದಯ್ಯನಪುರ ಮತ್ತು ತಿಮ್ಮರಾಜೀಪುರ ಗ್ರಾಮಗಳ ಕೆರೆಗಳಲ್ಲಿ ಹೂಳೆತ್ತುವ ಕಾಮಗಾರಿಗಳನ್ನು ಶಾಸಕ ಮಹೇಶ್ ಭೇಟಿ ನೀಡಿ ವೀಕ್ಷಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕೊರೊನಾ ಲಾಕ್‌ಡೌನ್‌ನಲ್ಲಿರುವ ಗ್ರಾಮಸ್ಥರಿಗೆ ಉದ್ಯೋಗ ಕಲ್ಪಿಸುವ ಸಲುವಾಗಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆರೆಗಳ ಹೂಳೆತ್ತುವ ಕಾಮಗಾರಿ ನಡೆಯುತ್ತಿದೆ. ಸಿದ್ದಯ್ಯನಪುರ ಗ್ರಾ ಪಂ ವ್ಯಾಪ್ತಿಯ ಕೆರೆಯ ಹೂಳೆತ್ತುವ ಕೆಲಸದಲ್ಲಿ 75 ಜನರು, ತಿಮ್ಮರಾಜೀಪುರ ಕೆರೆ ಹೂಳೆತ್ತುವ ಕಾಮಗಾರಿಗೆ 255 ಜನರು ಕೆಲಸ ಮಾಡುತ್ತಿದ್ದು, ಇಂತಹ ಸಂದಿಗ್ಧ ಸಮಯದಲ್ಲಿ ನರೇಗಾದಡಿ ಗ್ರಾಮಸ್ಥರಿಗೆ ಕೆಲಸ ನೀಡಲಾಗುತ್ತಿದೆ ಎಂದು ಹೇಳಿದರು.
ಮಳೆಗಾಲ ಸಮೀಪಿಸುತ್ತಿದ್ದು, ಕೆರೆಗಳ ಹೂಳೆ ತ್ತಿರುವುದರಿಂದ ನೀರು ಶೇಖರಣೆಯಾಗಿ ಅಂತರ್ಜಲ ಹೆಚ್ಚಲಿದೆ. ಕ್ಷೇತ್ರದ ವ್ಯಾಪ್ತಿ ಹೂಳೆತ್ತುವ ಕಾಮಗಾರಿಗಳಿಂದ ಅಭಿವೃದಿ ಕೆಲಸಗಳು ನಡೆ ಯುತ್ತಿವೆ ಎಂದು ಹೇಳಿದರು. ಈ ವೇಳೆ ಸಿದ್ದ ಯ್ಯನಪುರ ಗ್ರಾಪಂ ಅಧ್ಯಕ್ಷೆ ಶಶಿಕುಮಾರಿ, ಉಪಾ ದ್ಯಕ್ಷ ಗುಣಶೇಖರ್, ತಿಮ್ಮರಾಜೀಪುರ ಗ್ರಾಪಂ ಅಧ್ಯಕ್ಷೆ ಅಶ್ವಿನಿ, ತಾಪಂ ಇಒ ಪ್ರಕಾಶ್, ಪಿಡಿಒ ಭಾಗ್ಯಮ್ಮ ಇತರರಿದ್ದರು.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.