ಮಾರಮ್ಮನ ಹಬ್ಬ ಆಚರಿಸಿದ ಗ್ರಾಮಸ್ಥರು!
Team Udayavani, May 15, 2020, 6:53 AM IST
ಕನಕಪುರ:ಕೊರೊನಾ ಸೋಂಕಿನಿಂದ ಹೆಚ್ಚು ಜನ ಸೇರುವ ಸಭೆ-ಸಮಾರಂಭಗಳಿಗೆ ನಿಷೇಧ ಹೇರಿದ್ದರೂ ತಾಲೂಕಿನ ಕೊಳಗೊಂಡನಹಳ್ಳಿ ಗ್ರಾಮದಲ್ಲಿಮಂಗಳವಾರ ಸಾವಿರಾರು ಜನ ಸೇರಿ ಮಾರಮ್ಮನ ಹಬ್ಬ ಆಚರಿಸಿ ಸರ್ಕಾರದ ನಿಯಮ ಗಾಳಿಗೆ ತೂರಿದ್ದಾರೆ.
ಕೊರೊನಾ ಸೋಂಕು ಹತೋಟಿಗೆ ತರಲು ಸರ್ಕಾರ ಹೆಚ್ಚು ಜನ ಸೇರುವ ಸಭೆ-ಸಮಾರಂಭ ನಿಷೇಧ ಹೇರಿ ನಿಯಮ ಉಲ್ಲಂಘಿಸಿ ಸಭೆ-ಸಮಾರಂಭ ನಡೆಸದಂತೆ ಹದ್ದಿನ ಕಣ್ಣಿಡಲು ಟಾಸ್ಕ್‌ಫೋರ್ಸ್ ಕಮಿಟಿ ಚಿಸಿದೆ. ಅಲ್ಲದೆ ತಾಲೂಕು ಆಡಳಿತ, ಪೊಲೀಸ್ ಇಲಾಖೆ ಗ್ರಾಪಂ ಅಧಿಕಾರಿಗಳು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಕೊರೊನಾ ವಾರಿಯರ್ಸ್‌ಗಳಾಗಿ ಕಾರ್ಯ ನಿರ್ವಹಿಸುತ್ತಿದ್ದರೂ,
ತಾಲೂಕಿನ ಉಯ್ಯಂ ಬಳ್ಳಿ ಹೋಬಳಿಯ ಗಡಿಭಾಗದಲ್ಲಿರುವ ಕೊಳಗೊಂಡನಹಳ್ಳಿ ಗ್ರಾಮದಲ್ಲಿ ಮಂಗಳ ವಾರ ರಾತ್ರಿ ಗ್ರಾಮದ ಮಾರಮ್ಮನ ಹಬ್ಬ ಅದೂಟಛಿರಿಯಾಗಿ ಸಾವಿರಾರು ಜನ ಸೇರಿ ಮಾಸ್ಕ್ ಹಾಕದೆ, ಸಾಮಾಜಿಕ ಅಂತರದ ಅರಿವಿಲ್ಲದೆ ಹಬ್ಬ ಆಚರಿಸಿ ನಿಯಮ ಉಲ್ಲಂಘಿಸಿದ್ದಾರೆ. ಅಲ್ಲದೆ ಘಟನೆ ನಡೆದಿರುವ ಕೊಳಗೊಂಡನಹಳ್ಳಿ ಗ್ರಾಮ ತಮಿಳುನಾಡಿನ ಗಡಿಗೆ ಹೊಂದಿ ಕೊಂಡಿದ್ದು ತಮಿಳುನಾಡು ಕೊರೊನಾ ಸೋಂಕಿನಲ್ಲಿ ದೇಶದಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದೆ.
ಹೀಗಾಗಿ ತಾಲೂಕಿನ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಈ ಸಂಬಂಧ ತಹಶೀಲ್ದಾರ್ ವರ್ಷ ಒಡೆಯರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದಾರೆ. ನಿಯಮ ಉಲ್ಲಂಘಿಸಿ ಸಾವಿರಾರು ಜನರಿಗೆ ದೇವಾಲಯದಲ್ಲಿ ಧಾರ್ಮಿಕ ವಿಧಿವಿಧಾನಗಳಿಗೆ ಅವಕಾಶ ಕಲ್ಪಿಸಿಕೊಟ್ಟ ದೇವಾಲಯದ ಅರ್ಚಕ ಚಿಕ್ಕಮಾರೇ ಗೌಡನ ವಿರುದಟಛಿ ಕೋಡಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
By Election: ಮಗನಿಗಾಗಿ ಎಚ್‌ಡಿಕೆ ನಿಮ್ಮ ಊರು ಹುಡುಕಿ ಬರುತ್ತಾರಷ್ಟೇ: ಡಿ.ಕೆ.ಸುರೇಶ್
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
By Election: ಚನ್ನಪಟ್ಟಣದಲ್ಲಿ ಧರ್ಮ-ಅಧರ್ಮದ ನಡುವೆ ಚುನಾವಣೆ: ಎಚ್.ಡಿ.ಕುಮಾರಸ್ವಾಮಿ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
MUST WATCH
ಹೊಸ ಸೇರ್ಪಡೆ
Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು
Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!
Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ
Lawyer Jagadish: ಕೊಲೆ ಬೆದರಿಕೆ; ದರ್ಶನ್, ಅಭಿಮಾನಿ ಮೇಲೆ ದೂರು ದಾಖಲಿಸಿದ ಜಗದೀಶ್
Bengaluru; ಪ್ರತಿಷ್ಠಿತ ಆಸ್ಪತ್ರೆಯ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೋ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.