19ಕ್ಕೆ ಅಂತರ್ಜಲ ಯೋಜನೆಗೆ ಚಾಲನೆ
Team Udayavani, May 15, 2020, 7:29 AM IST
ಚಿಕ್ಕಬಳ್ಳಾಪುರ: ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಮೇ 19 ರಂದು ಅಂತರ್ಜಲ ಚೇತನ ಯೋಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್ ತಿಳಿಸಿದರು.
ನಗರದ ಜಿಪಂನ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಗುರುವಾರ ಅಂತರ್ಜಲ ಚೇತನ ಯೋಜನೆ ಜಾರಿಗೊಳಿಸಲು ಹಮ್ಮಿಕೊಂಡಿದ್ದ ಅಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿರುವ ಜಲಮೂಲಗಳಾದ ಕಲ್ಯಾಣಿ, ಗೋಕುಂಟೆ, ಕೆರೆ, ನದಿಗಳನ್ನು ಪುನಃಶ್ಚೇತನಗೊಳಿಸಲು ಹಾಗೂ ಅಂತರ್ಜಲ ಮಟ್ಟ ಹೆಚ್ಚು ಮಾಡಲು ಜಿಲ್ಲಾದ್ಯಂತ ಸುಮಾರು ಒಂದು ಸಾವಿರ ಕಾಮಗಾರಿಗಳನ್ನು ಪ್ರಾರಂಭ ಮಾಡಲಾಗುತ್ತದೆ ಎಂದು ತಿಳಿಸಿದರು.
ನರೇಗಾ ಯೋಜನೆಯಡಿ, ಜಲ ಸಂರಕ್ಷಣೆ ಕಾಮಗಾರಿಗಳಿಗೆ ಆದ್ಯತೆ ನೀಡಿ, ಅಂತರ್ಜಲ ಮಟ್ಟ ಹೆಚ್ಚಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಅಂರ್ತಜಲ ಯೋಜನೆ ಜಿಲ್ಲೆಯಲ್ಲಿ ನೀರು ಸಂರಕ್ಷಣೆಗೆ ಒತ್ತು ನೀಡುವುದರ ಜೊತೆಗೆ ಗ್ರಾಮೀಣ ಭಾಗದ ಬಡ ಜನರಿಗೆ ಊರಿನಲ್ಲೇ ಕೆಲಸ ದೊರಕಿಸಿಕೊಡಲಾಗುತ್ತದೆ ಹಾಗೂ ಜಿಲ್ಲೆಯ ಜಲ ಮೂಲಗಳಾದ ಕೆರೆ, ಕುಂಟೆ, ಬದು ನಿರ್ಮಾಣ,
ಗೋಕುಂಟೆ ಹಾಗೂ ಪೋಷಕ ಕಾಲುವೆಗಳ ನಿರ್ಮಾಣ ಕಾಮಗಾರಿಗಳನ್ನು ಕೈಗೊಂಡು ಜಲ ಸಂವರ್ಧನೆ ಹೆಚ್ಚು ಮಾಡಲಾಗುತ್ತದೆ ಎಂದರು. ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ನೋಮೇಶ್ ಕುಮಾರ್, ಮುಖ್ಯ ಯೋಜನಾಧಿಕಾರಿ ಮಾಧುರಾಮ್, ಯೋಜನಾ ನಿರ್ದೇಶಕರಾದ ಗಿರಿಜಾ ಶಂಕರ್, ಚಿಕ್ಕಬಳ್ಳಾಪುರ ತಾಪಂ ಇಒ ಹರ್ಷವರ್ಧನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.