12 ಆರೋಪಿಗಳ ಬಂಧನ
Team Udayavani, May 15, 2020, 1:43 PM IST
ರಾಯಚೂರು: ಜೀವ ಬೆದರಿಕೆ ಹಾಕಿ ಹಣ ದೋಚಿದ್ದ ದುಷ್ಕರ್ಮಿಗಳನ್ನು ಜಿಲ್ಲಾ ಪೊಲೀಸ್ ಇಲಾಖೆ ಬಂಧಿಸಿದೆ
ರಾಯಚೂರು: ತಾಲೂಕಿನ ಶಕ್ತಿನಗರದಲ್ಲಿ ಮಾರಕಾಸ್ತ್ರ ತೋರಿಸಿ 20 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ 12 ಆರೋಪಿಗಳನ್ನು ಜಿಲ್ಲಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಕುರಿತು ಗುರುವಾರ ಸುದ್ದಿಗೋಷ್ಠಿ ನಡೆಸಿ ವಿವರ ನೀಡಿದ ಎಸ್‌ಪಿ ಡಾ. ಸಿ.ಬಿ. ವೇದಮೂರ್ತಿ, ಶಕ್ತಿನಗರದ ರಾಘವೇಂದ್ರ ಕಾಲೋನಿ ನಿವಾಸಿ ಹರ್ಷನ್ ಪಿ.ಆರ್ ಮನೆ ಮೇಲೆ ಮೇ 7ರಂದು ರಾತ್ರಿ 7.45 ಗಂಟೆಗೆ ರೌಡಿಶೀಟರ್‌ಗಳಾದ ಮಹ್ಮದ್ ಗೌಸ್, ವೆಂಕಟೇಶ, ಸುರೇಶ, ಜಾಕೀರ್, ಜಮಶೀರ್, ರವಿ, ಪಪ್ಪು, ಫಾರೂಕ್, ಮಹಾಂತೇಶ, ಚಿಕನ್ ಮೋಸಿನ್, ಅಬ್ದುಲ್ ಸೇರಿದಂತೆ 17 ಜನ ಅಕ್ರಮ ಕೂಟ ರಚಿಸಿಕೊಂಡು ಹೋಗಿ 20 ಲಕ್ಷ ರೂ. ಕೊಡುವಂತೆ ಬೇಡಿಕೆ ಇಟ್ಟಿದ್ದರು.
ನಂತರ ಮೇ 8ರಂದು ಮಧ್ಯಾಹ್ನ 2.20 ಗಂಟೆಗೆ ಹರ್ಷನ್ ಅವರಿಗೆ ಬೆದರಿಕೆ ಹಾಕಿ 5 ಲಕ್ಷ ರೂ. ಹಣವನ್ನು ಆನ್‌ಲೈನ್ ನಲ್ಲಿ ಟ್ರಾನ್ಸಫರ್ ಮಾಡಿಸಿಕೊಂಡು ಬಾಕಿ 15 ಲಕ್ಷ ಹಣ ವಾರದೊಳಗೆ ನೀಡುವಂತೆ ಬೆದರಿಕೆ ಹಾಕಿ ಹೋಗಿದ್ದರು ಎಂದು ತಿಳಿಸಿದರು.
ಡಕಾಯಿತರ ಬಂಧನಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶ್ರೀಹರಿಬಾಬು, ಡಿವೈಎಸ್‌ಪಿ ಶಿವನಗೌಡ ಪಾಟೀಲ್ ನೇತೃತ್ವದಲ್ಲಿ ರಾಯಚೂರು ಗ್ರಾಮೀಣ ಸಿಪಿಐ ಅಂಬಾರಾಯ ಎಂ. ಮತ್ತು ಶಕ್ತಿನಗರ ಪಿಎಸ್‌ಐ ರಾಮಚಂದ್ರ, ಪಿಎಸ್‌ಐ ಸಾಬಯ್ಯ ಹಾಗೂ ಅಪರಾಧ ವಿಭಾಗದ ಸಿಬ್ಬಂದಿ ತಂಡ ರಚಿಸಲಾಗಿತ್ತು. ಕಾರ್ಯಾಚರಣೆ ನಡೆಸಿದ ಪೊಲೀಸರ ತಂಡ, ಸುರೇಶ, ರವಿ, ಮೋಸಿನ್, ಅಬ್ದುಲ್ ಖಾದರ್, ಹುಸೇನ್, ಶಕೀಲ್, ಮಹಿಬೂಬ್, ಶ್ರೀಹರಿ, ಅಕ್ಬರ್, ಅಫ್ಜಲ್, ಮಹಮ್ಮದ್ ಗೌಸ್, ನವಾಜ್ ಎಂಬ ಆರೋಪಿಗಳನ್ನು ಬಂಧಿಸಿ ಬಂಧಿತರಿಂದ ಕೃತ್ಯಕ್ಕೆ ಬಳಸಿದ ಲಾಂಗು, ಚಾಕು ಸೇರಿದಂತೆ ಇನ್ನಿತರ ಮಾರಕಾಸ್ತ್ರ ವಶಪಡಿಸಿಕೊಂಡಿದೆ ಎಂದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶ್ರೀಹರಿಬಾಬು, ಡಿವೈಎಸ್‌ಪಿ ಶಿವನಗೌಡ ಪಾಟೀಲ್, ಸಿಪಿಐ, ಪಿಎಸ್‌ಐ ಮತ್ತು ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.