ಮಾಸ್ಕ್ ಇಲ್ಲದೆ ಸಂಚಾರ; ದಂಡ ವಸೂಲಿ

ಲಾಕ್‌ಡೌನ್‌ ಎಫೆಕ್ಟ್: ಪಾಲಿಕೆಯಿಂದ 10 ದಿನಗಳಲ್ಲಿ ಲಕ್ಷ ರೂ. ಸಂಗ್ರಹ

Team Udayavani, May 15, 2020, 5:20 PM IST

15-May-17

ಸಾಂದರ್ಭಿಕ ಚಿತ್ರ

ಬಳ್ಳಾರಿ: ಕೋವಿಡ್ ವೈರಸ್‌ ತಡೆಯುವ ಸಲುವಾಗಿ ರಾಜ್ಯ ಸರ್ಕಾರದ ಆದೇಶದಂತೆ ಬಳ್ಳಾರಿ ಮಹಾನಗರ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದೆ ಹೊರಗಡೆ ಸಂಚರಿಸುತ್ತಿರುವವರಿಂದ ಪಾಲಿಕೆ ಸಂಗ್ರಹಿಸಿದ ದಂಡದ ಮೊತ್ತ 10 ದಿನಗಳಲ್ಲಿ ಬರೋಬ್ಬರಿ 1.26 ಲಕ್ಷ ರೂ.ಗಳಾಗಿವೆ.

ಹೌದು…! ಕೋವಿಡ್ ತಡೆಗೆ ಕೇಂದ್ರ ಸರ್ಕಾರ ಘೋಷಿಸಿದ ಲಾಕ್‌ಡೌನ್‌-3 ಅನ್ವಯ ಮನೆಯಿಂದ ಅಗತ್ಯ ಕೆಲಸಕ್ಕೆ ಹೊರಬರುವ ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು. ಒಂದು ವೇಳೆ ಮಾಸ್ಕ್ ಧರಿಸದೇ ಇದ್ದರೆ ಅವರಿಗೆ ದಂಡ ವಿಧಿಸಲಾಗುತ್ತದೆ. 100 ರೂ.ನಿಂದ 200 ರೂ.ವರೆಗೆ ದಂಡ ವಿಧಿಸಲು ಅವಕಾಶ ಇದೆ. ಸಾರ್ವಜನಿಕರು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವುದನ್ನು ಮನದಟ್ಟು ಮಾಡಿಕೊಳ್ಳಲು ರಸ್ತೆಗೆ ಇಳಿದ ಮಹಾನಗರ ಪಾಲಿಕೆ ಅಧಿಕಾರಿಗಳು ಕಳೆದ 10 ದಿನಗಳಿಂದ ವಸೂಲಿ ಮಾಡಿದ ದಂಡದ ಮೊತ್ತ ಒಂದು ಲಕ್ಷ ರೂ. ದಾಟಿದೆ.

ಮೇ 14ರ ಅಂತ್ಯಕ್ಕೆ ಪಾಲಿಕೆ ಪರಿಸರ ವಿಭಾಗದ ಅಧಿಕಾರಿಗಳು ಒಟ್ಟಾರೆ 1,21,600 ರೂ. ದಂಡವನ್ನು ಸಾರ್ವಜನಿಕರಿಗೆ ವಿಧಿಸಿದ್ದಾರೆ. ಒಟ್ಟಾರೆ 1216 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಮಾಸ್ಕ್ ಹಾಕಿಕೊಳ್ಳದೇ ಓಡಾಡುವವರಿಗೆ ಜಾಗೃತಿ ಮೂಡಿಸುತ್ತಿರುವ ಪಾಲಿಕೆ ಅಧಿಕಾರಿಗಳು ಜೊತೆ ಜೊತೆಗೆ ದಂಡ ಸಹ ವಿಧಿಸುವ ಮೂಲಕ ಮತ್ತೂಮ್ಮೆ ಈ ರೀತಿ ತಪ್ಪು ಮಾಡದಂತೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

ಕೋವಿಡ್ ಎಂಬ ಮಹಾಮಾರಿ ಅತಿ ವೇಗವಾಗಿ ಹರಡುತ್ತದೆ. ಇದು ಮನುಷ್ಯನ ಗಂಟಲು, ಶ್ವಾಸಕೋಶವನ್ನು ತನ್ನ ಆಶ್ರಯ ತಾಣ ಮಾಡಿಕೊಳ್ಳುತ್ತದೆ. ಸಾಮಾನ್ಯವಾಗಿ ಮನುಷ್ಯರಿಂದ ಮನುಷ್ಯರಿಗೆ ಹರಡುವ ಈ ವೈರಸ್‌ ಕೈ ಮೂಲಕ ನೇರ ಮೂಗು, ಬಾಯಿ ತಲುಪುವ ಪ್ರಮಾಣ ಹೆಚ್ಚಿದೆ. ಇದೇ ಕಾರಣಕ್ಕೆ ಮಾಸ್ಕ್ ಧರಿಸುವುದು ಅತ್ಯಾವಶ್ಯವಾಗಿರುತ್ತದೆ. ಇದನ್ನೇ ಜನರಿಗೆ ತಿಳಿಹೇಳುವ ಪಾಲಿಕೆ ಅಧಿಕಾರಿಗಳು ಬಡವರು, ಕೂಲಿ ಕಾರ್ಮಿಕರು, ಗ್ರಾಮೀಣ ಭಾಗದ ಜನರಿಗೆ ಉಚಿತ ಮಾಸ್ಕ್ ಸಹ ಹಂಚುತ್ತಿರುವುದು ವಿಶೇಷ.

ಮೇ 7 ರಂದು ಒಂದೇ ದಿನ 16,100 ರೂ. ದಂಡ ವಸೂಲಾತಿ ಆಗಿವುದು ದೊಡ್ಡ ಮೊತ್ತವಾದರೆ ಪ್ರತಿದಿನ ಸರಾಸರಿ 10 ಸಾವಿರ ರೂ. ದಂಡ ವಸೂಲಾಗಿದೆ. ನಗರದ ಪ್ರಮುಖ ವೃತ್ತ, ಅತ್ಯಂತ ಜನನಿಬಿಡ ಪ್ರದೇಶದಲ್ಲಿ ಠಿಕಾಣಿ ಹೂಡುವ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಬೆಳಗ್ಗೆ 10 ರಿಂದ ಸಂಜೆ ತನಕ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

ಟಾಪ್ ನ್ಯೂಸ್

1-eewq

ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ

1-5555

Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಪ್ರೋತ್ಸಾಹ ಧನ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary

Bellary: ಐದು ವರ್ಷದ ಮಗುವಿನ ಅತ್ಯಾಚಾರ ನಡೆಸಿದ್ದ ಆರೋಪಿಗೆ ಗುಂಡೇಟು

ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್‌ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ

ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್‌ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ

5-balalri

ಆಕಳುಗಳ ಕೆಚ್ಚಲು ಕೊಯ್ದ ಪ್ರಕರಣ; ಶಾಸಕ,ಉಸ್ತುವಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

Makar Sankranti: ಹಂಪಿಗೆ ಹರಿದು ಬಂದ ಭಕ್ತ ಜನ ಸಾಗರ!

Makar Sankranti: ಹಂಪಿಗೆ ಹರಿದು ಬಂದ ಭಕ್ತ ಜನ ಸಾಗರ!

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

1-eewq

ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ

1-5555

Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

crime

Padubidri: ಸ್ಕೂಟಿಗೆ ಈಚರ್‌ ವಾಹನ ಢಿಕ್ಕಿ; ಸವಾರನಿಗೆ ಗಾಯ

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.