ಗುತ್ತಿಗೆ ನೌಕರರಿಂದ ಮೌನ ಪ್ರತಿಭಟನೆ


Team Udayavani, May 15, 2020, 11:36 AM IST

Udayavani Kannada Newspaper

ಯಾದಗಿರಿ: ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆ, ಆರೋಗ್ಯ ಮತ್ತು ಜೀವ ವಿಮೆ, ಸೇರಿ 14 ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆರೋಗ್ಯ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘದ ಪ್ರತಿಭಟನೆ ಆರಂಭವಾಗಿದೆ.

ಜಿಲ್ಲೆಯ ಗುರುಮಠಕಲ್‌ ನಗರದ ಕೋವಿಡ್‌ ಜ್ವರ ತಪಾಸಣಾ ಕೇಂದ್ರದಲ್ಲಿ ಆರೋಗ್ಯ ವೈದ್ಯಕೀಯ ಇಲಾಖೆ ಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ವಿಶ್ವಾರಾಧ್ಯ ಯಮೋಜಿ ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಎಲ್ಲ ಹೊರ, ಒಳ ಗುತ್ತಿಗೆ ನೌಕರರು ಪ್ರಾಣ ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದು, ಕೊರೊನಾ ಸೈನಿಕರಿಗೆ ಪ್ರತಿಯೊಬ್ಬರೂ ಶ್ರದ್ಧಾಂಜಲಿ ಸಲ್ಲಿಸಬೇಕು ಎಂದರು.

ಸಂಘದಿಂದ ಫೆಬ್ರವರಿ ತಿಂಗಳಲ್ಲಿ ನಡೆಸಿದ ಪ್ರತಿಭಟನೆ ಸಂದರ್ಭದಲ್ಲಿ ಅಂದಿನ ಸಿಎಂ ಕುಮಾರಸ್ವಾಮಿ ಭರವಸೆ ನೀಡಿ ಸಭೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಆದರೆ ಸರ್ಕಾರ ಬದಲಾಗಿ ಯಡಿಯೂರಪ್ಪ ಸಿಎಂ ಆದ ಮೇಲೆ ನಮ್ಮ ಬೇಡಿಕೆ ಕುರಿತು ಆರೋಗ್ಯ ಸಚಿವರು ಹಾಗೂ ಕಾರ್ಯದರ್ಶಿಗಳ ಹಂತದಲ್ಲಿ ಮಾತುಕತೆ ನಡೆದಿದ್ದು, 14 ಬೇಡಿಕೆ ಈಡೇರಿಕೆಗೆ ಭರವಸೆಯೂ ನೀಡಿದರು. ಆದರೆ ಅಷ್ಟರಲ್ಲಿಯೇ ಕೋವಿಡ್ ವೈರಸ್‌ ದಾಳಿಯಿಂದಾಗಿ ಬೇಡಿಕೆಗಳು ನನೆಗುದಿಗೆ ಬಿದ್ದಿವೆ ಎಂದರು.

ಕೋವಿಡ್ ತುರ್ತು ಪರಿಸ್ಥಿತಿಯಲ್ಲಿಯೂ ಬೇಡಿಕೆಗಳು ಈಡೇರಲಿಲ್ಲ. ಇದೀಗ ಬೇಡಿಕೆಗಳ ಜೊತೆಗೆ ಕೋವಿಡ್ ವಿಶೇಷ ಪ್ಯಾಕೇಜ್‌ ನೀಡುವುದು, ಈಗಾಗಲೇ ನೀಡಿದ ಬೋನಸ್‌ನಲ್ಲಿನ ನ್ಯೂನತೆಗಳು ಸರಿಪಡಿಸುವುದು, ಹೊರಗುತ್ತಿಗೆ ನೌಕರರಿಗೆ ಏಜೆನ್ಸಿ ಬದಲಾವಣೆ ಹೆಸರಿನಲ್ಲಿ ಆಗುತ್ತಿರುವ ಕಿರುಕುಳ ನಿಲ್ಲಿಸಬೇಕು, ಎನ್‌.ಎಚ್‌. ಎಂ. ಆಡಳಿತಾಧಿಕಾರಿ ಕಳೆದ 4 ವರ್ಷಗಳಿಂದ ಒಂದೇ ಜಾಗೆಯಲ್ಲಿದ್ದು, ಇವರು ನೌಕರರ ಹಿತ ಕಾಯುವಲ್ಲಿ ವಿಫಲರಾಗಿದ್ದಾರೆ. ಇವರನ್ನು
ಬದಲಾಯಿಸಿ ದಕ್ಷ ಅಧಿಕಾರಿ ನೇಮಿಸಬೇಕೆಂಬ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದರು.

ರಾಜ್ಯಾದ್ಯಂತ ಕಪ್ಪು ಪಟ್ಟಿ ಧರಿಸಿ ಕೆಲಸ ನಿರ್ವಹಿಸುವ ಮೂಲಕ ನಿರಂತರ ಮೌನ ಪ್ರತಿಭಟನೆ ಮೂರನೇ ದಿನವಾದ ಗುರುವಾರ ಕರ್ತವ್ಯ ಪ್ರಾರಂಭಕ್ಕೂ ಮುನ್ನ 2 ನಿಮಿಷ ಹುತಾತ್ಮರಾದ ಕೊರೊನಾ ಸೈನಿಕರಿಗೆ ಶಾಂತಿ ಕೋರಿ ಮೌನಾಚರಣೆ ನಂತರ ಮೌನ ಪ್ರತಿಭಟನೆ ದಾಖಲಿಸಿ ನಂತರ ಕರ್ತವ್ಯಕ್ಕೆ ಹಾಜರಾದರು. ಜಿಲ್ಲಾ ಕಾರ್ಯದರ್ಶಿ ಡಾ. ಭಾಗರೆಡ್ಡಿ, ರಾಚಣ್ಣ ಗೌಡ, ಚಂದ್ರಶೇಖರ್‌ ಡಿ, ಬಸರೆಡ್ಡಿ, ಸೌಮ್ಯಾ ಬಿ, ಡಾ. ಜಯಶ್ರೀ ಇದ್ದರು.

ಟಾಪ್ ನ್ಯೂಸ್

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Katpadi: ಸ್ಕೂಟರ್‌ಗೆ ಟೆಂಪೋ ಢಿಕ್ಕಿ 

Katpadi: ಸ್ಕೂಟರ್‌ಗೆ ಟೆಂಪೋ ಢಿಕ್ಕಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.