![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 15, 2020, 9:48 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೀದರ್: ಜಿಲ್ಲೆಯಲ್ಲಿ ತಲ್ಲಣ ಮೂಡಿಸುತ್ತಿರುವ ಕೋವಿಡ್ ಸೋಂಕಿಗೆ ಎರಡನೇ ಬಲಿ ಆಗಿದೆ. ಆದರೆ ಈ ವಿಚಾರ ಇದೀಗ ತಡವಾಗಿ ಬೆಳಕಿಗೆ ಬಂದಿದೆ.
ಇನ್ನೊಂದೆಡೆ ದೆಹಲಿ, ಮುಂಬೈ ಬಳಿಕ ಈಗ ಜಿಲ್ಲೆಗೆ ಹೈದ್ರಾಬಾದ್ ಕಂಟಕ ಶುರುವಾಗಿದ್ದು, ಶುಕ್ರವಾರ ಬಾಲಕಿ ಸೇರಿ ಜಿಲ್ಲೆಯಲ್ಲಿ ಮತ್ತೆ 7 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಈಗ 56 ಕ್ಕೆ ಏರಿಕೆಯಾಗಿದೆ.
ತೀವ್ರ ಉಸಿರಾಟದ ತೊಂದರೆಯಿಂದ ಬ್ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಹುಮನಾಬಾದ್ ತಾಲೂಕಿನ ಚಿಟಗುಪ್ಪಾ ಗ್ರಾಮದ 50 ವರ್ಷದ ಪಿ- 1041 ಸಂಖ್ಯೆಯ ರೋಗಿ ಮೇ 12ರಂದು ಸಾವನ್ನಪ್ಪಿದ್ದರು.
ಅವರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಶುಕ್ರವಾರ ಬಂದಿದ್ದು, ಕೋವಿಡ್ ಸೊಂಕು ಇದ್ದಿರುವುದು ದೃಢಪಟ್ಟಿದೆ. ಮೇ 2ರಂದು ಬೀದರನ ಓಲ್ಡ್ ಸಿಟಿಯ 82 ವರ್ಷದ ನಿವಾಸಿ (ಪಿ-590) ಈ ಮಹಾಮಾರಿಗೆ ಮೊದಲ ಬಲಿಯಾಗಿದ್ದರು.
ಕೇವಲ ಬೀದರ್ ನ ಒಂದು ಭಾಗಕ್ಕಷ್ಟೇ ಕಾಡುತ್ತಿದ್ದ ಸೋಂಕು ಈಗ ಜಿಲ್ಲೆಯ ಹಳ್ಳಿಗಳಿಗೂ ವ್ಯಾಪಿಸುತ್ತಿರುವುದು ಜನರಲ್ಲಿ ತೀವ್ರ ಆತಂಕವನ್ನುಂಟು ಮಾಡುತ್ತಿದೆ. ಜತೆಗೆ ಜಿಲ್ಲೆಗೆ ತಬ್ಲೀಘಿ ಮತ್ತು ಮುಂಬೈನ ನಂಟು ದೊಡ್ಡ ಕಂಟಕವಾಗಿ ಕಾಡುತ್ತಿದೆ.
ಶುಕ್ರವಾರದ ಪಾಸಿಟಿವ್ ಪ್ರಕರಣಗಳಲ್ಲಿ ಐದು ಸೋಂಕಿತರು ತಬ್ಲೀಘಿಗಳ ಮತ್ತು ಒಂದು ಕೇಸ್ ಮುಂಬೈನ್ ಸಂಪರ್ಕ ಇರುವುದು ಖಾತ್ರಿ ಆಗಿದೆ.
ಮುಂಬೈನಿಂದ ಬಂದಿರುವ ಬಸವಕಲ್ಯಾಣ ತಾಲೂಕಿನ ಧನ್ನೂರ(ಕೆ) ಗ್ರಾಮದ ವ್ಯಕ್ತಿಗೆ ಸೋಂಕು ತಗುಲಿದೆ. ಚಿಟಗುಪ್ಪ ಮತ್ತು ಧನ್ನೂರ (ಕೆ) ಗ್ರಾಮಗಳನ್ನು ಕಂಟೈನ್ಮೆಂಟ್ ಝೋನ್ ಆಗಿ ಘೋಷಿಸಿ ಲಾಕ್‌ಡೌನ್ ಮಾಡಲಾಗಿದೆ.
ನಗರದ ಕಂಟೈನ್ಮೆಂಟ್ ಝೋನ್ ನಲ್ಲಿ ಕೋವಿಡ್ ಆರ್ಭಟ ಹೆಚ್ಚಳಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರ‍್ಯಾಂಡಮ್ ಪರೀಕ್ಷೆ ಶುರು ಮಾಡಿರುವುದರಿಂದ ಕಳೆದ ಐದು ದಿನಗಳಿಂದ ಪ್ರತಿ ದಿನ ಸೋಂಕಿತರು ಪತ್ತೆಯಾಗುತ್ತಿದ್ದಾರೆ.
ಜಿಲ್ಲೆಯಲ್ಲಿ ಈ ಐದು ದಿನಗಳಲ್ಲಿ 32 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದು ಜಿಲ್ಲೆಯ ಜನರಲ್ಲಿ ಆತಂಕ ಹೆಚ್ವಿಸುವಂತೆ ಮಾಡಿದರೆ, ಸೋಂಕು ನಿಯಂತ್ರಣಕ್ಕೆ ಸಮರ ನಡೆಸುತ್ತಿರುವ ಜಿಲ್ಲಾಡಳಿತಕ್ಕೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ.
14 ವರ್ಷದ ಪಿ-990 ರೋಗಿಯು ಪಿ-936ರ, 10 ವರ್ಷದ ಪಿ-991 ರೋಗಿಯು ಪಿ-937ರ ಸಂಪರ್ಕ, 24 ವರ್ಷದ ಪಿ-999, 46 ವರ್ಷದ ಪಿ- 1037 ಮತ್ತು 38 ವರ್ಷದ ಪಿ-1043 ಸಂಖ್ಯೆ ರೋಗಿಯು ಕಂಟೈನ್ಮೆಂಟ್ ಝೋನ್ ಸಂಪರ್ಕದಿಂದ ಸೋಂಕಿಗೆ ಒಳಗಾಗಿದ್ದರೆ, 52 ವರ್ಷದ ಪಿ- 1041 ರೋಗಿ ಹೈದ್ರಾಬಾದ್ ಮತ್ತು 36 ವರ್ಷದ ಪಿ- 1042 ರೋಗಿಯು ಮುಂಬೈ ಸಂಪರ್ಕದಿಂದ ಸೋಂಕಿಗೆ ಒಳಗಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಹೆಲ್ತ್ ಬುಲೇಟಿನ್ ತಿಳಿಸಿದೆ.
ಜಿಲ್ಲೆಯಲ್ಲಿ ಈಗ ಒಟ್ಟಾರೆ 56 ಪಾಸಿಟಿವ್ ಪ್ರಕರಣಗಳು ವರದಿ ಆದಂತಾಗಿದೆ. ಅದರಲ್ಲಿ ಎರಡು ಸಾವು ಸಂಭವಿಸಿದ್ದರೆ 15 ಜನರು ಡಿಸ್ಚಾರ್ಜ್ ಆಗಿದ್ದು, ಇನ್ನೂ 39 ಜನರು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.