ಹೊಸಾಡು ಹೊಳೆಗೆ ಕಾಲು ಸಂಕ : ಕಾಮಗಾರಿ ಆರಂಭ
Team Udayavani, May 16, 2020, 5:57 AM IST
ಕುಂದಾಪುರ: ಪ್ರತೀ ಮಳೆಗಾಲದಲ್ಲಿ ಉಕ್ಕಿ ಹರಿಯುವ ನದಿ ದಾಟುವ ತಾಪತ್ರಯದಿಂದ ಹೊಸಾಡು ನಾಗರೀಕರು ಮುಕ್ತರಾಗಲಿದ್ದಾರೆ. ಈಗಾಗಲೇ ಹೊಸದಾಗಿ ಕಾಲ ಸಂಕ ಮಂಜೂರಾಗಿ, ಕಾಮಗಾರಿಯೂ ಆರಂಭಗೊಂಡಿದ್ದು, ಭರದಿಂದ ಸಾಗುತ್ತಿದೆ. ಮಳೆಗಾಲಕ್ಕೂ ಮುನ್ನ ಜನ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆಗಳಿವೆ.
ಹೊಸಾಡು ಹೊಳೆಗೆ ಹೊಸದಾದ ಕಾಲು ಸಂಕ ನಿರ್ಮಾಣಕ್ಕೆ ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿಯವರ ಮುತುವರ್ಜಿಯಲ್ಲಿ ಶಾಲಾ ಸಂಪರ್ಕ ಸೇತು ಯೋಜನೆಯಡಿಯಲ್ಲಿ 10 ಲಕ್ಷ ರೂ. ಮಂಜೂರಾಗಿತ್ತು. ಕಾಲೊ¤àಡು ಗ್ರಾಮ ಬೋಳಂಬಳ್ಳಿ – ಹೊಸಾಡು ನಡುವೆ ಹಾದು ಹೋಗುವ ಹೊಸಾಡು ಹೊಳೆಯನ್ನು ದಾಟಿ ಹೋಗಲು ಸರಿಯಾದ ವ್ಯವಸ್ಥೆ ಇರಲಿಲ್ಲ. ಬೋಳಂಬಳ್ಳಿ, ಹೊಸಾಡು, ಕಾಡಿನಹೊಳೆ, ಮೈನ್‌ಮಕ್ಕಿ, ಕಡಾಟೆ, ಕೆಂಜಿ, ಕೊಡಾಲು ಪರಿಸರದ ಜನ ಕಾಲ್ತೋಡಿಗೆ ಹೋಗಬೇಕಿದ್ದರೆ ಇದೇ ಸಂಕದಾಟಿ ಹೋಗಬೇಕು.
ನದಿ ದಾಟಲು ಸರಿಯಾದ ಕಾಲು ಸಂಕದ ವ್ಯವಸ್ಥೆಯಿಲ್ಲದ ಕಾರಣ ಬೋಳಂಬಳ್ಳಿ ಶಾಲೆಗೆ, ಅಂಗನವಾಡಿಗೆ ಹೋಗುವ ಮಕ್ಕಳು ತುಂಬಾ ಸಂಕಷ್ಟ ಅನುಭವಿಸುತ್ತಿದ್ದರು. ಹೊಸಾಡು ಹೊಳೆಯನ್ನು ದಾಟಿ, ಕಾಲಸಂಕವನ್ನು ಬಳಸಿ ಪ್ರತಿದಿನ 1,500 ಹೆಚ್ಚು ಜನರು ಸಂಚರಿಸುತ್ತಾರೆ. ಹೊಸಾಡು ಪರಿಸರದಲ್ಲಿ 40ಕ್ಕೂ ಅಧಿಕ ಕುಟುಂಬಗಳಿವೆ. ಈಗ ಹೊಸದಾಗಿ ನಿರ್ಮಾಣವಾಗುತ್ತಿರುವ ಕಾಲು ಸಂಕದಿಂದಾಗಿ ಮಕ್ಕಳು, ನಾಗರಿಕರಿಗೆ ಅನುಕೂಲವಾದಂತಾಗಿದೆ.
ಮಳೆಗಾಲಕ್ಕೂ ಮುನ್ನ ಪೂರ್ಣ ಸಾಧ್ಯತೆ
ಹೊಸಾಡು ವಾಸಿಗಳು ಮಳೆಗಾಲದಲ್ಲಿ ಅಪಾಯಕಾರಿ ಕಾಲುಸಂಕ ದಾಟಿ ತಮ್ಮ ಬದುಕು ಕಟ್ಟಿಕೊಳ್ಳುತ್ತಿರುವುದು ಕಣ್ಣಾರೆ ಕಂಡಿದ್ದು, ಶಾಶ್ವತ ಕಾಲು ಸಂಕ ಅತ್ಯವಶ್ಯವಾಗಿತ್ತು. ಈ ನಿಟ್ಟಿನಲ್ಲಿ ಅಧಿಕಾರಿಗಳ ಜತೆ ಸ್ಥಳಕ್ಕೆ ಭೇಟಿ ನೀಡಿ ಯಾವುದಾದರೂ ಅನುದಾನದ ಮೂಲಕ ಕಾಲುಸಂಕ ಮಾಡುವ ನಿರ್ಧಾರಕ್ಕೆ ಬರಲಾಯಿತು. 10 ಲಕ್ಷ ರೂ. ವೆಚ್ಚದಲ್ಲಿ ಶಾಲಾ ಸಂಪರ್ಕ ಸೇತು ಯೋಜನೆಯಲ್ಲಿ ಕಾಲುಸಂಕ ನಿರ್ಮಾಣವಾಗುತ್ತಿದೆ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಕಾಮಗಾರಿ ವಿಳಂಬವಾಗಿದ್ದು, ತ್ವರಿತ ಗತಿಯಲ್ಲಿ ಕಾಮಗಾರಿ ಮುಗಿಸಿ, ಮಳೆಗಾಲದೊಳಗೆ ಸಂಚಾರಕ್ಕೆ ಬಿಟ್ಟುಕೊಡುವಂತೆ ಸೂಚಿಸಿದ್ದೇನೆ.
-ಬಿ.ಎಂ. ಸುಕುಮಾರ್ ಶೆಟ್ಟಿ , ಶಾಸಕರು, ಬೈಂದೂರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.