ಮೀನುಗಾರಿಕೆಗೆ 20 ಸಾವಿರ ಕೋ.ರೂ. ವಿಶೇಷ ಪ್ಯಾಕೇಜ್
ಮೊಗವೀರ ಮಹಾಜನ ಸಂಘ ಸಂತಸ
Team Udayavani, May 16, 2020, 5:32 AM IST
ಮಲ್ಪೆ: ಮೀನುಗಾರಿಕೆಗೆ ಸ್ತರಗಳಲ್ಲಿ ಸಹಕಾರಿಯಾಗುವ ನಿಟ್ಟಿನಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು 20 ಸಾವಿರ ಕೋ. ರೂ. ಆರ್ಥಿಕ ಪ್ಯಾಕೇಜನ್ನು ಘೋಷಿಸಿರುವ ಹಿನ್ನೆಲೆಯಲ್ಲಿ ದ.ಕ. ಮೊಗವೀರ ಮಹಾಜನ ಸಂಘ ಕೇಂದ್ರ ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿದೆ.
ಮೀನಿನ ಕ್ಷಾಮದಿಂದ ಕರಾವಳಿಯ ಮೀನುಗಾರರು ಸಂಕಷ್ಟದಲ್ಲಿದ್ದ ಸಂದರ್ಭ ಹಲವಾರು ಬಾರಿ ಕರಾವಳಿ ಕರ್ನಾಟಕದ ಮೀನುಗಾರರ ಮುಖಂಡ ಡಾ| ಜಿ. ಶಂಕರ್ ನೇತೃತ್ವದಲ್ಲಿ ಹೆಚ್ಚಿನ ಅನುದಾನಕ್ಕೆ ಕೇಂದ್ರ ಹಾಗೂ ರಾಜ್ಯ ಸರಕಾರಗಳನ್ನು ಆಗ್ರಹಿಸಲಾಗಿತ್ತು. ವಿಶೇಷ ಆರ್ಥಿಕ ಪ್ಯಾಕೇಜ್ನ ಉಪಯೋಗವು ಮೀನುಗಾರಿಕಾ ಉದ್ಯಮಗಳಿಗೆ ಮಾತ್ರವ ಲ್ಲದೆ, ಕರಾವಳಿ ಮತ್ತು ಒಳನಾಡಿನಲ್ಲಿ ಮೀನು ಗಾರಿಕೆ ನಡೆಸುತ್ತಿರುವ ಕಟ್ಟ ಕಡೆಯ ಮೀನುಗಾರನಿಗೂ ಸಿಗುವಂತಾಗಬೇಕು ಎಂದು ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ತಿಳಿಸಿದ್ದಾರೆ. ಇದೇ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕರಾವಳಿಯ ಸಮಸ್ತ ಮೀನುಗಾರರು ಮತ್ತು ದ.ಕ. ಮೊಗವೀರ ಮಹಾಜನ ಸಂಘದ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದ್ದಾರೆ.
ಫೆಡರೇಶನ್ ಹರ್ಷ
ಮಲ್ಪೆ: ಕೇಂದ್ರ ಸರಕಾರವು ವಿಶೇಷ ಆರ್ಥಿಕ ಪ್ಯಾಕೇಜ್ ಮೂಲಕ ದೇಶದ ಎಲ್ಲ ಕ್ಷೇತ್ರಗಳೊಂದಿಗೆ ಮೀನುಗಾರಿಕೆಯ ಅಭಿವೃದ್ಧಿಗೂ ಆದ್ಯತೆ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ, ವಿತ್ತ ಸಚಿವೆ ನಿರ್ಮಲ ಸೀತರಾಮನ್ ಅವರಿಗೆ ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಕೃತಜ್ಞತೆ ಸಲ್ಲಿಸುತ್ತದೆ ಎಂದು ಫೆಡರೇಶನ್ ಅಧ್ಯಕ್ಷ ಯಶಪಾಲ್ ಎ. ಸುವರ್ಣ ತಿಳಿಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ, ಮೀನು ಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ವಿಶೇಷ ಮುತುವರ್ಜಿಯಿಂದ ಮೀನು
ಗಾರಿಕೆಯ ಸಮಗ್ರ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಸಲ್ಲಿಸುವುದಾಗಿ ಯಶ್ಪಾಲ್ ಸುವರ್ಣ ಅವರು ಇದೇ ವೇಳೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ
Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.