ಮೈಸೂರು ದೇಶಕ್ಕೇ ಮಾದರಿ: ಸುಧಾಕರ್
Team Udayavani, May 16, 2020, 8:15 AM IST
ಬೆಂಗಳೂರು: ಕೆಂಪು ವಲಯದಲ್ಲಿದ್ದ ಮೈಸೂರು ಕೋವಿಡ್ 19 ಸೋಂಕು ಮುಕ್ತವಾಗಿದ್ದು ದೇಶಕ್ಕೆ ಮಾದರಿಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹರ್ಷ ವ್ಯಕ್ತಪಡಿಸಿದ್ದಾರೆ. ಯಾವುದೇ ಪ್ರಾಣಹಾನಿ ಇಲ್ಲದೇ ಎಲ್ಲಾ 90 ಮಂದಿ ಸೋಂಕಿತರು ಗುಣಮುಖರಾಗಿ ಮನೆಗೆ ಹಿಂತಿರುಗಿದ್ದಾರೆ. ಇದರೊಂದಿಗೆ ಕೆಂಪು ವಲಯವಾಗಿದ್ದ ಮೈಸೂರು ಜಿಲ್ಲೆ ಹಸಿರು ವಲಯದತ್ತ ಹೆಜ್ಜೆ ಹಾಕಿರುವುದು ಆಶಾದಾಯಕ ಬೆಳವಣಿಗೆ.
ಸರ್ಕಾರ ಕೈಗೊಂಡ ಪರಿಣಾಮಕಾರಿ ಕ್ರಮ, ಜಿಲ್ಲಾಡಳಿತದ ಪರಿಶ್ರಮ ಹಾಗೂ ಜಿಲ್ಲೆಯ ಜನತೆಯ ಸಹಕಾರದಿಂದ ಇದನ್ನು ಸಾಧಿಸಲು ಸಾಧ್ಯವಾಗಿದೆ. ಇದಕ್ಕೆ ಕಾರಣರಾದ ಎಲ್ಲರನ್ನೂ ಅಭಿನಂದಿಸುತ್ತೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಆರಂಭದಲ್ಲಿ ಸೋಂಕಿತರ ಸಂಖ್ಯೆ ಆತಂಕ ಮೂಡಿಸಿತ್ತು. ಆದರೆ, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಸರ್ಕಾರದ ಸೂಚನೆಗಳನ್ನು ಚಾಚೂ ತಪ್ಪದೆ ಪಾಲಿಸಿದ ಜಿಲ್ಲಾಡಳಿತದ ಪರಿಶ್ರಮ ಇದಕ್ಕೆ ಕಾರಣ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.