ಸರಕಾರದ ಪ್ಯಾಕೇಜ್ ಗಳು, ಪರಿಹಾರ ಘೋಷಣೆಗೆ ಮಾತ್ರನಾ ಎಂದ ಶಾಸಕ ಶರಣಬಸ್ಸಪ್ಪ ದರ್ಶನಾಪುರ

Team Udayavani, May 16, 2020, 4:00 PM IST

ಸರಕಾರದ ಪ್ಯಾಕೇಜ್ ಗಳು, ಪರಿಹಾರ ಘೋಷಣೆಗೆ ಮಾತ್ರನಾ ಎಂದ ಶಾಸಕ ಶರಣಬಸ್ಸಪ್ಪ ದರ್ಶನಾಪುರ

ಯಾದಗಿರಿ: ಲಾಕ್ ಡೌನ್ ಹಿನ್ನೆಲೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಪ್ಯಾಕೇಜ್ ಘೋಷಣೆ ಮಾಡಿದ್ದು ಜಿಲ್ಲೆಯ ಎಷ್ಟು ಜನರಿಗೆ ಲಾಭ ಸಿಕ್ಕಿದೆ? ಪಟ್ಟಿ ಏನಾದರೂ ಇದೆಯಾ ಎಂದು ಶಹಾಪುರ ಶಾಸಕ ಶರಣಬಸ್ಸಪ್ಪ ದರ್ಶನಾಪುರ ಸಭೆಯಲ್ಲಿ ಪ್ರಶ್ನಿಸಿದರು

ಯಾದಗಿರಿ ಜಿ.ಪಂ. ಸಭಾಂಗಣದಲ್ಲಿ ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಬಿ.ಚವ್ಹಾಣ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಶಾಸಕರು ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಪರಿಹಾರ ಘೋಷಣೆ ಕೇವಲ ಟಿವಿಯಲ್ಲಿ ನೋಡಿ ಖುಷಿ ಪಡುವಂತಾಗಿದೆ, ಎಷ್ಟು ಕ್ಷೌರಿಕರು, ತೋಟಗಾರಿಗೆ ಬೆಳೆದ ರೈತರು, ಟ್ಯಾಕ್ಸಿ ಚಾಲಕರಿಗೆ ಲಾಭವಾಗಲಿದೆ ಎಂದರು.

ಆಡಳಿತ ಪಕ್ಷದ ಶಾಸಕ ನರಸಿಂಹ ನಾಯಕ್ ಸರ್ಕಾರದ ಧೋರಣೆಯನ್ನು ಖಂಡಿಸಿದರು.

ಜಿಲ್ಲೆಯಲ್ಲಿ ಕಾರ್ಮಿಕ ಅಧಿಕಾರಿಗಳೇ ಇಲ್ಲ. ಕನಿಷ್ಟ ತಾಲೂಕಿಗೆ ಒಬ್ಬರಾದರು ಇರಬೇಕು ಎಂದರು. ಇದರಿಂದ ಫಲಾನುಭವಿಗಳು ಲಾಭ ಪಡೆಯಲು ಕಷ್ಟವಾಗುತ್ತಿದೆ‌ ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲ ಎನ್ನುವಂತ ಪರಿಸ್ಥಿತಿಯಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದರು.

ಸರ್ಕಾರದ ಮಟ್ಟದಲ್ಲಿ ಜಿಲ್ಲೆಯ ಸಮಸ್ಯೆಯ ಕುರಿತು ಬೆಳಕು ಚೆಲ್ಲಿ, ತಾನು ಆಡಳಿತ ಪಕ್ಷದ ಶಾಸಕನಾಗಿ ಸರ್ಕಾರಕ್ಕೆ ಕೆಟ್ಟ ಹೆಸರು ತರಿವುದು ತನಗೂ ಇಷ್ಟವಿಲ್ಲ ಎಂದು ಸಚಿವರೆದುರು ಬೇಸರದ ಮಾತುಗಳನ್ನಾಡಿದರು.

ಬೇರೆ ಜಿಲ್ಲೆಯಿಂದ ಕಾರ್ಮಿಕರನ್ನು ಕರೆತರಲು ಸರ್ಕಾರ  ಉಚಿತ ಬಸ್ ವ್ಯವಸ್ಥೆ ಮಾಡಿತ್ತು ಆದರೆ ಯಾದಗಿರಿ ಜಿಲ್ಲೆಯಲ್ಲಿ ಕೇವಲ 15 ಬಸ್ ಉಚಿತ ಸೇವೆ ನೀಡಿದ್ದು 18 ಬಸ್ ಗಳಿಗೆ ತಾನು ಸ್ವತಾ ದುಡ್ಡು ಪಾವತಿಸಿ ಕಾರ್ಮಿಕರನ್ನು ಕರೆಯಿಸಿದ್ದೇನೆ ಎಂದರು.

ಮೊದಲೇ ಜನರ ಬಳಿ ದುಡ್ಡಿಲ್ಲ ಈ ಸಂದರ್ಭದಲ್ಲಿ ದುಪ್ಪಟ್ಟು ದುಡ್ಡು ಪಡೆಯುವುದು ಸರಿಯಲ್ಲ ಸಾರಿಗೆ ಇಲಾಖೆ ಮಾನವೀಯತೆ ತೋರಬೇಕು,ಅದು ಸರ್ಕಾರದ ಅಂಗ ಇದರಿಂದ ಸರ್ಕಾರಕ್ಕು ಒಳ್ಳೆಯ ಹೆಸರು ಬರಲ್ಲ ಎಂದರು.

ವಿಜಯಪುರದ ಇಂಡಿಯಿಂದ ಸುರಪುರಕ್ಕೆ ಉಚಿತ ಬಸ್ ಬರಲು ತಯಾರಿರಲಿಲ್ಲ .ತಾನು ಸ್ವತಃ 18 ಸಾವಿರ ಪಾವತಿಸಿದ ಬಳಿಕ ಬಸ್ ಬಿಡಲಾಯಿತು ಎಂದು ಸಚಿವರ ಗಮನಕ್ಕೆ ತಂದರು

ಇಂತಹದ್ದರಿಂದ ಸರ್ಕಾರಗಳು ಘೋಷಿಸಿರುವ ನೆರವು ಪ್ಯಾಕೇಜ್ ಗಳು ಹೊಳೆಯಲ್ಲಿ ಹುಣಸೆಹಣ್ಣು ತೊಳೆದಂತಾಗುತ್ತದೆ ಎಂದು ಸಚಿವರೆದುರು ಬೇಸರ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಕೂರ್ಮಾರಾವ್ ಮಾತನಾಡಿ, 363 ಉಚಿತ ಬಸ್ ಗಳ ಮೂಲಕ ಬೆಂಗಳೂರಿನಿಂದ ಕಾರ್ಮಿಕರು ಜಿಲ್ಲೆಗೆ ಆಗಮಿಸಿದ್ದು, ಜಿಲ್ಲೆಯಲ್ಲಿ 72 ಉಚಿತ ಬಸ್ ಸಂಚಾರವಾಗಿದೆ ಹಾಗೂ ಕಲಬುರಗಿಯಿಂದ 17 ಬಸ್ ಗಳು ಜಿಲ್ಲೆಗೆ ಬಂದಿದ್ದು ಸರ್ಕಾರದ ನಿರ್ದೇಶನದಂತೆ ಉಚಿತ ಸಾರಿಗೆ ವ್ಯವಸ್ಥೆ ಯಾಗಿದೆ ಎಂದು ಸ್ಪಷ್ಟನೆ ನೀಡಿದರು.

ಟಾಪ್ ನ್ಯೂಸ್

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

1-dr

Veerendra Heggade 77ನೇ ವರ್ಷಕ್ಕೆ ಪಾದಾರ್ಪಣೆ: ಗಣ್ಯರಿಂದ ಶುಭ ಹಾರೈಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.