ಮಹಿಳೆಯರ ಬಗ್ಗೆ ಕಾಳಜಿಯಿದ್ದರೆ ಸಾಂತ್ವನ ಮತ್ತು ಮಾತೃಶ್ರೀ ಯೋಜನೆ ರದ್ದತಿ ಹಿಂಪಡೆಯಿರಿ
ಸರಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ
Team Udayavani, May 16, 2020, 5:16 PM IST
ಬೆಂಗಳೂರು: ಸಾಂತ್ವನ ಮತ್ತು ಮಾತೃಶ್ರೀ ಯೋಜನೆಗಳನ್ನು ಸ್ಥಗಿತ ಮಾಡಲು ರಾಜ್ಯ ಸರಕಾರ ನೀಡಿರುವ ಆದೇಶವನ್ನು ಹಿಂಪಡೆಯಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರಕ್ಕೆ ಆಗ್ರಹಿಸಿದ್ದಾರೆ.
ಈ ಬಗ್ಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ಮಹಿಳೆಯರ ಪ್ರಮುಖ ಸಮಸ್ಯೆಗಳಾದ ವರದಕ್ಷಿಣೆ ಕಿರುಕುಳ, ಲೈಂಗಿಕ ಹಲ್ಲೆ, ಕೌಟುಂಬಿಕ ಹಿಂಸೆ ಹಾಗೂ ಇತರೆ ದೌರ್ಜನ್ಯಗಳಿಗೆ ಒಳಪಟ್ಟ ಮಹಿಳೆಯರ ಸಮಸ್ಯೆಗಳಿಗೆ ಒಂದೇ ಸೂರಿನಡಿಯಲ್ಲಿ ಸ್ಪಂದಿಸಿ, ಅವರಿಗೆ ವೈದ್ಯಕೀಯ, ಕಾನೂನು, ಸಲಹೆ ಹಾಗೂ ಸಾಂತ್ವನವನ್ನು ನೀಡುವುದರ ಮೂಲಕ ನ್ಯಾಯ ದೊರಕಿಸಿಕೊಡುವ ಉದ್ದೇಶದಿಂದ 2001-02ನೇ ಸಾಲಿನಿಂದ “ಸಾಂತ್ವನ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿತ್ತು. ಇದೆ ರೀತಿ ಗರ್ಭಿಣಿ ಮತ್ತು ಬಾಣಂತಿಯರ ಪೌಷ್ಟಿಕತೆ ಮತ್ತು ಸುರಕ್ಷತೆಯನ್ನು ಕಾಪಾಡುವ ದೃಷ್ಟಿಯಿಂದ ತಲಾ ರೂ.5,000/-ಗಳ ಸಹಾಯಧನ ನೀಡುವ “ಮಾತೃಶ್ರೀ ಯೋಜನೆಯನ್ನು 2018 ರಿಂದ ರಾಜ್ಯದಲ್ಲಿ ಜಾರಿಗೊಳಿಸಲಾಗಿತ್ತು.
ಸದ್ಯ ರಾಜ್ಯ ಸರ್ಕಾರ ಕೋವಿಡ್-19 ರೋಗದ ನೆಪ ಒಡ್ಡಿ, ಸಂಪನ್ಮೂಲಗಳ ಉಳಿತಾಯದ ನೆಪದಲ್ಲಿ ಸಾಂತ್ವನ ಮತ್ತು ಮಾತೃಶ್ರೀಯಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಏಕಾಏಕಿ ರದ್ದುಗೊಳಿಸಿರುವುದು ಮಹಿಳಾ ಸಮೂಹಕ್ಕೆ ಮಾಡಿರುವ ದೊಡ್ಡ ದ್ರೋಹ ಮತ್ತು ಅನ್ಯಾಯವಾಗಿರುತ್ತದೆ. ಸರ್ಕಾರಕ್ಕೆ ಏನಾದರೂ ಮಹಿಳೆಯರ ಬಗ್ಗೆ ಕಾಳಜಿ ಇದ್ದರೆ ಕೂಡಲೆ ಸಾಂತ್ವನ ಮತ್ತು ಮಾತೃಶ್ರೀ ಯೋಜನೆಗಳ ರದ್ಧತಿಯನ್ನು ಹಿಂಪಡೆದು ಯಥಾಸ್ಥಿತಿ ಮುಂದುವರೆಸಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.