ರಾಜ್ಯದಲ್ಲಿ ಶಾಲೆಗಳ ಪುನರಾರಂಭ ಅನಗತ್ಯ ಗೊಂದಲ ಬೇಡ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ
Team Udayavani, May 16, 2020, 8:44 PM IST
ಬೆಂಗಳೂರು: ಕೋವಿಡ್ ಮಹಾಮಾರಿಯ ಹಿನ್ನಲೆಯಲ್ಲಿ ಮತ್ತು ಲಾಕ್ ಡೌನ್ ಸ್ಥಿತಿ ಸದ್ಯಕ್ಕೆ ಚಾಲನೆಯಲ್ಲಿರುವುದರಿಂದ ರಾಜ್ಯದಲ್ಲಿ ಶಾಲೆಗಳ ಪುನರಾರಂಭ ವಿಚಾರದಲ್ಲಿ ರಾಜ್ಯ ಸರಕಾರ ಇನ್ನೂ ಯಾವುದೇ ನಿರ್ಧಾರಗಳನ್ನು ತೆಗೆದುಕೊಂಡಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾಗಿರುವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ.
ಈ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿನ ಶಾಲೆಗಳನ್ನು ತರಾತುರಿಯಲ್ಲಿ ತೆರೆಯುವುದಿಲ್ಲ. ಮಕ್ಕಳ ಹಿತ ಕಾಪಾಡುವ ಜವಾಬ್ದಾರಿ ನಮ್ಮದು. ಈ ವಿಚಾರದಲ್ಲಿ ರಾಜ್ಯದಲ್ಲಿನ ಪೋಷಕರು ಅನಗತ್ಯ ಗೊಂದಲಕ್ಕೀಡಾಗುವ ಅಗತ್ಯವಿಲ್ಲ ಎಂದು ಶಿಕ್ಷಣ ಸಚಿವರು ಸ್ಪಷ್ಟನೆ ನೀಡಿದ್ದಾರೆ.
ಶಾಲೆಗಳ ಪುನರಾರಂಭ ವಿಚಾರವಾಗಿ ವಿವಿಧ ಮಾಧ್ಯಮಗಳಲ್ಲಿ ಬರುತ್ತಿರುವ ಕೆಲವೊಂದು ಮಾಹಿತಿಗಳು ಅಧಿಕೃತವಲ್ಲ ಮತ್ತು ಈ ಕುರಿತಾಗಿ ಶಿಕ್ಷಣ ಇಲಾಖೆಯಾಗಲಿ ಸರಕಾರವಾಗಲೀ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಸಚಿವ ಸುರೇಶ್ ಕುಮಾರ್ ತಮ್ಮ ಅಧಿಕೃತ ಟ್ವಿಟ್ಟರ್ ಅಕೌಂಟ್ ನಿಂದ ಟ್ವೀಟ್ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ.
ರಾಜ್ಯದ ಶಾಲಾ ಮಕ್ಕಳ ಪೋಷಕರಿಗೆ ಒಂದು ಮಾಹಿತಿ.
ತರಾತುರಿಯಲ್ಲಿ ನಮ್ಮ ರಾಜ್ಯದ ಶಾಲೆಗಳನ್ನು ತೆರೆಯುವುದಿಲ್ಲ.
ಮಕ್ಕಳ ಹಿತ ಕಾಪಾಡುವ ಜವಾಬ್ದಾರಿ ನಮ್ಮದು.
ಮಾಧ್ಯಮಗಳಲ್ಲಿ ಬರುತ್ತಿರುವ ಕೆಲ ಮಾಹಿತಿಗಳು ಅಧಿಕೃತವಲ್ಲ.
ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ.
— S.Suresh Kumar, Minister – Govt of Karnataka (@nimmasuresh) May 16, 2020
ಇದೇ ಸಂದರ್ಭದಲ್ಲಿ ರಾಜ್ಯದಲ್ಲಿರುವ ಕೆಲ ಖಾಸಗಿ ಶಾಲೆಗಳು ಎಲ್.ಕೆ.ಜಿ., ಯು.ಕೆ.ಜಿ. ಮಕ್ಕಳಿಗೂ ಆನ್ ಲೈನ್ ತರಗತಿ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸುರೇಶ್ ಕುಮಾರ್ ಅವರು ಗರಂ ಆಗಿದ್ದಾರೆ. ಮತ್ತು ಇಂತಹ ಶಾಲೆಗಳ ವಿರುದ್ಧ ಶಿಕ್ಷಣ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ಸಚಿವರು ನೀಡಿದ್ದಾರೆ.
LKG ಮತ್ತು UKG ಯ ಆ ಕಂದಗಳಿಗೂ On-line ಶಿಕ್ಷಣ ಕೊಡುವ ಮನಸ್ಥಿತಿಗೆ ಏನೆನ್ನಬೇಕು?
ಹಣದ ದುರಾಸೆಯಷ್ಟೇ!
ಅವರಿಗೆಲ್ಲಾ ಶಿಕ್ಷಣ ಇಲಾಖೆಯ ಕ್ರಮ ಕಾದಿದೆ.— S.Suresh Kumar, Minister – Govt of Karnataka (@nimmasuresh) May 16, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.