ಮೆಸ್ಕಾಂ ಅಧಿಕಾರಿಗಳೊಂದಿಗೆ ಶಾಸಕ ರಘುಪತಿ ಭಟ್ ಚರ್ಚೆ
ವಿದ್ಯುತ್ ಬಳಕೆಯ ನಿಗದಿತ ಶುಲ್ಕದಲ್ಲಿ ಬಳಕೆದಾರರಲ್ಲಿ ಗೊಂದಲ
Team Udayavani, May 17, 2020, 5:50 AM IST
ಉಡುಪಿ: ಶಾಸಕ ಕೆ. ರಘುಪತಿ ಭಟ್ ತಮ್ಮ ಕಚೇರಿಯಲ್ಲಿ ಉಡುಪಿ ಮೆಸ್ಕಾಂ ಅಧಿಕಾರಿಗಳೊಂದಿಗೆ ಮಾ. 23ರಿಂದ ಮೇ 1ರ ವರೆಗಿನ ವಿದ್ಯುತ್ ಬಳಕೆಯ ನಿಗದಿತ ಶುಲ್ಕದಲ್ಲಿ ಬಳಕೆದಾರರಲ್ಲಿ ಇರುವ ಗೊಂದಲದ ಬಗ್ಗೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಮೆಸ್ಕಾಂ ಅಧಿಕಾರಿಗಳು ಡಿಸೆಂಬರ್, ಜನವರಿ, ಫೆಬ್ರವರಿ ತಿಂಗಳ ಸರಾಸರಿ ಬಳಕೆಯ ಆಧಾರದ ಮೇಲೆ ಮೇ ತಿಂಗಳಲ್ಲಿ ವಿದ್ಯುತ್ ಬಿಲ್ಲನ್ನು ತಂತ್ರಾಂಶದ ಮೂಲಕ ನೀಡಿದೆ. ಗ್ರಾಮ ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವರ್ಗೀಕರಣದ ಆಧಾರದ ಮೇಲೆ ತಿಂಗಳ ಅನುಸೂಚಿಯ ದರದ ಮೇಲೆ ಶುಲ್ಕವನ್ನು ವಿಧಿಸಿರುವುದಾಗಿ ತಿಳಿಸಿದ್ದಾರೆ.
ನಿಗದಿತ ಅವಧಿಯಲ್ಲಿ ವಿದ್ಯುತ್ ಶುಲ್ಕವನ್ನು ಪಾವತಿಸದೆ ಇರುವವರಿಗೆ ಶೇ. ಒಂದರಷ್ಟು ಬಡ್ಡಿ ದರವನ್ನು ವಿಧಿಸಲಾಗಿದ್ದು, ನಿಗದಿತ ಅವಧಿಯಲ್ಲಿ ಶುಲ್ಕ ಪಾವತಿಸಿದವರಿಗೆ ಹೆಚ್ಚುವರಿಯಾಗಿ ಬಡ್ಡಿಯನ್ನು ವಿಧಿಸುವುದಿಲ್ಲ. ವಿದ್ಯುತ್‌ನ್ನು ಕಡಿಮೆ ಬಳಕೆ ಮಾಡಿ ಸರಾಸರಿ ಬಳಕೆಯ ಆಧಾರದ ಮೇಲೆ ಹೆಚ್ಚಿನ ವಿದ್ಯುತ್ ಬಳಕೆ ಶುಲ್ಕವನ್ನು ವಿಧಿಸಿದ್ದಲ್ಲಿ ಮುಂದಿನ ತಿಂಗಳು ಮರು ಹೊಂದಾಣಿಕೆ ಮಾಡುವಂತೆ ತಂತ್ರಾಂಶವನ್ನು ರೂಪಿಸಿ ಸರಿಪಡಿಸುವಂತೆ ತಿಳಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕರು ವಿದ್ಯುತ್ ಬಳಕೆಯ ಶುಲ್ಕದ ಬಗ್ಗೆ ಬಳಕೆದಾರರಿಗೆ ಇರುವ ಗೊಂದಲವನ್ನು ಮನದಟ್ಟು ಮಾಡುವಂತೆ ಮೆಸ್ಕಾಂ ಅಧಿಕಾರಿಗಳಲ್ಲಿ ಹಾಗೂ ಲೆಕ್ಕಸಹಾಯಕರಲ್ಲಿ ತಿಳಿಸಿದರು.
ಮೆಸ್ಕಾಂನ ಅಧೀಕ್ಷಕ ಎಂಜಿನಿಯರ್‌ನರಸಿಂಹ ಪಂಡಿತ್, ಕಾರ್ಯನಿರ್ವಾಹಕ ಅಭಿಯಂತ ದಿನೇಶ್ ಉಪಾಧ್ಯ, ಮೆಸ್ಕಾಂನ ಹಿರಿಯ ಲೆಕ್ಕಾಧಿಕಾರಿ ಮತ್ತು ಸಹಾಯಕ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.