ನವಲಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ವರದಿ ತಯಾರಿಸಲು ಸಚಿವ ಸಂಪುಟ ಒಪ್ಪಿಗೆ
Team Udayavani, May 17, 2020, 4:45 PM IST
ಬೆಂಗಳೂರು: ಬಹು ನಿರೀಕ್ಷಿತ, ತುಂಗಭದ್ರಾ ಜಲಾಶಯದ ನೀರು ಸಂಗ್ರಹಣಾ ಸಾಮರ್ಥ್ಯದ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ರಾಜ್ಯ ಸರ್ಕಾರ ಹೊಸ ಯೋಜನೆ ರೂಪಿಸಿದೆ. ನವಲಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಸ್ತೃತ ಯೋಜನಾ ವರದಿ ತಯಾರಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ತುಂಗಭದ್ರಾ ಜಲಾಶಯದಲ್ಲಿ ಬಹಳಷ್ಟು ಹೂಳು ತುಂಬಿರುವ ಕಾರಣ ಉಂಟಾಗಿದ್ದ ನೀರು ಸಂಗ್ರಹಣೆಯ ಸಾಮರ್ಥ್ಯ ಸಮಸ್ಯೆಯನ್ನು ನೀಗಿಸಲು ಪರ್ಯಾಯ ಜಲಾಶಯ ನಿರ್ಮಾಣ ಕುರಿತು ವಿಸ್ತೃತ ಯೋಜನಾ ವರದಿ ತಯಾರಿಸಲು ಕರ್ನಾಟಕ ನೀರಾವರಿ ನಿಗಮ ನಿಯಮಿತಕ್ಕೆ ಅನುಮತಿ ನೀಡಿದೆ.
ಪ್ರಸ್ತುತ ತುಂಗಭದ್ರಾ ಜಲಾಶಯದ ನೀರು ಸಂಗ್ರಹಣಾ ಸಾಮರ್ಥ್ಯ 130 ಟಿಎಂಸಿ ಇದ್ದರೂ 31.616 ಟಿಎಂಸಿ ಯಷ್ಟು ನೀರು ಹೂಳು ತುಂಬಿರುವ ಕಾರಣದಿಂದ ಕನಿಷ್ಠ 30 ಟಿಎಂಸಿ ನೀರು ವ್ಯರ್ಥವಾಗುತ್ತಿತ್ತು. ಈ ನೀರನ್ನು ಹಿಡಿದಿಟ್ಟು ಸಮರ್ಪಕವಾಗಿ ಬಳಕೆ ಮಾಡಲು ಮುಂದಾಗಿರುವ ಜಲಸಂಪನ್ಮೂಲ ಇಲಾಖೆ, ಹೊಸದಾಗಿ ಸಮತೋಲನ ಜಲಾಶಯ ನಿರ್ಮಾಣ ಮಾಡುವ ನೂತನ ಯೋಜನೆ ರೂಪಿಸಿದೆ. ಅದರಂತೆ ನವಲಿ ಗ್ರಾಮದ ಹತ್ತಿರ ಹೊಸದಾಗಿ ಸಮತೋಲನ ಜಲಾಶಯ ನಿರ್ಮಾಣಕ್ಕೆ ಸಂಬಂಧಿಸಿ ವಿಸ್ತೃತ ಯೋಜನಾ ವರದಿ ತಯಾರಿಸಲು ಕರ್ನಾಟಕ ನೀರಾವರಿ ನಿಗಮ ನಿಯಮಿತಕ್ಕೆ ಕರ್ನಾಟಕ ರಾಜ್ಯದ ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಈ ಸಮತೋಲನ ಜಲಾಶಯ ನಿರ್ಮಾಣಕ್ಕಾಗಿ ವಿಸ್ತೃತ ಯೋಜನಾ ವರದಿ ತಯಾರಿಸಲು 14.30 ಕೋಟಿ ರೂಪಾಯಿ ಮೊತ್ತದ ಅನುದಾನ ಬಿಡುಗಡೆ ಮಾಡಲು ಇಂದು ಜಲಸಂಪನ್ಮೂಲ ಇಲಾಖೆ ಆದೇಶಿಸಿದೆ.
ಬರದ ಸಮಸ್ಯೆ ನೀಗಿಸಲು ಮತ್ತು ನೀರಿನ ಸಂಗ್ರಹಣಾ ಸಾಮರ್ಥ್ಯ ಹೆಚ್ಚಿಸಲು ಪರ್ಯಾಯ ಸಮತೋಲನ ಜಲಾಶಯದ ಅಗತ್ಯತೆಯನ್ನು ಮನಗಂಡು ಡಿಪಿಆರ್ ಸಮೀಕ್ಷೆ ಮಾಡಲು ಅಂದಾಜು ಮೊತ್ತದ ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಅಭಿನಂದಿಸಿದ್ದಾರೆ.
ರೈತಪರ ಕಾಳಜಿಯುಳ್ಳ ಮುಖ್ಯಮಂತ್ರಿಗಳು ನೀರಾವರಿ ಯೋಜನೆಗಳ ಜಾರಿಗೆ ಕಟಿಬದ್ದರಾಗಿದ್ದಾರೆ. ಹೂಳು ತುಂಬಿದ ತುಂಗಭದ್ರಾ ಜಲಾಶಯದ ನೀರಿನ ಸಂಗ್ರಹಣಾ ಸಮಸ್ಯೆಗೆ ಶಾಶ್ವತ ಪರಿಹಾರ ರೂಪಿಸುವ ದಿಸೆಯಲ್ಲಿ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಿ ಅನುಮತಿ ನೀಡಿದ್ದಾರೆ. ಸಮರ್ಪಕವಾಗಿ ಬೆಳೆ ಬೆಳೆಯಲು ರೈತರಿಗೆ ಅಗತ್ಯವಾದ ನೀರಾವರಿ ಯೋಜನೆಗಳ ಜಾರಿಗೆ ರೈತರಿಗೆ ಸಮರ್ಪಕ ಸಹಕಾರ ಸಿಗಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.